ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ನಿಸ್ಸಾನ್ ಇಂಡಿಯಾ(Nissan India) ಕಂಪನಿಯು ಮ್ಯಾಗ್ನೈಟ್(Magnite) ಕಾರು ಮಾದರಿಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬೇಡಿಕೆ ಹೆಚ್ಚಳ ಆಧಾರದ ಮೇಲೆ ಕಂಪನಿಯು ಹೊಸ ಕಾರಿನ ಬೆಲೆಯಲ್ಲಿ ಏರಿಕೆ ಮಾಡಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ಮಾಗ್ನೈಟ್ ಕಾರಿನ ಬೆಲೆಯನ್ನು ನಿಗದಿಯಂತೆ ಜನವರಿ ಆರಂಭದಲ್ಲಿ ಬೆಲೆ ಹೆಚ್ಚಳ ಮಾಡಿದ್ದ ನಿಸ್ಸಾನ್ ಕಂಪನಿಯು ಮಾರ್ಚ್‌ನಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿತ್ತು. ತದನಂತರ ಕಳೆದ ಜೂನ್‌ನಲ್ಲಿ ಮೂರನೇ ಬಾರಿಗೆ ಮತ್ತು ಇದೀಗ ನಾಲ್ಕನೇ ಬೆಲೆ ಹೆಚ್ಚಳ ಮಾಡಲಾಗಿದ್ದು, ಹೊಸ ದರ ಪಟ್ಟಿಯಲ್ಲಿ ಮ್ಯಾಗ್ನೈಟ್ ಕಾರಿನ ಬಹುತೇಕ ವೆರಿಯೆಂಟ್‌ಗಳು ದರ ಹೆಚ್ಚಳ ಪಡೆದುಕೊಂಡಿವೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನ ಬೆಲೆಯಲ್ಲಿ ಮೊದಲ ಬಾರಿಗೆ ಹೆಚ್ಚಳ ಮಾಡಿದ್ದ ಸಂದರ್ಭದಲ್ಲಿ ಬೆಸ್ ವೆರಿಯೆಂಟ್ ಬೆಲೆಯಲ್ಲಿ ಮಾತ್ರ ಬೆಲೆ ಹೆಚ್ಚಳ ಮಾಡಿದ್ದ ನಿಸ್ಸಾನ್ ಕಂಪನಿಯು ಈ ಬಾರಿ ಮಧ್ಯಮ ಕ್ರಮಾಂಕದಲ್ಲಿರುವ ಟರ್ಬೊ ವೆರಿಯೆಂಟ್‌ಗಳ ಬೆಲೆಯನ್ನು ಸಹ ಹೆಚ್ಚಿಸಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಹೊಸ ದರಪಟ್ಟಿಯಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಬೆಲೆಯಲ್ಲಿ ರೂ.6 ಸಾವಿರದಿಂದ ರೂ.17 ಸಾವಿರದಷ್ಟು ಹೆಚ್ಚಳ ಮಾಡಲಾಗಿದ್ದು, ದರ ಏರಿಕೆ ನಂತರ ಹೊಸ ಕಾರಿನ ಬೆಲೆಯು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.71 ಲಕ್ಷದಿಂದ ಟಾಪ್ ಎಂಡ್ ಮಾದರಿಯು 10.15 ಲಕ್ಷ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಮ್ಯಾಗ್ನೈಟ್ ಕಾರು ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಯೊಂದಿಗೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಇದರಲ್ಲಿ ಟರ್ಬೊ ಮಾದರಿಗಳ ಬೆಲೆಯಲ್ಲಿ ಮಾತ್ರ ಹೆಚ್ಚಳ ಮಾಡಲಾಗಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಹೊಸ ದರಪಟ್ಟಿಯು ಹೊಸದಾಗಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಮಾತ್ರ ಎಂದಿರುವ ನಿಸ್ಸಾನ್ ಕಂಪನಿಯು ಈಗಾಗಲೇ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದು, ಹೊಸ ಕಾರು ಮಾದರಿಯು ಬಿಡುಗಡೆಯ ನಂತರ ಇದುವರೆಗೆ ಸುಮಾರು 65 ಸಾವಿಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದಾರೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರಿನೊಂದಿಗೆ ಹಲವು ದಾಖಲೆಗಳಿಗೆ ಕಾರಣವಾಗಿರುವ ನಿಸ್ಸಾನ್ ಕಂಪನಿಯು ಬುಕ್ಕಿಂಗ್ ಪ್ರಕ್ರಿಯೆ ಅನುಗುಣವಾಗಿ ಕಾರು ಉತ್ಪಾದನೆಯನ್ನು ಸಹ ತೀವ್ರಗೊಳಿಸಿದ್ದು, ಇದುವರೆಗೆ ಸುಮಾರು 20 ಸಾವಿರಕ್ಕೂ ಹೆಚ್ಚು ಯುನಿಟ್ ವಿತರಣೆ ಮಾಡಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಇನ್ನು ಮ್ಯಾಗ್ನೈಟ್ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಬೇಡಿಕೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗಿದೆ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯ ನಂತರ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚಿನ ಮಟ್ಟದ ಬುಕ್ಕಿಂಗ್ ಪಡೆದುಕೊಂಡಿರುವ ನಿಸ್ಸಾನ್ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಮ್ಯಾಗ್ನೈಟ್ ಕಾರು ಮಾದರಿಯು ಪಾತ್ರವಾಗಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮರುಜೀವ ನೀಡಿದೆ ಎಂದರೆ ತಪ್ಪಾಗುವುದಿಲ್ಲ.

ವರ್ಷದಲ್ಲಿ ನಾಲ್ಕನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡ Nissan Magnite ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ವಿನೂತನ ವಿನ್ಯಾಸ ಮತ್ತು ವೈಶಿಷ್ಟ್ಯತೆಗಳೊಂದಿಗೆ ಕಂಪಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

More from DriveSpark

Article Published On: Thursday, October 7, 2021, 15:37 [IST]
English summary
Nissan magnite compact suv price hiked upto 17000 details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+