ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ನಿಸ್ಸಾನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಕಂಪನಿಯು ಹೊಸ ಕಾರು ಮಾದರಿಯೊಂದಿಗೆ ವಿದೇಶಿ ಮಾರುಕಟ್ಟೆಗಳಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ಭಾರತದಿಂದಲೇ ನಿಸ್ಸಾನ್ ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ಮ್ಯಾಗ್ನೈಟ್ ಸೇರಿದಂತೆ ವಿವಿಧ ಕಾರುಗಳನ್ನು ರಫ್ತು ಕೈಗೊಳ್ಳುತ್ತಿದ್ದು, ಹೊಸ ಮ್ಯಾಗ್ನೈಟ್ ಕಾರು ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ. ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಿರುವ ರೈಟ್ ಹ್ಯಾಂಡ್ ಮಾದರಿಯ ಜೊತೆಗೆ ಲೆಫ್ಟ್ ಹ್ಯಾಂಡ್ ಮಾದರಿಯನ್ನು ರಫ್ತು ಆರಂಭಿಸಿದ್ದು, ಹೊಸದಾಗಿ ನೇಪಾಳ, ಇಂಡೋನೇಷ್ಯಾ ಮತ್ತು ದಕ್ಷಿಣ ಆಫ್ರಿಕಾದಲ್ಲಿ ಮಾರಾಟ ಪ್ರಕ್ರಿಯೆ ಆರಂಭಗೊಂಡಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಭಾರತದಲ್ಲಿ ಬಿಡುಗಡೆಯಾದ 7 ತಿಂಗಳ ಅವಧಿಯಲ್ಲಿ ಬರೋಬ್ಬರಿ 60 ಸಾವಿರಕ್ಕೂ ಹೆಚ್ಚು ಬುಕ್ಕಿಂಗ್ ಪಡೆದುಕೊಂಡಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ದೇಶಿಯ ಮಾರುಕಟ್ಟೆಯಲ್ಲಿ ಅತಿ ಕಡಿಮೆ ಅವಧಿಯಲ್ಲಿ ಹೆಚ್ಚು ಬುಕ್ಕಿಂಗ್ ಪಡೆದುಕೊಂಡ ನಿಸ್ಸಾನ್ ಮೊದಲ ಕಾರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಉತ್ಪಾದನಾ ಸಾಮರ್ಥ್ಯದ ಮೇಲೆ ಇದುವರೆಗೆ ಹೊಸ ಕಾರಿನ 15 ಸಾವಿರ ಯುನಿಟ್ ವಿತರಣೆ ಮಾಡಲಾಗಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ಪ್ರತಿ ತಿಂಗಳು 2 ಸಾವಿರದಿಂದ 2,500 ಯುನಿಟ್ ಉತ್ಪಾದನಾ ಸಾಮರ್ಥ್ಯ ಹೊಂದಿರುವುದರಿಂದ ವಿತರಣೆ ಪ್ರಕ್ರಿಯೆಯು ನಿಧಾನವಾಗುತ್ತಿದ್ದು, ರಫ್ತು ಪ್ರಕ್ರಿಯೆ ಆರಂಭವಾಗರುವುದರಿಂದ ಕಂಪನಿಯು ಮುಂಬರುವ ದಿನಗಳಲ್ಲಿ ಕಾರಿನ ಉತ್ಪಾದನಾ ಪ್ರಮಾಣ ಹೆಚ್ಚಸುವ ಯೋಜನೆಯಲ್ಲದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ಇನ್ನು ಗ್ರಾಹಕರ ಬೇಡಿಕೆಯೆಂತೆ ವಿವಿಧ ಕಾರು ಮಾದರಿಗಳ ಮಾರಾಟ ಹೊಂದಿದ್ದರೂ ಕೂಡಾ ಸತತ ಹಿನ್ನಡೆ ಅನುಭವಿಸಿದ್ದ ನಿಸ್ಸಾನ್ ಕಂಪನಿಗೆ ಮ್ಯಾಗ್ನೈಟ್ ಕಾರು ಮಾದರಿಯು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ಹೊಸ ಕಾರು ಕೂಡಾ ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ಮಾರಾಟವಾಗುತ್ತಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.59 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.90 ಲಕ್ಷ ಬೆಲೆ ಪಡೆದುಕೊಂಡಿದ್ದು, ಬಿಡಿಭಾಗಗಳ ಬೆಲೆ ಹೆಚ್ಚಳ ಹಿನ್ನಲೆಯಲ್ಲಿ ಕಳೆದ ಎರಡು ತಿಂಗಳ ಅವಧಿಯಲ್ಲಿ ಎರಡು ಬಾರಿ ಬೆಲೆ ಹೆಚ್ಚಳ ಪಡೆದುಕೊಂಡಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ಎನ್‌ಸಿಎಪಿ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಉತ್ತಮ ಸೇಫ್ಟಿ ರೇಟಿಂಗ್ಸ್ ಪಡೆದುಕೊಂಡ ನಂತರ ಹೊಸ ಕಾರು ಮತ್ತಷ್ಟು ಬೇಡಿಕೆ ಪಡೆದುಕೊಳ್ಳುತ್ತಿದ್ದು, ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಲ್, ಎಕ್ಸ್‌ವಿ ಮತ್ತು ಎಕ್ಸ್‌ವಿ ಪ್ರೀಮಿಯಂ ಆವೃತ್ತಿಗಳೊಂದಿಗೆ ಮಾರಾಟಗೊಳ್ಳುತ್ತಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

ಮ್ಯಾಗ್ನೈಟ್ ಕಾರಿನಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ 1.0-ಲೀಟರ್ ಬಿ4ಡಿ ಪೆಟ್ರೋಲ್ ಎಂಜಿನ್ ಮತ್ತು ಹೆಚ್ಆರ್‌ಎಓ 1.0-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳನ್ನು ಜೋಡಣೆ ಮಾಡಲಾಗಿದೆ.

ಭಾರತದಿಂದ ಮ್ಯಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ರಫ್ತು ಆರಂಭಿಸಿದ ನಿಸ್ಸಾನ್

1.0-ಲೀಟರ್ ನ್ಯಾಚುರಲಿ ಆಸ್ಪೆರೆಟೆಡ್ ಪೆಟ್ರೋಲ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ 70-ಬಿಎಚ್‌ಪಿ, 96-ಎನ್ಎಂ ಟಾರ್ಕ್ ಉತ್ಪಾದನೆ ಮಾಡಲಿದ್ದರೆ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್‌ನೊಂದಿಗೆ 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಎಕ್ಸ್-ಟ್ರಾನಿಕ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 100-ಬಿಎಚ್‌ಪಿ, 160-ಎನ್ಎಂ ಟಾರ್ಕ್ ಉತ್ಪಾದನೆ ಮಾಡುತ್ತದೆ.

Most Read Articles

Kannada
English summary
Nissan India Sarted To Exporting Magnite Sub Compact SUV. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X