Just In
- 40 min ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 1 hr ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 1 hr ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
- 2 hrs ago Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
Don't Miss!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- News ಮೈತ್ರಿ ಹೆಸರಿನಲ್ಲಿ ಬೆನ್ನಿಗೆ ಚೂರಿ ಹಾಕಿದರು; ಎಚ್.ಡಿ. ಕುಮಾರಸ್ವಾಮಿ ಆಕ್ರೋಶ
- Movies Seetha Raama: ಸಿಹಿ ಹುಟ್ಟಿನ ರಹಸ್ಯ ರಾಮನಿಗೆ ತಿಳಿಯುತ್ತಾ? ಭಾರ್ಗವಿಯ ಆಟ ಶುರು
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Lifestyle ವಿಭಿನ್ನ ಶೈಲಿಯಲ್ಲಿ ಮೊಟ್ಟೆ ಸಾಂಬಾರ್ ಮಾಡಿ..! ಇಲ್ಲಿದೆ ಸಿಂಪಲ್ ಅಡುಗೆ
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ರೂ.60 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್
ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ನಿಸ್ಸಾನ್ ಇಂಡಿಯಾ ಕಂಪನಿಯು ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಬೇಡಿಕೆ ಹೆಚ್ಚಳದ ಆಧಾರದ ಮೇಲೆ ಕಂಪನಿಯು ಹೊಸ ಕಾರಿನ ಬೆಲೆಯಲ್ಲಿ ನಿರಂತರ ಬದಲಾವಣೆ ತರುತ್ತಿದೆ.
2020ರ ಡಿಸೆಂಬರ್ 2ರಂದು ಬಿಡುಗಡೆಯಾಗಿದ್ದ ಮಾಗ್ನೈಟ್ ಕಾರಿನ ಬೆಲೆಯನ್ನು ನಿಗದಿಯಂತೆ ಜನವರಿ ಆರಂಭದಲ್ಲಿ ಮೊದಲ ಬಾರಿಗೆ ಬೆಲೆ ಹೆಚ್ಚಳ ಮಾಡಿದ್ದ ನಿಸ್ಸಾನ್ ಕಂಪನಿಯು ಮಾರ್ಚ್ನಲ್ಲಿ ಎರಡನೇ ಬಾರಿಗೆ ಬೆಲೆ ಹೆಚ್ಚಳ ಮಾಡಿತ್ತು. ಇದೀಗ ಏಪ್ರಿಲ್ನಲ್ಲಿ ಮತ್ತೆ ಬೆಲೆ ಹೆಚ್ಚಳ ಮಾಡಲಾಗಿದ್ದು, ಹೊಸ ದರ ಪಟ್ಟಿಯಲ್ಲಿ ಮ್ಯಾಗ್ನೈಟ್ ಕಾರಿನ ಬಹುತೇಕ ವೆರಿಯೆಂಟ್ಗಳು ದರ ಹೆಚ್ಚಳ ಪಡೆದುಕೊಂಡಿವೆ. ಮೊದಲ ಬಾರಿಗೆ ಬೆಲೆ ಏರಿಕೆ ಮಾಡಿದ್ದ ಸಂದರ್ಭದಲ್ಲಿ ಬೆಸ್ ವೆರಿಯೆಂಟ್ ಬೆಲೆಯಲ್ಲಿ ಮಾತ್ರ ಬೆಲೆ ಹೆಚ್ಚಳ ಮಾಡಿದ್ದ ನಿಸ್ಸಾನ್ ಕಂಪನಿಯು ಈ ಬಾರಿ ಮಧ್ಯಮ ಕ್ರಮಾಂಕದಲ್ಲಿರುವ ಟರ್ಬೊ ವೆರಿಯೆಂಟ್ಗಳ ಬೆಲೆಯನ್ನು ಸಹ ಹೆಚ್ಚಿಸಿದೆ.
ಹೊಸ ದರಪಟ್ಟಿಯಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಕಾರಿನ ಬೆಲೆಯಲ್ಲಿ ರೂ.9 ಸಾವಿರದಿಂದ ರೂ.33 ಸಾವಿರದಷ್ಟು ಹೆಚ್ಚಳ ಮಾಡಲಾಗಿದ್ದು, ಹೊಸ ಕಾರು ಬೆಲೆಯು ಸದ್ಯ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 5.59 ಲಕ್ಷದಿಂದ ಟಾಪ್ ಎಂಡ್ ಮಾದರಿಯು 9.90 ಲಕ್ಷ ಬೆಲೆ ಹೆಚ್ಚಳ ಪಡೆದುಕೊಂಡಿದೆ.
ಆರಂಭದಲ್ಲಿ ದೆಹಲಿ ಎಕ್ಸ್ಶೋರೂಂ ಪ್ರಕಾರ ರೂ. 4.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.9.54 ಲಕ್ಷ ಬೆಲೆ ಪಡೆದುಕೊಂಡಿದ್ದ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಇದೀಗ ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಬರೋಬ್ಬರಿ ರೂ.60 ಸಾವಿರದಷ್ಟು ಹೆಚ್ಚುವರಿ ಬೆಲೆ ಪಡೆದುಕೊಂಡಿದೆ.
ಮ್ಯಾಗ್ನೈಟ್ ಕಾರು ಎಕ್ಸ್ಇ, ಎಕ್ಸ್ಎಲ್, ಎಕ್ಸ್ವಿ ಮತ್ತು ಎಕ್ಸ್ವಿ ಪ್ರೀಮಿಯಂ ಆವೃತ್ತಿಯೊಂದಿಗೆ ವಿವಿಧ ವೆರಿಯೆಂಟ್ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಟರ್ಬೊ ಮಾದರಿಗಳ ಬೆಲೆಯಲ್ಲಿ ಹೆಚ್ಚಿನ ಮಟ್ಟದ ದರ ಹೆಚ್ಚಳ ಮಾಡಲಾಗಿದೆ.
ಹೊಸ ಕಾರು ಮಾದರಿಯು ಬಿಡುಗಡೆಯ ನಂತರ ಇದುವರೆಗೆ ಸುಮಾರು 45 ಸಾವಿಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನೊಂದಿಗೆ ಹಲವು ದಾಖಲೆಗಳಿಗೆ ಕಾರಣವಾಗಿರುವ ನಿಸ್ಸಾನ್ ಕಂಪನಿಯು ಬುಕ್ಕಿಂಗ್ ಪ್ರಕ್ರಿಯೆ ಅನುಗುಣವಾಗಿ ಕಾರು ಉತ್ಪಾದನೆಯನ್ನು ಸಹ ತೀವ್ರಗೊಳಿಸಿದೆ.
ಇನ್ನು ಮ್ಯಾಗ್ನೈಟ್ ಕಾರಿನಲ್ಲಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಮಾದರಿಯು ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟಾಪ್ ಎಂಡ್ ಮಾದರಿಗಳಲ್ಲಿ ನೀಡಲಾಗಿರುವ ಹೆಚ್ಆರ್ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದೆ.
1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 70-ಬಿಎಚ್ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಯು 100-ಬಿಎಚ್ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!
ಇದರೊಂದಿಗೆ ಹೊಸ ಕಾರಿನಲ್ಲಿ ಪ್ರೀಮಿಯಂ ಫೀಚರ್ಸ್ಗಳೊಂದಿಗೆ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಸೌಲಭ್ಯಗಳಿವೆ.
ಜೊತೆಗೆ ಡ್ಯುಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಆ್ಯಂಟಿ ರೊಲ್ ಬಾರ್, ಸೀಟ್ ಬೆಲ್ಟ್ ಅಲರ್ಟ್, ಇಮ್ಮೊಬಿಲೈಸರ್ ಮತ್ತು ರಿಯರ್ ಪಾರ್ಕಿಂಗ್ ಕ್ಯಾಮೆರಾ, ವೆಹಿಕಲ್ ಡೈನಾಮಿಕ್ ಕಂಟ್ರೋಲ್, 360 ಡಿಗ್ರಿ ಕ್ಯಾಮೆರಾ, ಲೆದರ್ ವ್ಯಾರ್ಪ್ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್, ಟೈರ್ ಪ್ರೆಷರ್ ಮಾನಿಟರಿಂಗ್ ಮತ್ತು ಬ್ರಾಂಡ್ನ ಕನೆಕ್ಟ್ ಫೀಚರ್ಸ್ ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್ಸಿಎಪಿ ಕ್ರ್ಯಾಶ್ ಟೆಸ್ಟಿಂಗ್ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸುವ ನೀರಿಕ್ಷೆಯಿದೆ.