ಕೋವಿಡ್ ಸಂಕಷ್ಟ: ಸರ್ಕಾರಕ್ಕೆ ರೂ.6.50 ಕೋಟಿ ದೇಣಿಗೆ ನೀಡಿದ ನಿಸ್ಸಾನ್ ಇಂಡಿಯಾ
ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಹರಸಾಹಸಪಡುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳೊಂದಿಗೆ ಜೊತೆ ಕೈಜೋಡಿಸಿರುವ ವಿವಿಧ ಆಟೋ ಕಂಪನಿಗಳು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿ ವಿವಿಧ ಸಾಮಾಜಿಕ ಕಾರ್ಯಕ್ರಮಗಳನ್ನು ಕೈಗೊಂಡಿರುವುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಪ್ರಶಂಸೆ ವ್ಯಕ್ತವಾಗಿದೆ.

ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವಿವಿಧ ರಾಜ್ಯ ಸರ್ಕಾರಗಳು ಸೋಂಕು ಹರಡುವಿಕೆಯನ್ನು ತಗ್ಗಿಸಲು ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಸೋಂಕು ಹೆಚ್ಚಿರುವ ನಗರಗಳಲ್ಲಿ ಹೈ ಅಲರ್ಟ್‌ನೊಂದಿಗೆ ಲೌಕ್‌ಡೌನ್ ಮುಂದುವರಿಸಲಾಗುತ್ತಿದೆ. ಹೆಚ್ಚುತ್ತಿರುವ ಕರೋನಾ ವೈರಸ್ ತಡೆಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ವಿವಿಧ ರಾಜ್ಯ ಸರ್ಕಾರಗಳು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೆ ತಂದಿದ್ದು, ಕೊರೋನಾ ನಿಯಂತ್ರಣಕ್ಕೆ ಟಫ್ ರೂಲ್ಸ್ ಅನುಸರಿಸಲಾಗುತ್ತಿದೆ.

ವೈರಸ್ ಹರಡುವಿಕೆ ತೀವ್ರವಾಗಿರುವುದರಿಂದ ಸೋಂಕಿತರಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಲು ವೈದ್ಯಕೀಯ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದ್ದು, ವಿವಿಧ ರಾಜ್ಯ ಸರ್ಕಾರಗಳ ಪ್ರಯತ್ನಕ್ಕೆ ಆಟೋ ಮೊಬೈಲ್ ಕಂಪನಿಗಳು ಸಾಕಷ್ಟು ಸಹಕಾರ ನೀಡುತ್ತಿರುವುದು ಕೂಡಾ ಹೊಸ ಬದಲಾವಣೆಗೆ ಕಾರಣವಾಗಿದೆ.

ಆರ್ಥಿಕ ಸಂಕಷ್ಟದ ನಡುವೆಯೂ ಪ್ರಮುಖ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜೊತೆಗೂಡಿ ಕೋವಿಡ್ ನಿಯಂತ್ರಣಕ್ಕೆ ಸಹಕಾರ ನೀಡುತ್ತಿದ್ದು, ಮ್ಯಾಗ್ನೈಟ್ ಕಾರು ಮಾರಾಟದ ಮೂಲಕ ಉತ್ತಮ ಮಾರುಕಟ್ಟೆ ಕಾಯ್ದುಕೊಳ್ಳುತ್ತಿರುವ ನಿಸ್ಸಾನ್ ಇಂಡಿಯಾ ಕಂಪನಿಯು ಕೂಡಾ ಸರ್ಕಾರಕ್ಕೆ ಸಹಾಯಹಸ್ತಚಾಚಿದೆ.

ಕಳೆದ ವರ್ಷ ಕೋವಿಡ್ ಹೆಚ್ಚಳವಾಗಿದ್ದ ಸಂದರ್ಭದಲ್ಲೂ ಕೇಂದ್ರಕ್ಕೆ ಮತ್ತು ತಮಿಳುನಾಡು ಸರ್ಕಾರಕ್ಕೆ ಸುಮಾರು ರೂ.2.20 ಕೋಟಿ ಆರ್ಥಿಕ ನೆರವು ನೀಡಿದ್ದ ನಿಸ್ಸಾನ್ ಕಂಪನಿಯು ಇದೀಗ 2ನೇ ಅಲೆಯ ಸಂದರ್ಭದಲ್ಲಿ ವೈದ್ಯಕೀಯ ಸೇವೆಗಳಿಗಾಗಿ ರೂ. 4.30 ಕೋಟಿ ದೇಣಿಗೆ ನೀಡಿದ್ದು, ತಮಿಳುನಾಡು ಸರ್ಕಾರಕ್ಕೆ ಹೆಚ್ಚಿನ ನೆರವು ನೀಡಿವೆ.

ಕೋವಿಡ್ 2ನೇ ಅಲೆಯ ನಿಯಂತ್ರಕ್ಕಾಗಿ ತಮಿಳುನಾಡು ಸರ್ಕಾರಕ್ಕೆ ರೂ.4.30 ಕೋಟಿ ದೇಣಿಗೆ ನೀಡುವುದರ ಜೊತೆಗೆ ರೂ.25 ಲಕ್ಷ ಹಣಕಾಸು ನೆರವನ್ನು ಚಂಡಮಾರುತದಿಂದ ತತ್ತರಿಸಿರುವ ಪ್ರದೇಶಗಳ ನೆರವಿಗಾಗಿ ತಮಿಳುನಾಡು ಸಿಎಂ ಪರಿಹಾರ ನಿಧಿಗೆ ದೇಣಿಗೆ ನೀಡಲಾಗಿದೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಇನ್ನು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ(ಸಿಎಸ್‍ಆರ್) ನೀತಿ ಅಡಿಯಲ್ಲಿ ನಿಸ್ಸಾನ್ ಸೇರಿದಂತೆ ಹಲವಾರು ಆಟೋ ಉತ್ಪಾದನಾ ಕಂಪನಿಗಳು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳಿಗೆ ಹೆಚ್ಚಿನ ಮಟ್ಟದ ಹಣಕಾಸಿನ ನೆರವು ನೀಡಿವೆ.

ಕೋವಿಡ್ ನಿಯಂತ್ರಣಕ್ಕಾಗಿ ಪ್ರಮುಖ ವಾಹನ ಕಂಪನಿಗಳು ಹಣಕಾಸು ನೆರವು ನೀಡಿದ್ದಲ್ಲಿ ಇನ್ನು ಕೆಲವು ವಾಹನ ಕಂಪನಿಗಳು ವೈದ್ಯಕೀಯ ಸೇವೆಗಳನ್ನು ಉನ್ನತೀಕರಿಸಲು ವೆಂಟಿಲೇಟರ್ ಉತ್ಪಾದನೆ ಮತ್ತು ಆಕ್ಸಿಜನ್ ಉತ್ಪಾದನೆಗೆ ಸಹಕಾರಿಯಾಗುತ್ತಿರುವುದಲ್ಲದೆ ಕೋವಿಡ್ ಕೇರ್‌ಗಳಿಗೆ ಚಾಲನೆ ನೀಡಿದೆ.
MOST READ: ತಾಯಿಯ ಸಾವಿನ ಸುದ್ದಿ ಕೇಳಿಯೂ ಕರ್ತವ್ಯ ಮುಂದುವರೆಸಿದ ಆಂಬ್ಯುಲೆನ್ಸ್ ಚಾಲಕ

ಸಾಂಕ್ರಾಮಿಕ ರೋಗದಿಂದ ಉಂಟಾಗುತ್ತಿರುವ ಸವಾಲುಗಳನ್ನು ಎದುರಿಸಲು ಆಟೋ ಕಂಪನಿಗಳ ಸಾಮಾಜಿಕ ಕಳಕಳಿಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದ್ದು, ದೇಶಿಯ ವಾಹನ ಉತ್ಪಾದನಾ ಕಂಪನಿಗಳು ಹೆಚ್ಚಿನ ಮಟ್ಟದ ಸಹಕಾರ ನೀಡುತ್ತಿವೆ.


Click it and Unblock the Notifications