ಭಾರತದಿಂದಲೇ ರಫ್ತುಗೊಳ್ಳಲಿದೆ ಲೆಫ್ಟ್ ಹ್ಯಾಂಡ್ ಡ್ರೈವ್ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ
ನಿಸ್ಸಾನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಶೀಘ್ರದಲ್ಲೇ ವಿದೇಶಿ ಮಾರುಕಟ್ಟೆಗಳಿಗೆ ಮ್ಯಾಗ್ನೈಟ್ ಕಾರನ್ನು ಭಾರತದಿಂದಲೇ ರಫ್ತು ಮಾಡುವ ಗುರಿಹೊಂದಿದೆ.

ಭಾರತದಿಂದಲೇ ನಿಸ್ಸಾನ್ ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಮ್ಯಾಗ್ನೈಟ್ ಸೇರಿದಂತೆ ವಿವಿಧ ಕಾರುಗಳನ್ನು ರಫ್ತು ಕೈಗೊಳ್ಳುತ್ತಿದ್ದು, ಮ್ಯಾಗ್ನೈಟ್ ಕಾರು ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಿರುವ ರೈಟ್ ಹ್ಯಾಂಡ್ ಮಾದರಿಯನ್ನೇ ರಫ್ತುಗೊಳಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಕಂಪನಿಯು ಲೆಫ್ಟ್ ಹ್ಯಾಂಡ್ ಡ್ರೈವ್ ಮಾರುಕಟ್ಟೆಗಳಿಗೂ ಹೊಸ ಕಾರು ಪರಿಚಯಿಸುವ ಸಿದ್ದತೆಯಲ್ಲಿದೆ.

ಸದ್ಯಕ್ಕೆ ರೈಟ್ ಹ್ಯಾಂಡ್ ಮಾಗ್ನೈಟ್ ಕಾರು ಮಾದರಿಯ ಮಾರಾಟವನ್ನು ಮಾತ್ರ ಹೊಂದಿರುವ ಕಂಪನಿಯು ಲೆಫ್ಟ್ ಹ್ಯಾಂಡ್ ಮಾದರಿಯು ಉತ್ಪಾದನೆ ಕೈಗೊಳ್ಳಲಿದ್ದು, ಲೆಫ್ಟ್ ಮಾದರಿಯು ಕೂಡಾ ಭಾರತದಲ್ಲಿಯೇ ಉತ್ಪಾದನೆಗೊಂಡು ರಫ್ತುಗೊಳ್ಳಲಿದೆ.

ಸದ್ಯಕ್ಕೆ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾದ 6 ತಿಂಗಳ ಅವಧಿಯಲ್ಲಿ ಬರೋಬ್ಬರಿ 55 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದ್ದು, ದೇಶಿಯ ಮಾರುಕಟ್ಟೆಯಲ್ಲಿ ಅತಿ ಕಡಿಮೆ ಹೆಚ್ಚು ಅವಧಿಯಲ್ಲಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ನಿಸ್ಸಾನ್ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಕೂಡಾ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ.

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.59 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.90 ಲಕ್ಷ ಬೆಲೆ ಪಡೆದುಕೊಂಡಿದ್ದು, ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಈ ಮೂಲಕ ಹೊಸ ಕಾರು ಕಿಯಾ ಸೊನೆಟ್, ಹ್ಯುಂಡೈ ವೆನ್ಯೂ, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಆವೃತ್ತಿಗಳಿಂತಲೂ ಕಡಿಮೆ ಬೆಲೆಯೊಂದಿಗೆ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಹೊಸ ಕಾರು ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ನಾಲ್ಕು ಸ್ಟಾರ್ ರೇಟಿಂಗ್ ಪಡೆದಕೊಂಡಿರುವುದು ಕೂಡಾ ಮತ್ತಷ್ಟು ಬೇಡಿಕೆ ಹೆಚ್ಚಿಸಿದೆ.


Click it and Unblock the Notifications








