Just In
- 1 hr ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 1 hr ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 4 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 17 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
Don't Miss!
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದ ನಂತರ ಇಂಡೋನೇಷ್ಯಾದಲ್ಲೂ ಬಿಡುಗಡೆಯಾದ ನಿಸ್ಸಾನ್ ಮ್ಯಾಗ್ನೈಟ್
ದೇಶಿಯ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಹೊಚ್ಚ ಹೊಸ ಮ್ಯಾಗ್ನೈಟ್ ಕಾರು ಮಾದರಿಯು ಮೊದಲ ಬಾರಿಗೆ ವಿದೇಶಿ ಮಾರುಕಟ್ಟೆಗೆ ಲಗ್ಗೆಯಿಟ್ಟಿದ್ದು, ಹೊಸ ಕಾರು ಭಾರತದಲ್ಲಿ ಬಿಡುಗಡೆಯ ನಂತರ ಇಂಡೋನೇಷ್ಯಾದಲ್ಲೂ ಬಿಡುಗಡೆಯಾಗಿದೆ.
ನಿಸ್ಸಾನ್ ಕಂಪನಿಯು ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಮೂಲಕ ಜಾಗತಿಕ ಮಾರುಕಟ್ಟೆಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಇಂಡೋನೇಷ್ಯಾದಲ್ಲೂ ಹೊಸ ಕಾರಿನ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಿದೆ. ಇಂಡೋನೇಷ್ಯಾದಲ್ಲಿ ಕೇವಲ ಒಂದು ಎಂಜಿನ್ ಆಯ್ಕೆಯಲ್ಲಿ ಪ್ರಮುಖ ಮೂರು ವೆರಿಯೆಂಟ್ ಹೊಂದಿರುವ ಹೊಸ ಕಾರು ಭಾರತೀಯ ರೂಪಾಯಿ ಮೌಲ್ಯದಲ್ಲಿ ರೂ. 10.74 ಲಕ್ಷ ಆರಂಭಿಕ ಬೆಲೆಯೊಂದಿಗೆ ಬಿಡುಗಡೆಯಾಗಿದೆ.
ಇಂಡೋನೇಷ್ಯಾದಲ್ಲಿ ಮಾರಾಟಗೊಳ್ಳುವ ಮ್ಯಾಗ್ನೈಟ್ ಕಾರು ಮಾದರಿಯು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದ್ದು, ಭಾರತದಲ್ಲಿ ಮಾರಾಟವಾಗುವ ಮ್ಯಾಗ್ನೈಟ್ ಕಾರು 1.-0-ಲೀಟರ್ ನ್ಯಾಚುರಲ್ ಆಸ್ಪೆರೆಟೆಡ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ.
ಟರ್ಬೋ ಪೆಟ್ರೋಲ್ ಮಾದರಿಯು ಸದ್ಯ ಭಾರತೀಯ ಮಾರುಕಟ್ಟೆಯಲ್ಲಿ ಆರಂಭಿಕವಾಗಿ ರೂ. 7 ಲಕ್ಷ ಬೆಲೆ ಹೊಂದಿದ್ದು, ಸಾಮಾನ್ಯ ಪೆಟ್ರೋಲ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ರೂ.4.99 ಲಕ್ಷ ಬೆಲೆ ಹೊಂದಿದೆ.
ನಿಸ್ಸಾನ್ ಕಂಪನಿಯು ಸದ್ಯ ಹೊಸ ಕಾರನ್ನು ಭಾರತದಲ್ಲೇ ನಿರ್ಮಾಣ ಮಾಡಿ ವಿದೇಶಿ ಮಾರುಕಟ್ಟೆಗಳಿಗೆ ರಫ್ತು ಮಾಡುವ ಯೋಜನೆಯಲ್ಲಿದ್ದು, ತದನಂತರವಷ್ಟೇ ಇಂಡೋನೇಷ್ಯಾದಲ್ಲಿರುವ ತನ್ನ ಹೊಸ ಕಾರು ಉತ್ಪಾದನಾ ಘಟಕದಲ್ಲೇ ಹೊಸ ಕಾರಿನ ಉತ್ಪಾದನಾ ಮಾಡುವ ಸಿದ್ದತೆಯಲ್ಲಿದೆ. ಹೀಗಾಗಿ ರಫ್ತುಗೊಳ್ಳಲಿರುವ ಹೊಸ ಕಾರು ಮಾದರಿಯು ಸದ್ಯ ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಮಾರಾಟವಾಗಲಿದ್ದು, ಮುಂಬರುವ ದಿನಗಳಲ್ಲಿ ಥೈಲ್ಯಾಂಡ್ ಮತ್ತು ಆಫ್ರಿಕಾದ ಪ್ರಮುಖ ಮಾರುಕಟ್ಟೆಗಳಿಗೂ ಹೊಸ ಕಾರು ಪ್ರವೇಶಿಸಲಿದೆ.
ಇನ್ನು ಮ್ಯಾಗ್ನೈಟ್ ಕಾರು ಮಾದರಿಯು ಬಿಡುಗಡೆಗೊಂಡ ಕೇವಲ ಒಂದು ತಿಂಗಳಿನಲ್ಲಿ ಸುಮಾರು 18 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಸೆಗ್ಮೆಂಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ನಿಸ್ಸಾನ್ ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದೆ.
ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಎನ್ನುವ ನಾಲ್ಕು ವೆರಿಯೆಂಟ್ಗಳೊಂದಿಗೆ ಮಾರಾಟಗೊಳ್ಳುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದ್ದು, ಇದು ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಆಕರ್ಷಕ ಬೆಲೆಯಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿವೆ.
ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಜೊತೆಗೆ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್ನ ಕನೆಕ್ಟ್ ಫೀಚರ್ಸ್ ನೀಡಲಾಗಿದ್ದು, ಈ ಮೂಲಕ ಏಷಿಯನ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 4 ಸ್ಟಾರ್ ಸೇಫ್ಟಿ ರೇಟಿಂಗ್ ಪಡೆದುಕೊಂಡಿದೆ.