ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಬಜೆಟ್ ಬೆಲೆಗಳಲ್ಲಿ ಉತ್ತಮ ಸುರಕ್ಷಾ ಸೌಲಭ್ಯಗಳನ್ನು ಹೊಂದಿರುವ ಕಾರುಗಳ ಖರೀದಿಯು ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಇತ್ತೀಚೆಗೆ ಬಿಡುಗಡೆಯಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯೂ ಕೂಡಾ ಕ್ರ್ಯಾಶ್‌ ಟೆಸ್ಟಿಂಗ್‌ನಲ್ಲಿ ಗರಿಷ್ಠ ರೇಟಿಂಗ್ಸ್ ಪಡೆದುಕೊಳ್ಳುವ ಯಶಸ್ವಿಯಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಭಾರತದಲ್ಲಿ ಹೊಸ ವಾಹನ ಮಾರಾಟ ಹೆಚ್ಚಳದ ನಡುವೆ ವಾಹನಗಳ ಸುರಕ್ಷಾ ರೇಟಿಂಗ್ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಬಜೆಟ್ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಹಲವು ಕಂಪನಿಗಳು ಉತ್ತಮ ಗುಣಮಟ್ಟದ ವಾಹನಗಳನ್ನು ಅಭಿವೃದ್ದಿಪಡಿಸುವಲ್ಲಿ ವಿಫಲವಾಗಿವೆ. ಆದರೆ ಇತ್ತೀಚೆಗೆ ಮಾರುಕಟ್ಟೆಗೆ ಪ್ರವೇಶಿಸಿದ ಕೆಲವು ಹೊಸ ಕಾರು ಮಾದರಿಗಳು ಬಜೆಟ್ ಬೆಲೆಯಲ್ಲೂ ಪ್ರಯಾಣಿಕರ ಸುರಕ್ಷತೆಗೆ ಅಗತ್ಯವಿರುವ ಪ್ರಮುಖ ಫೀಚರ್ಸ್‌ಗಳನ್ನು ಪಡೆದುಕೊಳ್ಳುವ ಮೂಲಕ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿವೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರುಗಳ ಪೈಕಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಸದ್ಯ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಏಷಿಯನ್ ಎನ್‌ಸಿಎಪಿ ಕ್ರ್ಯಾಶ್‌ ಟೆಸ್ಟಿಂಗ್‌ನಲ್ಲಿ ಉತ್ತಮ ರೇಟಿಂಗ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಸದ್ಯ ಭಾರತದಲ್ಲಿ ಮಾತ್ರವೇ ಮಾರಾಟಗೊಳ್ಳುತ್ತಿರುವ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗರಿಷ್ಠ 5 ಸ್ಟಾರ್ ರೇಟಿಂಗ್ಸ್‌ನಲ್ಲಿ 4 ಸ್ಟಾರ್ ರೇಟಿಂಗ್ಸ್ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದು, ಅಪಘಾತಗಳ ವೇಳೆ ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುತ್ತದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಏಷಿಯನ್ ಎನ್‌ಸಿಎಪಿ ಸಂಸ್ಥೆಯ ಕ್ರ್ಯಾಶ್ ಟೆಸ್ಟಿಂಗ್ ಫಲಿತಾಂಶದಲ್ಲಿ ಹೊಸ ಮ್ಯಾಗ್ನೈಟ್ ಕಾರು ಮಾದರಿಯು ವಯಸ್ಕ ಪ್ರಯಾಣಿಕರ ಸುರಕ್ಷತೆಯಲ್ಲಿ 39.02 ಅಂಕ, ಮಕ್ಕಳ ಸುರಕ್ಷತೆಗಾಗಿ 16.32 ಮತ್ತು ಸೇಫ್ಟಿ ಅಸಿಸ್ಟ್ ಫೀಚರ್ಸ್‌ಗಳಿಗಾಗಿ 15.28 ಅಂಕಗಳನ್ನು ಪಡೆದುಕೊಂಡಿದೆ. ಒಟ್ಟಾರೆ ಸುರಕ್ಷಾ ಗುಣಮಟ್ಟ ಮತ್ತು ಅಪಘಾತದ ಸಂದರ್ಭದಲ್ಲಿ ಕಾರಿನಲ್ಲಿರುವ ಪ್ರಯಾಣಿಕರಿಗೆ ಒದಗಿಸಲಾಗುವ ಸುರಕ್ಷಾ ಮಾರ್ಗಸೂಚಿಗಳ ಆಧಾರದ ಮೇಲೆ ಒಟ್ಟು 70.60 ಅಂಕಗಳನ್ನು ನೀಡಲಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಗುಣಮಟ್ಟದ ಕಾರು ಮಾದರಿಯಾಗಿ ಗುರುತಿಸಿಕೊಳ್ಳಲು ಹೊಸ ಕಾರುಗಳು ಕನಿಷ್ಠ 3 ಅಂಕಗಳ ಅವಶ್ಯಕತೆಯಿದ್ದು, 3 ಅಂಕಗಳಿಂತ ಕಡಿಮೆ ರೇಟಿಂಗ್ಸ್ ಪಡೆದುಕೊಂಡಲ್ಲಿ ಅಂತಹ ಕಾರುಗಳನ್ನು ಕಳಪೆ ಕಾರು ಮಾದರಿಯೆಂದು ಪರಿಗಣಿಸಲಾಗುತ್ತದೆ.

ಇದೀಗ ನಿಸ್ಸಾನ್ ಕಂಪನಿಯು ಬಿಡುಗಡೆ ಮಾಡಿರುವ ಹೊಸ ಮ್ಯಾಗ್ನೈಟ್ ಕಾರು ಮಾದರಿಯು 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಮೂಲಕ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಮತ್ತಷ್ಟು ಬೇಡಿಕೆಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಖರೀದಿಗಾಗಿ ಈಗಾಗಲೇ 40 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಜೊತೆಗೆ ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿಕಡಿಮೆ ಬೆಲೆಯೊಂದಿಗೆ ಖರೀದಿಗೆ ಲಭ್ಯವಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಕಾರು ಮಾರಾಟದಲ್ಲಿ ಹೊಸ ದಾಖಲೆಗೆ ಕಾರಣವಾಗಿದೆ.

Most Read Articles

Kannada
English summary
Nissan Magnite ASEAN NCAP Crash Test Results Announced. Read in Kannada.
Story first published: Wednesday, January 20, 2021, 15:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X