ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ನಿಸ್ಸಾನ್ ಕಂಪನಿಯು ತನ್ನ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯನ್ನು ಚೀನಾದಲ್ಲಿ ನಡೆಯುತ್ತಿರುವ ಶಾಂಘೈ ಆಟೋ ಶೋನಲ್ಲಿ ಅನಾವರಣಗೊಳಿಸಿದೆ. ಈ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯು ಸುಧಾರಿತ ತಂತ್ರಜ್ಞಾನಗಳು, ಟರ್ಬೋಚಾರ್ಜ್ಡ್ ಎಂಜಿನ್ ಮತ್ತು ಆಕರ್ಷಕ ವಿನ್ಯಾಸವನ್ನು ಒಳಗೊಂಡ ನಾಲ್ಕನೇ ತಲೆಮಾರಿನ ಮಾದರಿಯಾಗಿದೆ.

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಈ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯು ಮೊದಲ ಬಾರಿಗೆ ಚೀನಾದಲ್ಲಿ ಬಿಡುಗಡೆಯಾಗಲಿದ್ದು, ನಂತರ ಯುರೋಪ್ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿದೆ. ಚೀನಾ -ಸ್ಪೆಕ್ ಮಾದರಿಯು 2.5 ಎಲ್ ಸಿಲಿಂಡರ್ ಮೋಟರ್ ಬದಲಿಗೆ ಹೊಸ 1.5ಎಲ್, 3-ಸಿಲಿಂಡರ್ ಟರ್ಬೋಚಾರ್ಜ್ಡ್ ಎಂಜಿನ್‌ನೊಂದಿಗೆ ಬರಲಿದೆ. ಕಡಿಮೆ ಇಂಧನ ಬಳಕೆ ಮತ್ತು ಹೆಚ್ಚಿನ ಕಾರ್ಯಕ್ಷಮತೆಯನ್ನು ಖಾತ್ರಿಪಡಿಸುವ ನಿಸ್ಸಾನ್‌ನ ವಿಸಿ-ಟರ್ಬೊ (ವೇರಿಯಬಲ್ ಕಂಪ್ರೆಷನ್) ತಂತ್ರಜ್ಞಾನದೊಂದಿಗೆ ಹೊಸ ಎಂಜಿನ್ ಅನ್ನು ಇರಿಸಲಾಗಿದೆ

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಈ ಎಂಜಿನ್ 204 ಬಿಹೆಚ್‍ಪಿ ಪವರ್ ಮತ್ತು 300 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು ಎಂಜಿನ್ ನೊಂದಿಗೆ ಸುಧಾರಿತ ಎಕ್ಸ್‌ಟ್ರಾನಿಕ್ ಸಿವಿಟಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ ಅನ್ನು ಜೋಡಿಸಲಾಗಿದೆ. ಇನ್ನು ಈ ಹೊಸ ಎಸ್‍ಯುವಿಯಲ್ಲಿ ಎಡಬ್ಲ್ಯೂಡಿ (ಆಲ್-ವ್ಹೀಲ್-ಡ್ರೈವ್ ಸಿಸ್ಟಂ) ಅನ್ನು ಕೂಡ ನೀಡಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಯುರೋಪ್ ಮಾರುಕಟ್ಟೆಗಳಲ್ಲಿ ಬಿಡುಗಡೆಯಾಗಲಿರುವ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯು ಎಲೆಕ್ಟ್ರಿಕ್ ಪವರ್‌ಟ್ರೇನ್ ಅನ್ನು ಪಡೆಯುತ್ತದೆ. ಆದರೆ ಇದರ ಬಗ್ಗೆ ಅಧಿಕೃತ ವಿವರಗಳು ಇನ್ನೂ ಬಹಿರಂಗಗೊಂಡಿಲ್ಲ.

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಇನ್ನು ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ140 ಕಿ.ವ್ಯಾಟ್ ಎಲೆಕ್ಟ್ರಿಕ್ ಮೋಟರ್ ಮತ್ತು 1.5 ಎಲ್ ವೇರಿಯಬಲ್ ಕಂಪ್ರೆಷನ್ ಎಂಜಿನ್ ಅನ್ನು ಹೊಂದಿರುತ್ತದೆ. ಈ ಎಂಜಿನ್ ನಿಸ್ಸಾನ್ ಲೀಫ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ನಂತೆಯೇ, ಇದು 'ಇ-ಪೆಡಲ್'ಒನ್-ಪೆಡಲ್ ಕಾರ್ಯಾಚರಣೆಯ ಸಾಮರ್ಥ್ಯವನ್ನು ಹೊಂದಿದೆ.

MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯು ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ನವೀಕರಿಸಿದ ಸಿಎಮ್ಎಫ್-ಸಿ ಪ್ಲಾಟ್‌ಫಾರ್ಮ್‌ನಲ್ಲಿದೆ, ಇದು ಹಲವಾರು ರೆನಾಲ್ಟ್ ಮತ್ತು ಮಿತ್ಸುಬಿಷಿ ಕಾರುಗಳಿಗೆ ಸಹ ಆಧಾರವಾಗಿದೆ.

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯು ಕನೆಕ್ಟ್ ಡಿಸ್ ಪ್ಲೇಯನ್ನು ಹೊಂದಿರುವ ಯುಎಸ್ ಮಾದರಿಯಂತಲ್ಲದೆ, ಚೀನಾ-ಸ್ಪೆಕ್ ಹೊಸ ಎಕ್ಸ್-ಟ್ರಯಲ್ 12.3-ಇಂಚಿನ ದೊಡ್ಡ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಪಡೆಯುತ್ತದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಇನ್ನು 10.8-ಇಂಚಿನ ಹೆಡ್-ಅಪ್ ಡಿಸ್ಪ್ಲೇ ಮತ್ತು 12.3-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಡಿಸ್ ಪ್ಲೇಯನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯು ಪ್ರೊಪೈಲಟ್ ಸೆಮಿ-ಆಟೋನೊಮಸ್ ಡ್ರೈವಿಂಗ್ ಫಂಕ್ಷನ್, ಟ್ರಿಪಲ್-ಜೋನ್ ಆಟೋಮ್ಯಾಟಿಕ್ ಕ್ಲೈಂಮೇಟ್ ಕಂಟ್ರೋಲ್ ಅನ್ನು ಸಹ ಪಡೆಯುತ್ತದೆ.

ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಅನಾವರಣಗೊಂಡ ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿ

ಹೊಸ ನಿಸ್ಸಾನ್ ಎಕ್ಸ್-ಟ್ರಯಲ್ ಎಸ್‍ಯುವಿಯ ಹೊರಭಾಗದಲ್ಲಿ ದೊಡ್ಡ ವಿ-ಮೋಷನ್ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಹೆಡ್ ಲ್ಯಾಂಪ್, ಫ್ಲೋಟಿಂಗ್ ರೂಫ್ ರೈಲ್ ಮತ್ತು ಸ್ಲಿಮ್ ಟ್ರೆಪೆಜಾಯಿಡಲ್ ಟೈಲ್ ಲ್ಯಾಂಪ್ ಗಳನ್ನು ಒಳಗೊಂಡಿದೆ.

Most Read Articles

Kannada
English summary
Nissan X-Trail Revealed. Read In Kannada.
Story first published: Wednesday, April 21, 2021, 21:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X