ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಬಿಡುಗಡೆಯ ಮೂಲಕ ಹೊಸ ದಾಖಲೆಗೆ ಕಾರಣವಾಗಿರುವ ನಿಸ್ಸಾನ್ ಕಂಪನಿಯು ಅತಿ ಕಡಿಮೆ ಅವಧಿಯಲ್ಲಿ ಭಾರೀ ಪ್ರಮಾಣದ ಬುಕ್ಕಿಂಗ್ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ಮ್ಯಾಗ್ನೈಟ್ ಹೊಸ ಕಾರು ಮಾದರಿಯು ಇದುವರೆಗೆ 40 ಸಾವಿರಕ್ಕಿಂತಲೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ಮಾರ್ಚ್ ಅವಧಿಯಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಪ್ರಮುಖ ಕಾರುಗಳನ್ನು ಹಿಂದಿಕ್ಕಿ ಎಂಟನೇ ಸ್ಥಾನದಲ್ಲಿದೆ. ಮಾರ್ಚ್ ಅವಧಿಯಲ್ಲಿ ಮ್ಯಾಗ್ನೈಟ್ ಕಾರು 2,987 ಯುನಿಟ್ ಮಾರಾಟವಾಗಿದ್ದು, ಇದುವರೆಗೆ ಸುಮಾರು 10 ಸಾವಿರ ಯುನಿಟ್‌ಗಳು ಗ್ರಾಹಕರ ಕೈಸೇರಿವೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಕೂಡಾ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.59 ಲಕ್ಷ ಬೆಲೆ ಪಡೆದುಕೊಂಡಿದ್ದು, ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಇನ್ನಷ್ಟು ಬೇಡಿಕೆ ಪಡೆದುಕೊಳ್ಳುತ್ತಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

ಗ್ರಾಹಕರ ಬೇಡಿಕೆಯೆಂತೆ ಹೊಸ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆದ ನಿಸ್ಸಾನ್ ಮ್ಯಾಗ್ನೈಟ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸಿದೆ.

Most Read Articles

Kannada
English summary
Nissan Magnite Compact-SUV Sales Figures For March 2021. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X