Just In
- 8 hrs ago
17 ನಗರಗಳಲ್ಲಿ 22 ಫಾಸ್ಟ್ ಚಾರ್ಜಿಂಗ್ ನಿಲ್ದಾಣಗಳನ್ನು ತೆರೆದ ಎಂಜಿ ಮೋಟಾರ್
- 11 hrs ago
ಸಿಟ್ರನ್ 2ನೇ ಕಾರು ಮಾದರಿಯಾಗಿ ಬಿಡುಗಡೆಯಾಗಲಿದೆ ವಿನೂತನ ಮಾದರಿಯ ಕಂಪ್ಯಾಕ್ಟ್ ಎಸ್ಯುವಿ
- 11 hrs ago
ಭಾರತಕ್ಕೆ ಲಗ್ಗೆ ಇಡಲಿದೆ ಐಷಾರಾಮಿ ಫೋಕ್ಸ್ವ್ಯಾಗನ್ ಆರ್ಟಿಯೊನ್ ಕಾರು
- 11 hrs ago
ಎಲೆಕ್ಟ್ರಿಕ್ ವಾಹನಗಳ ಬಗ್ಗೆ ವಿಶೇಷ ಅಭಿಯಾನ ನಡೆಸಲಿದೆ ಆಂಪಿಯರ್ ಎಲೆಕ್ಟ್ರಿಕ್
Don't Miss!
- News
ರೈತರ ಪ್ರತಿಭಟನೆ: ಭಾರತದ ವಿರುದ್ಧ ವಿಶ್ವಸಂಸ್ಥೆ ಮಾನವಹಕ್ಕು ಕಮಿಷನರ್ ಟೀಕೆ
- Lifestyle
ಶನಿವಾರದ ಭವಿಷ್ಯ ಹೇಗಿದೆ ನೋಡಿ
- Movies
ಇವರೇ ನೋಡಿ ಭಟ್ಟರ ಎರಡನೇ ಗಾಳಿಪಟದ ನಾಯಕಿಯರು
- Sports
ಐಎಸ್ಎಲ್: ಕೇರಳಕ್ಕೆ ಸೋಲುಣಿಸಿದ ನಾರ್ಥ್ಈಸ್ಟ್ ಯುನೈಟೆಡ್ ಪ್ಲೇ ಆಫ್ ಗೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಫೆ. 26ರ ಮಾರುಕಟ್ಟೆ ದರ ಇಲ್ಲಿದೆ
- Education
RBI Grade B Admit Card 2021: ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗಣರಾಜ್ಯೋತ್ಸವದ ಸಂಭ್ರಮಕ್ಕಾಗಿ ಮ್ಯಾಗ್ನೈಟ್ ಕಾರಿನೊಂದಿಗೆ ನಿಸ್ಸಾನ್ ಹೊಸ ಅಭಿಯಾನ ಘೋಷಣೆ
ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾಗಿರುವ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್ಯುವಿಯೊಂದಿಗೆ 72ನೇ ಗಣರಾಜ್ಯೋತ್ಸವದ ಸಂಭ್ರಮಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ್ದು, ಮುಂದಿನ ಒಂದು ತಿಂಗಳ ಅವಧಿಗಾಗಿ ತಮ್ಮ ನೆಚ್ಚಿನ ಗ್ರಾಹಕರಿಗೆ ಹಲವಾರು ಉಚಿತ ಕೊಡುಗೆಗಳನ್ನು ನೀಡಲಿದೆ.

ಮ್ಯಾಗ್ನೈಟ್ ಕಾರಿನ ಮೂಲಕ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿರುವ ನಿಸ್ಸಾನ್ ಕಂಪನಿಯು 12ನೇ ಆವೃತ್ತಿಯ ‘ಹ್ಯಾಪಿ ವಿಥ್ ನಿಸ್ಸಾನ್' ಆಫ್ಟರ್ಸೇಲ್ಸ್ ಸೇವಾ ಅಭಿಯಾನವನ್ನು ಒಂದು ತಿಂಗಳ ಕಾಲ ಆಯೋಜಿಸಿದ್ದು, ಆಫ್ಟರ್ಸೇಲ್ಸ್ ಸೇವಾ ಅಭಿಯಾನದಲ್ಲಿ ನಿಸ್ಸಾನ್ ಗ್ರಾಹಕರು ಹಲವು ಉಚಿತ ಸೇವೆಗಳ ಜೊತೆಗೆ ಕೆಲವು ಪ್ರಮುಖ ತಾಂತ್ರಿಕ ಅಂಶಗಳ ಸೇವೆಗಳನ್ನು ಅತಿ ಕಡಿಮೆ ದರದಲ್ಲಿ ಪಡೆದುಕೊಳ್ಳಬಹುದಾಗಿದೆ.

ನಿಸ್ಸಾನ್ ಕಂಪನಿಯು 72ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ತನ್ನ ಹೊಸ ಮ್ಯಾಗ್ನೈಟ್ ಕಾರಿನ ಮೊದಲ ತಿಂಗಳ ವಿತರಣೆ ಸಂಖ್ಯೆಯನ್ನು ಹಂಚಿಕೊಂಡಿದ್ದು, ದೇಶಾದ್ಯಂತ ಇದುವರೆಗೆ 720 ಯುನಿಟ್ ಮ್ಯಾಗ್ನೈಟ್ ಕಾರುಗಳು ಗ್ರಾಹಕರ ಕೈಸೇರಿವೆ.

ಹೊಸ ಮ್ಯಾಗ್ನೈಟ್ ಕಾರು ಬಿಡುಗಡೆಯಾದ ಒಂದೂವರೆ ತಿಂಗಳಿನಲ್ಲಿ ಇದುವರೆಗೆ ಸುಮಾರು 35 ಸಾವಿರ ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಜನವರಿ 1ರಿಂದ ವಿತರಣೆಗೆ ಚಾಲನೆ ನೀಡಿರುವ ಕಂಪನಿಯು ಉತ್ಪಾದನಾ ಸಾಮರ್ಥ್ಯದ ಆಧಾರದ ಮೇಲೆ ಇದುವರೆಗೆ 720 ಯುನಿಟ್ ಮಾರಾಟಗೊಳಿಸಿದೆ.

ಗ್ರಾಹಕರ ಬೇಡಿಕೆಯ ಆಧಾರ ಮೇಲೆ ಕಳೆದ ವಾರದಿಂದ ಉತ್ಪಾದನಾ ಪ್ರಮಾಣವನ್ನು ದ್ವಿಗುಣಗೊಳಿಸಿರುವ ನಿಸ್ಸಾನ್ ಕಂಪನಿಯು ಹೊಸ ಕಾರು ಮಾದರಿಯ ಉತ್ಪಾದನೆ ಹೆಚ್ಚಳಕ್ಕಾಗಿ 1 ಸಾವಿರ ಹೆಚ್ಚುವರಿ ಉದ್ಯೋಗಿಗಳನ್ನು ನೇಮಕಗೊಳಿಸಿದ್ದು, ಹೊಸ ಕಾರಿಗಾಗಿ ಗ್ರಾಹಕರ ಕಾಯುವಿಕೆ ಅವಧಿಯನ್ನು ತಗ್ಗಿಸಲಾಗುತ್ತಿದೆ. ಹೊಸ ಕಾರು ಅತಿ ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್ಗಳನ್ನು ಹೊಂದಿರುವುದೇ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಲು ಪ್ರಮುಖ ಕಾರಣವಾಗಿದೆ.

ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.35 ಲಕ್ಷ ಬೆಲೆ ಹೊಂದಿದ್ದು, ಎನ್ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲೂ ಉತ್ತಮ ರೇಟಿಂಗ್ಸ್ ಪಡೆದುಕೊಂಡಿರುವುದು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಹರಿದುಬರುವ ನೀರಿಕ್ಷೆಯಿದೆ.

ಮ್ಯಾಗ್ನೈಟ್ ಕಾರು ಮಾದರಿಯು ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಎನ್ನುವ ನಾಲ್ಕು ಆವೃತ್ತಿಗಳನ್ನು ಹೊಂದಿರುವ ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದ್ದು, ಕಾರು ಮಾದರಿಗಳಿಗೆ ಅನುಗುಣವಾಗಿ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ನೀಡಲಾಗಿದೆ.

1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಜೊತೆಗೆ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.