ಬೇಡಿಕೆ ಹೆಚ್ಚಿದಂತೆ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಕಾಯುವಿಕೆ ಅವಧಿಯಲ್ಲಿ ಮತ್ತಷ್ಟು ಹೆಚ್ಚಳ
ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಸಬ್ ಫೋರ್ ಮೀಟರ್ ವಿನ್ಯಾಸದ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಗೊಂಡ ಕೇವಲ ಒಂದೂವರೆ ತಿಂಗಳ ಅವಧಿಯ ಬರೋಬ್ಬರಿ 35 ಸಾವಿರಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಳ್ಳುವ ಮೂಲಕ ಹೊಸ ದಾಖಲೆಗೆ ಕಾರಣವಾಗಿದೆ.

ಬೇಡಿಕೆ ಹೆಚ್ಚಳವಾಗುತ್ತಿರುವುದರಿಂದ ಹೊಸ ಮ್ಯಾಗ್ನೈಟ್ ಕಾರಿಗಾಗಿ ಬುಕ್ಕಿಂಗ್ ದಾಖಲಿಸಿದ ನಂತರ ಹೊಸ ಕಾರು ಪಡೆದುಕೊಳ್ಳಲು ಗ್ರಾಹಕರು ಕನಿಷ್ಠ 16 ವಾರಗಳಿಂದ ಗರಿಷ್ಠ 40 ವಾರಗಳ ಕಾಯಬೇಕಿದ್ದು, ಸೆಗ್ಮೆಂಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿರುವ ನಿಸ್ಸಾನ್ ಕಾರು ಮಾದರಿಯ ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಬಿಡುಗಡೆಯಾಗಿರುವುದೇ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ. ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ತನ್ನತ್ತ ಸೆಳೆಯುತ್ತಿರುವ ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಸದ್ಯ ಹೊಸ ಕಾರು ಖರೀದಿಗೆ ಬುಕ್ಕಿಂಗ್ ದಾಖಲಿಸುವ ಗ್ರಾಹಕರು ಉತ್ಪಾದನೆ ಆಧಾರದ ಮೇಲೆ ಕನಿಷ್ಠ ನಾಲ್ಕು ತಿಂಗಳಿನಿಂದ ಗರಿಷ್ಠ ಹತ್ತು ತಿಂಗಳ ಕಾಲ ಕಾಯಬೇಕಾದ ಅನಿವಾರ್ಯತೆಯಿದೆ. ಉತ್ಪಾದನೆ ಹೆಚ್ಚಳ ಹೊರತಾಗಿಯೂ ಕಾಯುವಿಕೆಯ ಅವಧಿಯು ಹೆಚ್ಚಳವಾಗುತ್ತಿದ್ದು, ವೆರಿಯೆಂಟ್ ಮತ್ತು ವಿವಿಧ ನಗರಗಳ ಆಧಾರದ ಮೇಲೆ ಕಾಯುವಿಕೆ ಅವಧಿ ನಿರ್ಧಾರವಾಗುತ್ತದೆ.

ಹೊಸ ಕಾರು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಎನ್ನುವ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಹೊಸ ಕಾರು ಕಳೆದ ವಾರ ಬೆಲೆ ಹೆಚ್ಚಳದ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಪಡೆದುಕೊಂಡಿದ್ದು, ಆರಂಭಿಕ ಆವೃತ್ತಿಯು ರೂ. 50 ಸಾವಿರ ಬೆಲೆ ಪಡೆದುಕೊಂಡಿದೆ. ಆರಂಭಿಕ ಮಾದರಿಯ ಬೆಲೆ ಹೆಚ್ಚಳ ಹೊರತಾಗಿ ಇನ್ನುಳಿದ ಆವೃತ್ತಿಗಳ ಬೆಲೆಯನ್ನು ಮೊದಲಿನಂತೆಯೇ ಮುಂದುವರಿಸಲಾಗಿದ್ದು, ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ರೇಟಿಂಗ್ಸ್ ಪಡೆದುಕೊಂಡ ನಂತರ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಇನ್ನು ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದ್ದು, 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದೆ.

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್‌ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.

ಜೊತೆಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್‌ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್‌ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಪ್ರಸ್ತುತ ಮಾರುಕಟ್ಟೆಯಲ್ಲಿ ನಿಸ್ಸಾನ್ ಮಾಗ್ನೈಟ್ ಹೊರತುಪಡಿಸಿ ಬಹುತೇಕ ಪ್ರತಿಸ್ಪರ್ಧಿ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.70 ಲಕ್ಷದಿಂದ ಆರಂಭವಾಗಿ ಟಾಪ್ ಎಂಡ್ ಮಾದರಿಗಳು ರೂ. 12.80 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುತ್ತಿದ್ದು, ಉತ್ತಮ ಬೆಲೆ ಪೈಪೋಟಿಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ಮ್ಯಾಗ್ನೈಟ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರನ್ನು ಕೂಡಾ ಸೆಳೆಯುತ್ತಿದೆ.


Click it and Unblock the Notifications