ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮೂಲಕ ಕಾರು ಮಾರಾಟದಲ್ಲಿ ನಿಸ್ಸಾನ್ ಹೊಸ ದಾಖಲೆ

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಸ ಕಾರು ಮಾದರಿಗಳ ಮೂಲತ ದೇಶಿಯ ಮಾರುಕಟ್ಟೆಯಲ್ಲಿ ಕಾರು ಮಾರಾಟ ಪಾಲನ್ನು ಹೆಚ್ಚಿಸಿದ್ದು, ಕಂಪನಿಯ ಹೊಸ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಹೊಸ ದಾಖಲೆಗಳಿಗೆ ಕಾರಣವಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾದ ಒಂದು ವರ್ಷದಲ್ಲಿ ಬರೋಬ್ಬರಿ 75 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಅವಧಿಯಲ್ಲಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ನಿಸ್ಸಾನ್ ನಿರ್ಮಾಣದ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ನಿಸ್ಸಾನ್ ಮಾಗ್ನೈಟ್ ಕಾರು ಮಾದರಿಯು ಮೊದಲ ತಿಂಗಳಿನಲ್ಲೇ ಸುಮಾರು 30 ಸಾವಿರ ಬುಕ್ಕಿಂಗ್ ಪಡೆದುಕೊಂಡಿತ್ತು. ತದನಂತರದ ಅವಧಿಯಲ್ಲಿ ಹೊಸ ಕಾರು ಸುಮಾರು 35 ಸಾವಿರ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರು ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಹೊಸ ಕಾರಿನ ಮೂಲಕ ನಿಸ್ಸಾನ್ ಇಂಡಿಯಾ ದೇಶಿಯ ಮಾರುಕಟ್ಟೆಯಲ್ಲಿ ಒಟ್ಟು ಕಾರು ಮಾರಾಟದಲ್ಲಿ ಶೇ. 1.38ರಷ್ಟು ಪಾಲನ್ನು ತನ್ನದಾಗಿಸಿಕೊಂಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಶೇ. 0.37 ರಷ್ಟು ಇದ್ದ ಮಾರುಕಟ್ಟೆ ಪಾಲು ಇದೀಗ ಸಾಕಷ್ಟು ಏರಿಕೆಯಾಗಿದ್ದು, ಹೊಸ ಕಾರು ಮಾದರಿಯು ನಿಸ್ಸಾನ್ ಇಂಡಿಯಾ ಕಂಪನಿಗೆ ಮರುಜೀವ ನೀಡಿದೆ ಎನ್ನಬಹುದು.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ವಿಶ್ವಾದ್ಯಂತ ಪ್ರಮುಖ ರಾಷ್ಟ್ರಗಳಲ್ಲಿ ಪ್ರತಿ ವರ್ಷ ಲಕ್ಷಾಂತರ ಕಾರುಗಳನ್ನು ಮಾರಾಟ ಮಾಡುವ ನಿಸ್ಸಾನ್ ಕಂಪನಿಯು ಭಾರತದಲ್ಲಿ ಮಾತ್ರ ಸಣ್ಣ ಪ್ರಮಾಣದಲ್ಲಿ ಕಾರು ಮಾರಾಟ ಪಾಲನ್ನು ಹೊಂದಿದ್ದು, ಮಾಗ್ನೈಟ್ ಕಾರು ಮಾದರಿಯು ನಿಸ್ಸಾನ್ ಕಂಪನಿಯ ಮಾರಾಟವನ್ನು ಸುಧಾರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಬಿಡುಗಡೆ ಉತ್ತಮ ಆದಾಯ ತಂದುಕೊಡುತ್ತಿದ್ದು, ಕಂಪನಿಯು ಇದುವರೆಗೆ 75 ಸಾವಿರ ಬುಕ್ಕಿಂಗ್‌ನಲ್ಲಿ ಉತ್ಪಾದನಾ ಸಾಮರ್ಥ್ಯಕ್ಕೆ ಅನುಗುಣವಾಗಿ ಸುಮಾರು 30 ಸಾವಿರಕ್ಕೂ ಹೆಚ್ಚು ಯುನಿಟ್ ವಿತರಣೆ ಮಾಡಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಹೊಸ ಕಾರು ಕೂಡಾ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದ್ದು, ರೆನಾಲ್ಟ್ ಕಿಗರ್ ಜೊತೆ ಪ್ಲ್ಯಾಟ್‌ಫಾರ್ಮ್ ಹಂಚಿಕೊಂಡಿರುವ ಹೊಸ ಕಾರು ಬಜೆಟ್ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 10.15 ಲಕ್ಷ ಬೆಲೆ ಪಡೆದುಕೊಂಡಿದ್ದು, ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಕಳೆದ ಕೆಲ ತಿಂಗಳಿನಿಂದ ಹೊಸ ಕಾರಿನ ಬೆಲೆಯು ತುಸು ಹೆಚ್ಚಳವಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಇನ್ನು ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮೊದಲ ವರ್ಷದ ಸಂಭ್ರಮಕ್ಕಾಗಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಮ್ಯಾಗ್ನೈಟ್ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಯ ಟಾಪ್ ಎಂಡ್ ಮಾದರಿಗಳಿಗೆ ಸಮನಾಗಿ ಬಿಡುಗಡೆಯಾಗಲಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ವಿ ಮಾದರಿಗಿಂತಲೂ ಎಕ್ಸ್‌ವಿ ಎಕ್ಸಿಕ್ಯೂಟಿವ್ ತುಸು ದುಬಾರಿಯಾಗಿರಲಿದೆ.

ನಿಸ್ಸಾನ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ದಾಖಲೆ

ನಿಸ್ಸಾನ್ ಕಂಪನಿಯು ಹೊಸ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೆಚ್ಚುವರಿ ಫೀಚರ್ಸ್ ನೀಡಲಿದ್ದು, ಹೊಸ ಆವೃತ್ತಿಯಲ್ಲಿ 16 ಇಂಚಿನ ಡೈಮಂಡ್ ಕಟ್ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಸಿಲ್ವರ್ ಸೈಡ್ ಕ್ಲ್ಯಾಡಿಂಗ್ ಮತ್ತು ಕಾರಿನ ಒಳಭಾಗದಲ್ಲಿ ಕಪ್ ಹೋಲ್ಡರ್‌ಗಳು ಮತ್ತು ಹಿಂಬದಿ ಪ್ರಯಾಣಿಕರಿಗಾಗಿ 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನ ಸೌಲಭ್ಯವಿದೆ.

Most Read Articles

Kannada
English summary
Nissan magnite compact suv booking crosses 75567 units
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X