Just In
- 6 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 7 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 7 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 7 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Movies "ನಾವು ದಕ್ಷಿಣ ಭಾರತದವರಾಗಿದ್ರೂ ಭಾಷೆ ಬರುತ್ತೆ, ಸುಂದರವಾಗಿಯೂ ಇದ್ದೇವೆ"; ನಟಿ ಪ್ರಿಯಾಮಣಿ
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಸ್ಸಾನ್ ಮ್ಯಾಗ್ನೈಟ್ ಹೊಸ ದಾಖಲೆ- 30 ದಿನಗಳಲ್ಲಿ 30 ಸಾವಿರ ಬುಕ್ಕಿಂಗ್ ದಾಖಲು..!
ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ ಕಾರು ಬಿಡುಗಡೆಯ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಕಂಪನಿಯು ಅತಿ ಕಡಿಮೆ ಅವಧಿಯಲ್ಲಿ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.
ಕಳೆದ ತಿಂಗಳು ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ಮ್ಯಾಗ್ನೈಟ್ ಹೊಸ ಕಾರು ಮಾದರಿಯು ಕೇವಲ 1 ತಿಂಗಳ ಅವಧಿಯಲ್ಲಿ 30 ಸಾವಿರ ಬುಕ್ಕಿಂಗ್ ಪಡೆದುಕೊಂಡಿದ್ದು, ಪ್ರತಿ ದಿನ ಸರಾಸರಿಯಾಗಿ 1 ಸಾವಿರ ಗ್ರಾಹಕರು ಹೊಸ ಕಾರು ಖರೀದಿಗಾಗಿ ಮುಂಗಡ ಪಾವತಿಸಿದ್ದಾರೆ. ಹೊಸ ಕಾರಿನೊಂದಿಗೆ ಹಲವು ದಾಖಲೆಗಳಿಗೆ ಕಾರಣವಾಗಿರುವ ನಿಸ್ಸಾನ್ ಕಂಪನಿಯು ಬುಕ್ಕಿಂಗ್ ಪ್ರಕ್ರಿಯೆ ಅನುಗುಣವಾಗಿ ಕಾರು ಉತ್ಪಾದನೆಯನ್ನು ತೀವ್ರಗೊಳಿಸಿದ್ದು, ಹೊಸ ಕಾರು ಖರೀದಿಗೆ ಹೊಸದಾಗಿ ಬುಕ್ಕಿಂಗ್ ಸಲ್ಲಿಸುವ ಗ್ರಾಹಕರು ಕನಿಷ್ಠ 2 ತಿಂಗಳಿನಿಂದ ಗರಿಷ್ಠ 10 ತಿಂಗಳು ಕಾಯಬೇಕಾದ ಅನಿವಾರ್ಯತೆಗಳಿವೆ.
ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಕೂಡಾ ಅತ್ಯುತ್ತಮ ಫೀಚರ್ಸ್ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ.
ಜೊತೆಗೆ ಮ್ಯಾಗ್ನೈಟ್ ಕಾರಿನ ಟಾಪ್ ಎಂಡ್ ಟರ್ಬೋ ಪೆಟ್ರೋಲ್ ಮಾದರಿಗಾಗಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಸಲ್ಲಿಕೆಯಾಗಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಉತ್ತಮ ಬೆಲೆ ಪೈಪೋಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ಯುವಿ ಜೊತೆಗೆ ಹ್ಯಾಚ್ಬ್ಯಾಕ್ ಕಾರು ಖರೀದಿದಾರರು ಕೂಡಾ ಮ್ಯಾಗ್ನೈಟ್ ಕಾರಿನ ಖರೀದಿಗೆ ಮುಂದಾಗುತ್ತಿದ್ದಾರೆ.
ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಎನ್ನುವ ನಾಲ್ಕು ವೆರಿಯೆಂಟ್ಗಳೊಂದಿಗೆ ಮಾರಾಟಗೊಳ್ಳುತ್ತಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.
1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.
ಜೊತೆಗೆ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.
MOST READ: 2020 ಫ್ಲ್ಯಾಶ್ಬ್ಯಾಕ್: ಭಾರತೀಯ ಆಟೋ ಉದ್ಯಮದಲ್ಲಿ ನಡೆದ ಪ್ರಮುಖ ಘಟನೆಗಳಿವು..
ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸುವ ನೀರಿಕ್ಷೆಯಿದೆ.