ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ನಿಸ್ಸಾನ್ ಇಂಡಿಯಾ ಕಂಪನಿಯು ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಬೇಡಿಕೆ ಹೆಚ್ಚಳ ಆಧಾರದ ಮೇಲೆ ಕಂಪನಿಯು ಹೊಸ ಕಾರಿನ ಬೆಲೆಯಲ್ಲಿ ಹೆಚ್ಚಳ ಮಾಡಿದೆ.

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ಮಾಗ್ನೈಟ್ ಕಾರಿನ ಬೆಲೆಯನ್ನು ನಿಗದಿಯಂತೆ ಜನವರಿ ಆರಂಭದಲ್ಲಿ ಬೆಲೆ ಹೆಚ್ಚಳ ಮಾಡಿದ್ದ ನಿಸ್ಸಾನ್ ಕಂಪನಿಯು ಮಾರ್ಚ್‌ನಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿತ್ತು. ಇದೀಗ ಮತ್ತೆ ಬೆಲೆ ಹೆಚ್ಚಳ ಮಾಡಲಾಗಿದ್ದು, ಹೊಸ ದರ ಪಟ್ಟಿಯಲ್ಲಿ ಮ್ಯಾಗ್ನೈಟ್ ಕಾರಿನ ಬಹುತೇಕ ವೆರಿಯೆಂಟ್‌ಗಳು ದರ ಹೆಚ್ಚಳ ಪಡೆದುಕೊಂಡಿವೆ. ಮೊದಲ ಬಾರಿಗೆ ಬೆಲೆ ಏರಿಕೆ ಮಾಡಿದ್ದ ಸಂದರ್ಭದಲ್ಲಿ ಬೆಸ್ ವೆರಿಯೆಂಟ್ ಬೆಲೆಯಲ್ಲಿ ಮಾತ್ರ ಬೆಲೆ ಹೆಚ್ಚಳ ಮಾಡಿದ್ದ ನಿಸ್ಸಾನ್ ಕಂಪನಿಯು ಈ ಬಾರಿ ಮಧ್ಯಮ ಕ್ರಮಾಂಕದಲ್ಲಿರುವ ಟರ್ಬೊ ವೆರಿಯೆಂಟ್‌ಗಳ ಬೆಲೆಯನ್ನು ಸಹ ಹೆಚ್ಚಿಸಿದೆ.

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ದರಪಟ್ಟಿಯಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಬೆಲೆಯಲ್ಲಿ ರೂ.9 ಸಾವಿರದಿಂದ ರೂ.33 ಸಾವಿರದಷ್ಟು ಹೆಚ್ಚಳ ಮಾಡಲಾಗಿದ್ದು, ಹೊಸ ಕಾರು ಬೆಲೆಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.59 ಲಕ್ಷದಿಂದ ಟಾಪ್ ಎಂಡ್ ಮಾದರಿಯು 9.90 ಲಕ್ಷ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಮ್ಯಾಗ್ನೈಟ್ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಯೊಂದಿಗೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದರಲ್ಲಿ ಟರ್ಬೊ ಮಾದರಿಗಳ ಬೆಲೆಯಲ್ಲಿ ಮಾತ್ರ ಹೆಚ್ಚಳ ಮಾಡಲಾಗಿದೆ.

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಹೊಸ ದರಪಟ್ಟಿಯು ಹೊಸದಾಗಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಮಾತ್ರ ಎಂದಿರುವ ನಿಸ್ಸಾನ್ ಕಂಪನಿಯು ಈಗಾಗಲೇ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಹೊಸ ಕಾರು ಮಾದರಿಯು ಬಿಡುಗಡೆಯ ನಂತರ ಇದುವರೆಗೆ ಸುಮಾರು 45 ಸಾವಿಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ. ಹೊಸ ಕಾರಿನೊಂದಿಗೆ ಹಲವು ದಾಖಲೆಗಳಿಗೆ ಕಾರಣವಾಗಿರುವ ನಿಸ್ಸಾನ್ ಕಂಪನಿಯು ಬುಕ್ಕಿಂಗ್ ಪ್ರಕ್ರಿಯೆ ಅನುಗುಣವಾಗಿ ಕಾರು ಉತ್ಪಾದನೆಯನ್ನು ಸಹ ತೀವ್ರಗೊಳಿಸಿದ್ದು, ಇದುವರೆಗೆ ಸುಮಾರು 10 ಸಾವಿರ ಯುನಿಟ್ ವಿತರಣೆ ಮಾಡಲಾಗಿದೆ.

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಇನ್ನು ಮ್ಯಾಗ್ನೈಟ್ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಯ ನಂತರ ಮೂರನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸುವ ನೀರಿಕ್ಷೆಯಿದೆ.

Most Read Articles

Kannada
English summary
Nissan Magnite Turbo Price Hike Upto Rs. 33,000. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X