ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್(Nissan Magnite) ಕಾರು ಮಾದರಿಯು ಬಿಡುಗಡೆಯ ನಂತರ ಹಲವಾರು ಹೊಸ ದಾಖಲೆಗೆ ಕಾರಣವಾಗುತ್ತಿದ್ದು, ಭಾರತದಲ್ಲಿ ಬಿಡುಗಡೆಯಾದ ನಂತರ ಇದುವರೆಗೆ ಬರೋಬ್ಬರಿ 30 ಸಾವಿರ ಯುನಿಟ್ ವಿತರಣೆಯಾಗಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಇದುವರೆಗೆ ಸುಮಾರು 72 ಸಾವಿರಕ್ಕೂ ಹೆಚ್ಚು ಯುನಿಟ್‌ಗಳಿಗೆ ಬುಕ್ಕಿಂಗ್ ದಾಖಲಾಗಿದ್ದು, ಇದರಲ್ಲಿ 30 ಸಾವಿರ ಯುನಿಟ್ ಕಾರುಗಳನ್ನು ವಿತರಣೆ ಮಾಡಿದೆ. ಹೊಸ ಕಾರು ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.15 ಲಕ್ಷ ಬೆಲೆ ಪಡೆದುಕೊಂಡಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಹೊಸ ಕಾರು ಬಿಡುಗಡೆಯ ಎರಡು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಬೆಲೆ ಹೆಚ್ಚಳ ನಂತರವು ಹೊಸ ಕಾರು ಪ್ರತಿಸ್ಪರ್ಧಿ ಮಾದರಿಗಿಂತಲೂ ಕಡಿಮೆ ದರದಲ್ಲಿ ಮಾರಾಟಗೊಳ್ಳುತ್ತಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಜೊತೆಗೆ ನಿಸ್ಸಾನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮಾತ್ರವಲ್ಲದೆ ಹೊಸ ಕಾರು ಮಾದರಿಯೊಂದಿಗೆ ವಿದೇಶಿ ಮಾರುಕಟ್ಟೆಗಳಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಭಾರತದಿಂದಲೇ ನಿಸ್ಸಾನ್ ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಮ್ಯಾಗ್ನೈಟ್ ಸೇರಿದಂತೆ ವಿವಿಧ ಕಾರುಗಳನ್ನು ರಫ್ತು ಕೈಗೊಳ್ಳುತ್ತಿದ್ದು, ಹೊಸ ಮ್ಯಾಗ್ನೈಟ್ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಾರು ಮಾರಾಟದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆ

ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಿರುವ ರೈಟ್ ಹ್ಯಾಂಡ್ ಮಾದರಿಯ ಜೊತೆಗೆ ಲೆಫ್ಟ್ ಹ್ಯಾಂಡ್ ಮಾದರಿಯನ್ನು ರಫ್ತು ಆರಂಭಿಸಿದ್ದು, ಹೊಸದಾಗಿ ನೇಪಾಳ, ಇಂಡೋನೇಷ್ಯಾ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮಾರಾಟ ಪ್ರಕ್ರಿಯೆ ಆರಂಭಗೊಂಡಿದೆ.

More from DriveSpark

Article Published On: Friday, November 26, 2021, 15:05 [IST]
English summary
Nissan magnite compact suv achieves 30000 delivery milestone
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+