ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ನಿಸ್ಸಾನ್ ಇಂಡಿಯಾ ಕಂಪನಿಯು ಪೂರ್ವ ನಿಗದಿಯಂತೆ ತನ್ನ ಹೊಸ ಕಾರು ಮಾದರಿಯಾದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಹೊಸ ದರಪಟ್ಟಿಯನ್ನು ಸಹ ಬಿಡುಗಡೆ ಮಾಡಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಹೊಸ ಕಾರು ಬಿಡುಗಡೆಯ ಸಂದರ್ಭದಲ್ಲೇ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆಯನ್ನು ಒಂದು ತಿಂಗಳ ನಂತರ ಹೆಚ್ಚಳ ಮಾಡಲಾಗುವುದಾಗಿ ತಿಳಿಸಿದ್ದ ನಿಸ್ಸಾನ್ ಕಂಪನಿಯು ಇದೀಗ ಪೂರ್ವ ನಿಗದಿಯಂತೆ ಬೆಲೆ ಹೆಚ್ಚಳ ಮಾಡಲಾಗಿದ್ದು, ಹೊಸ ದರಪಟ್ಟಿಯಲ್ಲಿ ಆರಂಭಿಕ ಆವೃತ್ತಿಯಾದ ಮ್ಯಾಗ್ನೈಟ್ ಎಂಟಿ ಎಕ್ಸ್ಇ ಬೆಲೆಯಲ್ಲಿ ರೂ. 50 ಸಾವಿರ ಹೆಚ್ಚಳದೊಂದಿಗೆ ಇನ್ನುಳಿದ ಆವೃತ್ತಿಗಳಲ್ಲಿ ಈ ಹಿಂದಿನ ಬೆಲೆಯನ್ನೇ ಮುಂದುವರಿಸಲಾಗಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಹೊಸ ದರ ನಿಗದಿ ನಂತರ ಮ್ಯಾಗ್ನೈಟ್ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.49 ಲಕ್ಷ ಬೆಲೆ ಪಡೆದುಕೊಂಡಿದ್ದು, ಟಾಪ್ ಎಂಡ್ ಮಾದರಿಯ ಬೆಲೆಯು ರೂ. 9.35 ಲಕ್ಷ ಬೆಲೆ ಪಡೆದುಕೊಂಡಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಮಾಗ್ನೈಟ್ ಟರ್ಬೊ ಸಿವಿಟಿ ಆಪ್ಷನ್ ಮಾದರಿಗಾಗಿ ಗ್ರಾಹಕರು ಹೆಚ್ಚುವರಿಯಾಗಿ ರೂ.24 ಸಾವಿರ ಪಾವತಿ ಮಾಡಬೇಕಿದ್ದು, ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸುವ ನೀರಿಕ್ಷೆಯಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆ ಹೆಚ್ಚಳ ಮಾಡಿದ ನಿಸ್ಸಾನ್

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಉತ್ತಮ ಬೆಲೆ ಪೈಪೋಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರನ್ನು ಕೂಡಾ ಸೆಳೆಯುತ್ತಿದೆ.

Most Read Articles

Kannada
English summary
Nissan Magnite Compact SUV Introductory Prices To Continue. Read in Kannada.
Story first published: Monday, January 4, 2021, 16:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X