ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಸ್ಥಗಿತಗೊಳಿಸಿದ ನಿಸ್ಸಾನ್

ನಿಸ್ಸಾನ್ ಇಂಡಿಯಾ(Nissan India) ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹಲವಾರು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಕಂಪನಿಯು ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹಲವಾರು ಬದಲಾವಣೆಗಳನ್ನು ಪರಿಚಯಿಸಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಹೊಸ ಮ್ಯಾಗ್ನೈಟ್ ಕಾರಿನ ನಿಸ್ಸಾನ್ ಕಂಪನಿಯು ಇದೀಗ ಮಧ್ಯಮ ಕ್ರಮಾಂಕದಲ್ಲಿ ಖರೀದಿಗೆ ಲಭ್ಯವಿದ್ದ ಓನಿಕ್ಸ್ ಬ್ಲ್ಯಾಕ್ ಮತ್ತು ಫ್ಲೇರ್ ಗಾರ್ನೆಟ್ ರೆಡ್ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ತೆಗೆದುಹಾಕಿದ್ದು, ಮೊನೊ ಟೋನ್ ಬಣ್ಣಗಳ ಆಯ್ಕೆಯಲ್ಲಿ ಯಾವುದೇ ಬದಲಾವಣೆ ತರಲಾಗಿಲ್ಲ. ಓನಿಕ್ಸ್ ಬ್ಲ್ಯಾಕ್ ಮತ್ತು ಫ್ಲೇರ್ ಗಾರ್ನೆಟ್ ರೆಡ್ ಸ್ಥಗಿತ ನಂತರ ಹೊಸ ಕಾರು ಐದು ಮೊನೊ ಟೋನ್ ಮತ್ತು ಮೂರು ಡ್ಯುಯಲ್ ಟೋನ್ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಮ್ಯಾಗ್ನೈಟ್ ಕಾರು ಮಾದರಿಯು ಸದ್ಯ ಬ್ಲೇಡ್ ಸಿಲ್ವರ್, ಓನಿಕ್ಸ್ ಬ್ಲಾಕ್, ಫ್ಲೇರ್ ಗಾರ್ನೆಟ್ ರೆಡ್, ಸ್ಯಾಂಡ್‌ಸ್ಟೋನ್ ಬ್ರೌನ್ ಮತ್ತು ಸ್ಟಾರ್ಮ್ ವೈಟ್ ಎನ್ನುವ ಐದು ಬಣ್ಣದ ಆಯ್ಕೆಗಳಲ್ಲಿ ಲಭ್ಯವಿದ್ದು, ವಿವಿಡ್ ಬ್ಲೂ ಜೊತೆ ಸ್ಟಾರ್ಮ್ ವೈಟ್, ಟೂರ್‌ಮ್ಯಾಲಿನ್ ಬ್ರೌನ್‌ನೊಂದಿಗೆ ಓನಿಕ್ಸ್ ಬ್ಲ್ಯಾಕ್ ಮತ್ತು ಪರ್ಲ್ ವೈಟ್‌ನೊಂದಿಗೆ ಓನಿಕ್ಸ್ ಬ್ಲ್ಯಾಕ್ ಎನ್ನುವ ಮೂರು ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ಹೊಂದಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಇನ್ನು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಮುಂಚೂಣಿ ಸಾಧಿಸುತ್ತಿರುವ ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಆವೃತ್ತಿಯಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲು ಸಜ್ಜಾಗುತ್ತಿದ್ದು, ಹೊಸ ವೆರಿಯೆಂಟ್ ಶೀಘ್ರದಲ್ಲೇ ಖರೀದಿಗೆ ಲಭ್ಯವಾಗಲಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಯಶಸ್ವಿಯಾಗಿ ಒಂದು ವರ್ಷ ಪೂರೈಸುತ್ತಿದ್ದು, ಮೊದಲ ವರ್ಷದ ಸಂಭ್ರಮಕ್ಕಾಗಿ ಹೊಸ ಕಾರಿನಲ್ಲಿ ಕಂಪನಿಯು ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ. ಹೊಸ ಕಾರು ಟಾಪ್ ಎಂಡ್ ಮಾದರಿಗಳಿಗೆ ಸಮನಾಗಿ ಬಿಡುಗಡೆಯಾಗಲಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ವಿ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಸ್ಟ್ಯಾಂಡರ್ಡ್ ಎಕ್ಸ್‌ವಿ ವೆರಿಯೆಂಟ್‌ಗಿಂತಲೂ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯಲ್ಲಿ 16 ಇಂಚಿನ ಡೈಮಂಡ್ ಕಟ್ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಸಿಲ್ವರ್ ಸೈಡ್ ಕ್ಲ್ಯಾಡಿಂಗ್ ಮತ್ತು ಕಾರಿನ ಒಳಭಾಗದಲ್ಲಿ ಕಪ್ ಹೋಲ್ಡರ್‌ಗಳು ಮತ್ತು ಹಿಂಬದಿ ಪ್ರಯಾಣಿಕರಿಗಾಗಿ 60:40 ಅನುಪಾತದಲ್ಲಿ ಮಡಿಕೆ ಮಾಡಬಹುದಾದ ಆಸನಗಳನ್ನು ಹೊಂದಿರಲಿದೆ ಎನ್ನಲಾಗಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಇನ್ನುಳಿದಂತೆ ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಎಂಜಿನ್ ಆಯ್ಕೆಯಲ್ಲೂ ಯಾವುದೇ ಬದಲಾವಣೆ ಮಾಡಲಾಗುತ್ತಿಲ್ಲ ಎನ್ನಬಹುದು.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಮ್ಯಾಗ್ನೈಟ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಯೊಂದಿಗೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ತಾಂತ್ರಿಕ ಸೌಲಭ್ಯಗಳೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು 10.15 ಲಕ್ಷ ಬೆಲೆ ಹೊಂದಿದ್ದು, ಹೊಸ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಗಿಂತ ರೂ. 52 ಸಾವಿರ ಹೆಚ್ಚುವರಿ ದರ ಹೊಂದಬಹುದಾಗಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಹೊಸ ಕಾರು ಮಾದರಿಯು ಬಿಡುಗಡೆಯ ನಂತರ ಇದುವರೆಗೆ ಸುಮಾರು 70 ಸಾವಿಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಉತ್ಪಾದನಾ ಸಾಮರ್ಥ್ಯದ ಆಧಾರದ ಮೇಲೆ ಕಂಪನಿಯು ಇದುವರೆಗೆ ಸುಮಾರು 25 ಸಾವಿರಕ್ಕೂ ಹೆಚ್ಚು ಯುನಿಟ್‌ಗಳನ್ನು ವಿತರಣೆ ಮಾಡಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಮ್ಯಾಗ್ನೈಟ್ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಮ್ಯಾಗ್ನೈಟ್ ಕಾರಿನ ಪ್ರಮುಖ ಡ್ಯುಯಲ್ ಟೋನ್ ಬಣ್ಣದ ಆಯ್ಕೆಯನ್ನು ಸ್ಥಗಿತಗೊಳಿಸಿದ ನಿಸ್ಸಾನ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

Most Read Articles

Kannada
English summary
Nissan magnite compact suv dual tone color option discontinued
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X