ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಹೊಸ ವಾಹನಗಳ ಉತ್ಪಾದನೆ ಮತ್ತು ಮಾರಾಟದಲ್ಲಿ ನಿರಂತರವಾಗಿ ಏರಿಳಿತ ಉಂಟಾಗುತ್ತಿದ್ದು, ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆ ಆಟೋ ಉದ್ಯಮಕ್ಕೆ ಭಾರೀ ಹೊಡೆತ ನೀಡುತ್ತಿದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಹೊಸ ತಂತ್ರಜ್ಞಾನ ಪ್ರೇರಿತ ವಾಹನಗಳ ಉತ್ಪಾದನೆಗೆ ಅವಶ್ಯವಾಗಿರುವ ಎಲೆಕ್ಟ್ರಾನಿಕ್ ಚಿಪ್(ಸೆಮಿಕಂಡಕ್ಟರ್) ಕೊರತೆಯು ಜಾಗತಿಕ ಆಟೋ ಉದ್ಯಮದ ಮೇಲೆ ವ್ಯತರಿಕ್ತ ಪರಿಣಾಮ ಬೀರುತ್ತಿದೆ. ಎಲೆಕ್ಟ್ರಾನಿಕ್ ಚಿಪ್ ಕೊರತೆಯಿಂದಾಗಿ ಭಾರತದಲ್ಲಿ ಮಾತ್ರವಲ್ಲ ವಿಶ್ವದ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳಿಗೂ ಬಿಸಿ ತಟ್ಟಿದ್ದು, ಪ್ರಮುಖ ವಾಹನಗಳ ಉತ್ಪಾದನಾ ಪ್ರಮಾಣವು ಗಣನೀಯವಾಗಿ ಇಳಿಕೆಯಾಗಿರುವುದು ಆಟೋ ಉತ್ಪಾದನಾ ಕಂಪನಿಗಳ ಆದಾಯಕ್ಕೆ ಹೊಡೆತ ನೀಡುತ್ತದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಚೀನಿ ಮಾರುಕಟ್ಟೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಆಮದುಗೊಳ್ಳುತ್ತಿದ್ದ ಎಲೆಕ್ಟ್ರಾನಿಕ್ ಚಿಪ್ ಪ್ರಮಾಣವನ್ನು ಕಡಿತಗೊಳಿಸುತ್ತಿರುವುದರಿಂದ ಇತರೆ ದೇಶಗಳಲ್ಲಿನ ಉತ್ಪಾದನಾ ಲಭ್ಯತೆ ಆಧರಿಸಿ ಎಲೆಕ್ಟ್ರಾನಿಕ್ ಬಿಡಿಭಾಗಗಳ ಕೊರತೆಯೂ ಹೆಚ್ಚಳವಾಗುತ್ತಿದ್ದು, ಎಲೆಕ್ಟ್ರಾನಿಕ್ ಚಿಪ್‌ಗಳಿಲ್ಲದೆ ಪ್ರಮುಖ ಕಾರು ಕಂಪನಿಯು ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿವೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಎಲೆಕ್ಟ್ರಾನಿಕ್ ಚಿಪ್ ಇಲ್ಲದೆ ಕಾರಿನ ಪ್ರಮುಖ ಎಲೆಕ್ಟ್ರಾನಿಕ್ ಸಾಧನಗಳನ್ನು ಜೋಡಿಸಲು ಸಾಧ್ಯವಿಲ್ಲ ಎನ್ನಬಹುದು. ಹೊಸ ಕಾರಿನಲ್ಲಿರುವ ಡಿಸ್ ಪ್ಲೇ, ಸ್ಪೀಕರ್, ಸ್ಟ್ಯಾಬಿಲಿಟಿ ಕಂಟ್ರೋಲ್, ಲೈಟಿಂಗ್, ಕಾರ್ ಕನೆಕ್ಟ್ ಫೀಚರ್ಸ್ ಸೇರಿ ಪ್ರಮುಖ ತಾಂತ್ರಿಕ ಸಾಧನಗಳು ಕಾರ್ಯನಿರ್ವಹಿಸಲು ಸೆಮಿ ಕಂಡಕ್ಟರ್ ಅವಶ್ಯವಾಗಿವೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಕೋವಿಡ್ ಪರಿಣಾಮ ಬಿಡಿಭಾಗಗಳ ಪೂರೈಕೆಯ ಸರಪಳಿಯಲ್ಲಿ ಆಗಿರುವ ಸಮಸ್ಯೆಯೇ ಎಲೆಕ್ಟ್ರಾನಿಕ್ ಚಿಪ್ ಕೊರತೆಗೆ ಪ್ರಮುಖ ಕಾರಣವಾಗಿದ್ದು, ಆಟೋ ಉತ್ಪಾದನಾ ಕಂಪನಿಗಳಿಗೆ ಪೂರೈಕೆಯಾಗಬೇಕಿದ್ದ ಹೆಚ್ಚಿನ ಪ್ರಮಾಣದ ಎಲೆಕ್ಟ್ರಾನಿಕ್ ಚಿಪ್ ಸ್ಟಾಕ್ ಇದೀಗ ಹೆಚ್ಚಿನ ಪ್ರಮಾಣದಲ್ಲಿ ಲ್ಯಾಪ್‌ಟಾಪ್‌, ಮೊಬೈಲ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ ಸಾಧನ ಉತ್ಪಾದನೆಗೆ ಹೆಚ್ಚಿನ ಮಟ್ಟದಲ್ಲಿ ಪೂರೈಕೆಯಾಗುತ್ತಿದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಹೀಗಾಗಿ ಎಲೆಕ್ಟ್ರಾನಿಕ್ ಚಿಪ್ ಪೂರೈಕೆಯಲ್ಲಿ ಆಗುತ್ತಿರುವ ವಿಳಂಬವು ವಿಶ್ವಾದ್ಯಂತ ಪ್ರಮುಖ ಕಾರು ಕಂಪನಿಗಳಿಗೆ ಹೊಡೆತ ನೀಡುತ್ತಿದ್ದು, ಜಾಗತಿಕವಾಗಿ ಅಗ್ರ ಕಾರು ಉತ್ಪಾದನಾ ಕಂಪನಿಯಾಗಿ ಗುರುತಿಸಿಕೊಂಡಿರುವ ನಿಸ್ಸಾನ್ ಕಂಪನಿಯು ಸಹ ವಿವಿಧ ರಾಷ್ಟ್ರಗಳಲ್ಲಿನ ತನ್ನ ಪ್ರಮುಖ ಕಾರು ಉತ್ಪಾದನಾ ಘಟಕಗಳ ಉತ್ಪಾದನಾ ಪ್ರಮಾಣವನ್ನು ಕಡಿತಗೊಳಿಸಿದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಸೆಮಿಕಂಡಕ್ಟರ್ ಪೂರೈಕೆ ಸಮಸ್ಯೆ ಬಗೆಹರಿಯುವ ತನಕ ಉತ್ಪಾದನಾ ಪ್ರಮಾಣವನ್ನು ಹೆಚ್ಚಳ ಮಾಡದಿರಲು ನಿರ್ಧರಿಸಿರುವ ನಿಸ್ಸಾನ್ ಕಂಪನಿಯು ಭಾರತದಲ್ಲಿನ ತನ್ನ ಸಹಭಾಗೀತ್ವ ಸಂಸ್ಥೆಯಾದ ರೆನಾಲ್ಟ್ ಕಂಪನಿಯೊಂದಿಗೆ ಕಾರು ಉತ್ಪಾದನಾ ಪ್ರಮಾಣವನ್ನು ತಗ್ಗಿಸಿದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಎಲೆಕ್ಟ್ರಾನಿಕ್ ಚಿಪ್ ಅಗತ್ಯ ಪ್ರಮಾಣದ ಸ್ಟಾಕ್ ಇಲ್ಲದಿರುವ ಕಾರಣಕ್ಕೆ ತನ್ನ ಪ್ರಮುಖ ಕಾರು ಉತ್ಪಾದನಾ ಘಟಕಗಳಲ್ಲಿ ಕೇವಲ ಒಂದೇ ಶಿಫ್ಟ್ ಮೂಲಕ ಉತ್ಪಾದನೆಯನ್ನು ಕೈಗೊಳ್ಳಲಾಗುತ್ತಿದ್ದು, ಕಳೆದ ಕೆಲ ತಿಂಗಳಿನಿಂದ ಕನಿಷ್ಠ ಪ್ರಮಾಣದ ಕಾರು ಉತ್ಪಾದನೆ ಮಾಡಲಾಗುತ್ತಿದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ದೀಪಾವಳಿಗೂ ಮುನ್ನ ಎಲೆಕ್ಟ್ರಿಕ್ ಚಿಪ್ ಹೆಚ್ಚಳ ನೀರಿಕ್ಷೆಯಲ್ಲಿದ್ದ ಆಟೋ ಕಂಪನಿಗಳು ಸಮಸ್ಯೆ ಮತ್ತಷ್ಟು ಹೆಚ್ಚಳವಾಗಿರುವುದರಿಂದ ತೀವ್ರ ಹಿನ್ನಡೆ ಅನುಭವಿಸಿದ್ದು, ಕಳೆದ ಒಂದೂವರೆ ತಿಂಗಳಿನಲ್ಲಿ ಕಾರು ಉತ್ಪಾದನಾ ಪ್ರಮಾಣವು ಶೇ.60ರಿಂದ ಶೇ.80 ರಷ್ಟು ಇಳಿಕೆಯಾಗಿದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಬಿಡಿಬಿಭಾಗಗಳ ಕೊರೆತೆಯು ಹೀಗೆಯೇ ಮುಂದುವರೆದಲ್ಲಿ ಪ್ರಮುಖ ಕಾರು ಕಂಪನಿಗಳು ಅಕ್ಟೋಬರ್ ಮತ್ತು ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಮತ್ತಷ್ಟು ಕುಸಿತ ಕಾಣುವ ಸಾಧ್ಯತೆಗಳಿದ್ದು, ಸೆಮಕಂಡಕ್ಟರ್ ಉತ್ಪಾದನಾ ಕಂಪನಿಗಳ ಮೇಲೆ ಆಟೋ ಉತ್ಪಾದನಾ ಮತ್ತು ಎಲೆಕ್ಟ್ರಿಕ್ ಉತ್ಪನ್ನ ಉತ್ಪಾದನಾ ಕಂಪನಿಗಳು ಒತ್ತಡ ಹೇರುತ್ತಿವೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ವರದಿಗಳ ಪ್ರಕಾರ, ಸೆಮಿ ಕಂಡಕ್ಟರ್ ಉತ್ಪಾದನಾ ಕಂಪನಿಯು ಮುಂಬರುವ ಕೆಲ ತಿಂಗಳಿನಲ್ಲಿ ಪೂರೈಕೆ ಪ್ರಮಾಣವನ್ನು ಹೆಚ್ಚಿಸುವ ಭರವಸೆ ನೀಡಿದ್ದರೂ ಉತ್ಪಾದನಾ ಪ್ರಮಾಣ ಹೆಚ್ಚಳವಾಗಲೂ ಇನ್ನು ಕೆಲವು ತಿಂಗಳುಗಳೇ ಬೇಕಾಗುತ್ತದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಎಲೆಕ್ಟ್ರಾನಿಕ್ ಚಿಪ್ ಕೊರತೆಯು ಈ ವರ್ಷ ಮಾತ್ರವಲ್ಲ ಕಳೆದ ವರ್ಷ ಕೂಡಾ ಕಾರು ಉತ್ಪಾದನೆಗೆ ಹೊಡೆತ ನೀಡಿತ್ತು. ಕಳೆದ ವರ್ಷವು ಎಲೆಕ್ಟ್ರಾನಿಕ್ ಚಿಪ್ ಸ್ಟಾಕ್ ಇಲ್ಲದ ಪರಿಣಾಮ ಪ್ರಮುಖ ಕಾರು ಕಂಪನಿಗಳು ಕೆಲ ವಾರಗಳ ಕಾಲ ಕಾರು ಉತ್ಪಾದನೆಯನ್ನು ಸಂಪೂರ್ಣವಾಗಿ ನಿಲ್ಲಿಸಿದ್ದವು.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಇದೀಗ ಮತ್ತೆ ಎಲೆಕ್ಟ್ರಿಕ್ ಚಿಪ್ ಕೊರತೆಯು ಜಾಗತಿಕವಾಗಿ ಬಿಕ್ಕಟ್ಟು ಎದುರಿಸುತ್ತಿದ್ದು, ಭಾರತದಲ್ಲಿ ವಿವಿಧ ಕಂಪನಿಗಳು ಸೆಮಿಕಂಡಕ್ಟರ್ ಉತ್ಪಾದನಾ ಸೌಲಭ್ಯ ಹೊಂದಿದ್ದರೂ ಸೆಮಿಕಂಡಕ್ಟರ್‌ ಉತ್ಪಾದನೆಗೆ ಬೇಕಿರುವ ವಿವಿಧ ರಾಸಾಯನಿಕ ವಸ್ತುಗಳಿಗೆ ಚೀನಾ ಮತ್ತು ತೈವಾನ್ ಮಾರುಕಟ್ಟೆಯನ್ನು ಅವಲಂಬಿಸಿರುವುದಲ್ಲದೆ ಸಣ್ಣ ಪ್ರಮಾಣದ ಉತ್ಪಾದನಾ ಯುನಿಟ್ ಹೊಂದಿವೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ಇದರಿಂದಾಗಿ ಮುಂಬರುವ ದೀಪಾವಳಿ ಸಂಭ್ರಮದ ವೇಳೆ ಹೊಸ ಕಾರುಗಳನ್ನು ಖರೀದಿಸುವ ಯೋಜನೆಯಲ್ಲಿರುವ ಗ್ರಾಹಕರು ಬುಕ್ಕಿಂಗ್ ನಂತರ ಇನ್ನು ಕೆಲವು ತಿಂಗಳುಗಳ ಕಾಲ ಕಾಯಬೇಕಾದ ಅನಿವಾರ್ಯತೆಗಳಿದ್ದು, ವರದಿಗಳ ಪ್ರಕಾರ, ಭಾರತದಲ್ಲಿ ಸುಮಾರು 4 ಲಕ್ಷದಿಂದ 5 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್ ಮಾಡಲಾದ ಕಾರುಗಳ ವಿತರಣೆಯು ವಿಳಂಬವಾಗಬಹುದಾಗಿದೆ ಎನ್ನಲಾಗಿದೆ.

ಸೆಮಿಕಂಡಕ್ಟರ್ ಕೊರತೆ: Nissan ಕಾರುಗಳ ಉತ್ಪಾದನೆಯಲ್ಲಿ ಮತ್ತಷ್ಟು ಇಳಿಕೆ..

ನಿಸ್ಸಾನ್ ಕಂಪನಿಯು ಸದ್ಯ ಭಾರತದಲ್ಲಿ ಮ್ಯಾಗ್ನೈಟ್, ಕಿಕ್ಸ್ ಕಾರು ಮಾತ್ರವೇ ಮಾರಾಟ ಮಾಡುತ್ತಿದ್ದು, ಮ್ಯಾಗ್ನೈಟ್ ಕಾರು ಮಾದರಿಗೆ ಇದುವರೆಗೆ ಸುಮಾರು 65 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ದಾಖಲಾಗಿದ್ದರೂ ಬುಕ್ಕಿಂಗ್ ಪ್ರಮಾಣದ ಅರ್ಧಷ್ಟು ಕೂಡಾ ವಿತರಣೆಗೊಂಡಿಲ್ಲ.

Article Published On: Saturday, October 23, 2021, 11:25 [IST]
English summary
Nissan planning to cut short global production due to semiconductor shortage crisis
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+