Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ನಿಸ್ಸಾನ್ ಇಂಡಿಯಾ(Nissan India) ಕಂಪನಿಯು ಮ್ಯಾಗ್ನೈಟ್(Magnite) ಆವೃತ್ತಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ವೆರಿಯೆಂಟ್ ಶೀಘ್ರದಲ್ಲೇ ಖರೀದಿಗೆ ಲಭ್ಯವಾಗಲಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸುತ್ತಿದ್ದು, ಮೊದಲ ವರ್ಷದ ಸಂಭ್ರಮಕ್ಕಾಗಿ ಹೊಸ ಕಾರಿನಲ್ಲಿ ಕಂಪನಿಯು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ಹೊಸ ಕಾರು ಟಾಪ್ ಎಂಡ್ ಮಾದರಿಗಳಿಗೆ ಸಮನಾಗಿ ಬಿಡುಗಡೆಯಾಗಲಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ವಿ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಸ್ಟ್ಯಾಂಡರ್ಡ್ ಎಕ್ಸ್‌ವಿ ವೆರಿಯೆಂಟ್‌ಗಿಂತಲೂ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯಲ್ಲಿ 16 ಇಂಚಿನ ಡೈಮಂಡ್ ಕಟ್ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಸಿಲ್ವರ್ ಸೈಡ್ ಕ್ಲ್ಯಾಡಿಂಗ್ ಮತ್ತು ಕಾರಿನ ಒಳಭಾಗದಲ್ಲಿ ಕಪ್ ಹೋಲ್ಡರ್‌ಗಳು ಮತ್ತು ಹಿಂಬದಿ ಪ್ರಯಾಣಿಕರಿಗಾಗಿ 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನಗಳನ್ನು ಹೊಂದಿರಲಿದೆ ಎನ್ನಲಾಗಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಇನ್ನುಳಿದಂತೆ ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಎಂಜಿನ್ ಆಯ್ಕೆಯಲ್ಲೂ ಯಾವುದೇ ಬದಲಾವಣೆ ಮಾಡಲಾಗುತ್ತಿಲ್ಲ ಎನ್ನಬಹುದು.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಮ್ಯಾಗ್ನೈಟ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಯೊಂದಿಗೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ತಾಂತ್ರಿಕ ಸೌಲಭ್ಯಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು 10.15 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತ ರೂ. 52 ಸಾವಿರ ಹೆಚ್ಚುವರಿ ದರ ಹೊಂದಬಹುದಾಗಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಹೊಸ ಕಾರು ಮಾದರಿಯು ಬಿಡುಗಡೆಯ ನಂತರ ಇದುವರೆಗೆ ಸುಮಾರು 70 ಸಾವಿಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಉತ್ಪಾದನಾ ಸಾಮರ್ಥ್ಯದ ಆಧಾರದ ಮೇಲೆ ಕಂಪನಿಯು ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಯುನಿಟ್‌ಗಳನ್ನು ವಿತರಣೆ ಮಾಡಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಮ್ಯಾಗ್ನೈಟ್ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯ ನಂತರ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಪಡೆದುಕೊಂಡಿರುವ ನಿಸ್ಸಾನ್ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಮ್ಯಾಗ್ನೈಟ್ ಕಾರು ಮಾದರಿಯು ಪಾತ್ರವಾಗಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮರುಜೀವ ನೀಡಿದೆ ಎಂದರೆ ತಪ್ಪಾಗುವುದಿಲ್ಲ.

Magnite ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ Nissan India

ಹೊಸ ಕಾರು ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

More from DriveSpark

Article Published On: Friday, October 22, 2021, 16:40 [IST]
English summary
Nissan india to introduce new magnite xv executive variant soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+