ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಕಳೆದ ವರ್ಷ ಡಿಸೆಂಬರ್‌ನಲ್ಲಿ ನಿಸ್ಸಾನ್ ಇಂಡಿಯಾ ಕಂಪನಿಯು ಭಾರತದಲ್ಲಿ ಮ್ಯಾಗ್ನೈಟ್ ಅನ್ನು ಬಿಡುಗಡೆ ಮಾಡಿತು. ಈ ಚಿಕ್ಕ ಕ್ರಾಸ್ಒವರ್ ತ್ವರಿತವಾಗಿ ಭಾರತೀಯ ಮಾರುಕಟ್ಟೆಯನ್ನು ಬಹುಬೇಡಿಕೆಯನ್ನು ಪಡೆದುಕೊಂಡಿತು. ಇದೀಗ ಕಂಪನಿಯು ಮಾರಾಟದ ಕಾರ್ಯಕ್ಷಮತೆಯನ್ನು ಇನ್ನಷ್ಟು ಸುಧಾರಿಸುವ ಸಲುವಾಗಿ ಭಾರತ-ನಿರ್ದಿಷ್ಟ ಮಾದರಿಗಳೊಂದಿಗೆ ಇಲ್ಲಿ ತನ್ನ ಸರಣಿಯನ್ನು ವಿಸ್ತರಿಸಲು ಯೋಜಿಸುತ್ತಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಇತ್ತೀಚಿನ ವರದಿಯ ಪ್ರಕಾರ, ನಿಸ್ಸಾನ್ ಭಾರತಕ್ಕಾಗಿ ಹೊಸ ಮೂರು-ಸಾಲಿನ ಎಂಪಿವಿಯನ್ನು ಅಭಿವೃದ್ಧಿಪಡಿಸುತ್ತಿದೆ, ಇದರ ಬಗ್ಗೆ ಮಾಹಿತಿಯು ಸದ್ಯಕ್ಕೆ ವಿರಳವಾಗಿದೆ. ಈ ಹೊಸ ಎಂಪಿವಿಯನ್ನು ಕೈಗೆಟುಕುವ ದರದಲ್ಲಿ ಬಿಡುಗಡೆಗೊಳಿಸಬಹುದು ಎಂದು ಹೇಳಲಾಗುತ್ತಿದೆ ಟ್ರೈಬರ್, ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್‌ಗಳಲ್ಲಿ ಈಗಾಗಲೇ ಬಳಸಲಾಗುತ್ತಿರುವ ಸಿಎಂಎಫ್-ಎ ಪ್ಲಾಟ್‌ಫಾರ್ಮ್‌ ಹೊಸ ಎಂಪಿವಿಯು ಆಧರಿಸಿರುತ್ತದೆ. ಏಕೆಂದರೆ ಹೊಸ ಎಂಪಿವಿ ಟ್ರೈಬರ್‌ಗಿಂತ ದೊಡ್ಡದಾಗಿರುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಆಸಿಯಾನ್ ಕ್ರ್ಯಾಶ್ ಪರೀಕ್ಷೆಯಲ್ಲಿ ಮ್ಯಾಗ್ನೈಟ್ 4 ಸ್ಟಾರ್‌ಗಳನ್ನು ಗಳಿಸಿದೆ ಮತ್ತು ರೆನಾಲ್ಟ್ ಕಿಗರ್‌ಗೆ 4-ಸ್ಟಾರ್ ರೇಟಿಂಗ್ ಅನ್ನು ಗುರಿಯಾಗಿಸಿಕೊಂಡಿದೆ ಎಂದು ಪರಿಗಣಿಸಿ ನಾವು ಅದರಿಂದ ಹೊಸ ಎಂಪಿವಿಯು ಉತ್ತಮ ಕ್ರ್ಯಾಶ್ ಟೆಸ್ಟ್ ರೇಟಿಂಗ್ ಅನ್ನು ನಿರೀಕ್ಷಿಸಬಹುದು.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಪವರ್‌ಟ್ರೇನ್ ಆಯ್ಕೆಗಳು ಮ್ಯಾಗ್ನೈಟ್‌ನಂತೆಯೇ ಇರಬೇಕೆಂದು ನಾವು ನಿರೀಕ್ಷಿಸುತ್ತೇವೆ ಇದರಲ್ಲಿ 1.0 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿರಬಹುದು. ಇದರಲ್ಲಿ 1.0 ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಎಂಜಿನ್ 72 ಬಿಹೆಚ್‍ಪಿ ಪವರ್ ಮತ್ತು 96 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಇನ್ನು ಟರ್ಬೋಚಾರ್ಜ್ಡ್ ಎಂಜಿನ್ 100 ಬಿಹೆಚ್‍ಪಿ ಪವರ್ ಮತ್ತು 160 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ.ಗೇರ್ ಬಾಕ್ಸ್ ಆಯ್ಕೆಗಳು ಸಹ ಈಗ ತಿಳಿದಿಲ್ಲ. ಆದರೆ, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಎರಡೂ ಎಂಜಿನ್‌ಗಳಲ್ಲಿ ಸ್ಟ್ಯಾಂಡರ್ಡ್ ಆಗಿರುತ್ತದೆ. ಇನ್ನು ರೆನಾಲ್ಟ್ ಕಿಗರ್‌ನಿಂದ 5-ಸ್ಪೀಡ್ ಎಎಂಟಿ ಗೇರ್ ಬಾಕ್ಸ್ ಅನ್ನು ಪಡೆಯಬಹುದು. ಇದರೊಂದಿಗೆ ಸಿವಿಟಿ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಸದ್ಯಕ್ಕೆ, ಹೊಸ ಎಂಪಿವಿಯ ಬಗ್ಗೆ ಹೆಚ್ಚಿನ ವಿವರಗಳು ತಿಳಿದಿಲ್ಲ. ಈ ಹೊಸ ಎಂಪಿವಿಯು ಯಾವುದೇ ರೋಡ್ ಟೆಸ್ಟ್ ನಡೆಸುವುದು ಕೂಡ ಕಂಡಿಲ್ಲ. ಈ ಹೊಸ ಎಂಪಿವಿಯ ವಿನ್ಯಾಸದ ಬಗ್ಗೆ ನಮಗೆ ಏನೂ ತಿಳಿದಿಲ್ಲ. ಈ ಎಂಪಿವಿಯು ಪ್ರಸ್ತುತ ಅಭಿವೃದ್ಧಿ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಈ ಹೊಸ ಎಂಪಿವಿಯು ಬಿಡುಗಡೆಗೊಂಡರೆ ಮಾರುತಿ ಸುಜುಕಿ ಎರ್ಟಿಗಾ, ಎಕ್ಸ್ಎಲ್ ಮತ್ತು ಮಹೀಂದ್ರಾ ಮರಾಜೋ ಮಾದರಿಗಳಿಗೆ ಪೈಪೋಟಿ ನೀಡುತ್ತದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ನಿಸ್ಸಾನ್ ಇಂಡಿಯಾ ಕಂಪನಿಯು ತನ್ನ ಹೊಸ ಮ್ಯಾಗ್ನೈಟ್ ಕಾರಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ, ಕಂಪನಿಯು ಶೀಘ್ರದಲ್ಲೇ ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯನ್ನು ಬಿಡುಗಡೆ ಮಾಡಲಿದೆ. ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಹೊಸ ಕಾರು ಬಿಡುಗಡೆಯ ಮೊದಲ ವರ್ಷದ ಸಂಭ್ರಮಕ್ಕಾಗಿ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರುವ ಮ್ಯಾಗ್ನೈಟ್ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಮ್ಯಾಗ್ನೈಟ್ ಕಾರಿನ ವಿಶೇಷ ಆವೃತ್ತಿಯು ಸ್ಟ್ಯಾಂಡರ್ಡ್ ಮಾದರಿಯ ಟಾಪ್ ಎಂಡ್ ಮಾದರಿಗಳಿಗೆ ಸಮನಾಗಿ ಬಿಡುಗಡೆಯಾಗಲಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ವಿಶೇಷ ಆವೃತ್ತಿಯು ಸ್ಟ್ಯಾಂಡರ್ಡ್ ಎಕ್ಸ್‌ವಿ ಮಾದರಿಗಿಂತಲೂ ಎಕ್ಸ್‌ವಿ ಎಕ್ಸಿಕ್ಯೂಟಿವ್ ತುಸು ದುಬಾರಿಯಾಗಿರಲಿದೆ. ನಿಸ್ಸಾನ್ ಕಂಪನಿಯು ಹೊಸ ಎಕ್ಸ್‌ವಿ ಎಕ್ಸಿಕ್ಯೂಟಿವ್ ಮಾದರಿಯಲ್ಲಿ ಸ್ಟ್ಯಾಂಡರ್ಡ್ ಮಾದರಿಗಿಂತಲೂ ಕೆಲವು ಹೆಚ್ಚುವರಿ ಫೀಚರ್ಸ್ ನೀಡಲಿದೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಈ ಹೊಸ ವಿಶೇಷ ಆವೃತ್ತಿಯಲ್ಲಿ 16 ಇಂಚಿನ ಡೈಮಂಡ್ ಕಟ್ ಡ್ಯುಯಲ್ ಟೋನ್ ಅಲಾಯ್ ವ್ಹೀಲ್, ಸಿಲ್ವರ್ ಸೈಡ್ ಕ್ಲ್ಯಾಡಿಂಗ್ ಮತ್ತು ಕಾರಿನ ಒಳಭಾಗದಲ್ಲಿ ಕಪ್ ಹೋಲ್ಡರ್‌ಗಳು ಮತ್ತು ಹಿಂಬದಿ ಪ್ರಯಾಣಿಕರಿಗಾಗಿ 60:40 ಅನುಪಾತದಲ್ಲಿ ಮಡಚಬಹುದಾದ ಸೀಟ್ ಅನ್ನು ಹೊಂದಿರುತ್ತದೆ. ಇನ್ನು ಹೊಸ ಸ್ಪೆಷಲ್ ಎಡಿಷನ್ ನಲ್ಲಿ ಇತರೆ ತಾಂತ್ರಿಕ ಅಂಶಗಳು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವಂತೆ ಬಹುತೇಕ ತಾಂತ್ರಿಕ ಸೌಲಭ್ಯಗಳನ್ನು ಹೊಂದಿರಲಿದ್ದು, ಎಂಜಿನ್ ಆಯ್ಕೆಯಲ್ಲೂ ಯಾವುದೇ ಬದಲಾವಣೆ ಮಾಡಲಾಗುತ್ತಿಲ್ಲ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಮ್ಯಾಗ್ನೈಟ್ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಯೊಂದಿಗೆ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದೆ. ಈ ಕಾರಿನಲ್ಲಿ ಸುರಕ್ಷತೆಗಾಗಿ ಐಸೋಫಿಕ್ಸ್ ಸೀಟ್, ಸೆಂಟರ್ ಡೋರ್ ಲಾಕಿಂಗ್, ಸ್ಪೀಡ್ ಸೆನ್ಸಿಂಗ್ ಆಟೋ ಡೋರ್ ಲಾಕ್, ಇಂಪ್ಯಾಕ್ಟ್ ಸೆನ್ಸಿಂಗ್ ಆಟೋ ಡೋರ್ ಅನ್ ಲಾಕ್, ಹಿಲ್ ಸ್ಟಾರ್ಟ್ ಅಸಿಸ್ಟ್, ಟ್ರಾಕ್ಷನ್ ಕಂಟ್ರೋಲ್, ಬ್ರೇಕ್ ಅಸಿಸ್ಟ್, ರಿಮೋಟ್ ಕೀ ಲೆಸ್ ಎಂಟ್ರಿ ಫೀಚರ್ಸ್ ಗಳನ್ನು ಹೊಂದಿವೆ.

ಭಾರತದಲ್ಲಿ ಕೈಗೆಟುಕುವ ದರದಲ್ಲಿ ಬಿಡುಗಡೆಯಾಗಲಿದೆ ಹೊಸ ನಿಸ್ಸಾನ್ 7-ಸೀಟರ್ ಎಂಪಿವಿ

ಭಾರತದಿಂದ ನಿಸ್ಸಾನ್ ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಮ್ಯಾಗ್ನೈಟ್ ಸೇರಿದಂತೆ ವಿವಿಧ ಕಾರುಗಳನ್ನು ರಫ್ತು ಮಾಡಲಾಗುತ್ತಿದೆ. ಇನ್ನು ಹೊಸ ನಿಸ್ಸಾನ್ 7-ಸೀಟರ್ ಎಂಪಿವಿಯ ಬಗ್ಗೆ ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿಗಳು ಬಹಿರಂಗವಾಗಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
Nissan planning to launch a new mpv model details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X