ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ನಿಸ್ಸಾನ್ ಇಂಡಿಯಾ(Nissan India) ಕಂಪನಿಯು ತನ್ನ ಹೊಸ ಮ್ಯಾಗ್ನೈಟ್(Magnite) ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಅತ್ಯುತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ್ದು, ಹೊಸ ಕಾರು ಬಿಡುಗಡೆಯ ಮೊದಲ ವರ್ಷದ ಸಂಭ್ರಮಕ್ಕಾಗಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಮ್ಯಾಗ್ನೈಟ್ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಯ ಟಾಪ್ ಎಂಡ್ ಮಾದರಿಗಳಿಗೆ ಸಮನಾಗಿ ಬಿಡುಗಡೆಯಾಗಲಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ವಿ ಮಾದರಿಗಿಂತಲೂ ಎಕ್ಸ್‌ವಿ ಎಕ್ಸಿಕ್ಯೂಟಿವ್ ತುಸು ದುಬಾರಿಯಾಗಿರಲಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ನಿಸ್ಸಾನ್ ಕಂಪನಿಯು ಹೊಸ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೆಚ್ಚುವರಿ ಫೀಚರ್ಸ್ ನೀಡಲಿದ್ದು, ಹೊಸ ಆವೃತ್ತಿಯಲ್ಲಿ 16 ಇಂಚಿನ ಡೈಮಂಡ್ ಕಟ್ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಸಿಲ್ವರ್ ಸೈಡ್ ಕ್ಲ್ಯಾಡಿಂಗ್ ಮತ್ತು ಕಾರಿನ ಒಳಭಾಗದಲ್ಲಿ ಕಪ್ ಹೋಲ್ಡರ್‌ಗಳು ಮತ್ತು ಹಿಂಬದಿ ಪ್ರಯಾಣಿಕರಿಗಾಗಿ 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನ ಸೌಲಭ್ಯವಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಇನ್ನುಳಿದಂತೆ ಹೊಸ ಆವೃತ್ತಿಯ ಇತರೆ ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಎಂಜಿನ್ ಆಯ್ಕೆಯಲ್ಲೂ ಯಾವುದೇ ಬದಲಾವಣೆ ಮಾಡಲಾಗುತ್ತಿಲ್ಲ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಮ್ಯಾಗ್ನೈಟ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಯೊಂದಿಗೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ತಾಂತ್ರಿಕ ಸೌಲಭ್ಯಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಹೊಸ ಕಾರು ಆರಂಭಿಕವಾಗಿ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು 10.15 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತ ರೂ. 52 ಸಾವಿರ ಹೆಚ್ಚುವರಿ ದರ ಹೊಂದಬಹುದಾಗಿದೆ.

ಶೀಘ್ರದಲ್ಲೇ ಬಿಡುಗಡೆ ಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಹೊಸ ಕಾರು ಮಾದರಿಯು ಬಿಡುಗಡೆಯ ನಂತರ ಇದುವರೆಗೆ ಸುಮಾರು 72 ಸಾವಿಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಉತ್ಪಾದನಾ ಸಾಮರ್ಥ್ಯದ ಆಧಾರದ ಮೇಲೆ ಕಂಪನಿಯು ಇದುವರೆಗೆ ಸುಮಾರು 30 ಸಾವಿರಕ್ಕೂ ಹೆಚ್ಚು ಯುನಿಟ್‌ಗಳನ್ನು ವಿತರಣೆ ಮಾಡಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಈ ಹಿಂದೆ ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಹೊಸ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸಿದೆ.

ಶೀಘ್ರದಲ್ಲೇ ಬಿಡುಗಡೆ ಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಜೊತೆಗೆ ನಿಸ್ಸಾನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಹೊಸ ಕಾರು ಮಾದರಿಯೊಂದಿಗೆ ವಿದೇಶಿ ಮಾರುಕಟ್ಟೆಗಳಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಶೀಘ್ರದಲ್ಲೇ ಬಿಡುಗಡೆಯಾಗಲಿದೆ ನಿಸ್ಸಾನ್ ಮ್ಯಾಗ್ನೈಟ್ ಮೊದಲ ವರ್ಷದ ವಿಶೇಷ ಆವೃತ್ತಿ

ಭಾರತದಿಂದಲೇ ನಿಸ್ಸಾನ್ ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಮ್ಯಾಗ್ನೈಟ್ ಸೇರಿದಂತೆ ವಿವಿಧ ಕಾರು ಮಾದರಿಗಳನ್ನು ರಫ್ತು ಕೈಗೊಳ್ಳುತ್ತಿದ್ದು, ಇದರಲ್ಲಿ ಹೊಸ ಮ್ಯಾಗ್ನೈಟ್ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

More from DriveSpark

Article Published On: Thursday, December 2, 2021, 8:45 [IST]
English summary
Nissan india to launch magnite xv executive launch soon
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+