Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್‌ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಡ್ಡಾಯವಾಗಿ ಎಲೆಕ್ಟ್ರಿಕ್ ವಾಹನ ಬಳಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ ಸಾರಿಗೆ ಸಚಿವ
ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿರವರು ತಮ್ಮ ಇಲಾಖೆಯ ಎಲ್ಲಾ ಅಧಿಕಾರಿಗಳಿಗೆ ಎಲೆಕ್ಟ್ರಿಕ್ ವಾಹನಗಳನ್ನು ಕಡ್ಡಾಯವಾಗಿ ಬಳಸುವಂತೆ ಸೂಚನೆ ನೀಡಿದ್ದಾರೆ. ದೇಶದಲ್ಲಿ ವಾಹನಗಳಿಂದ ವಾಯುಮಾಲಿನ್ಯವು ಹೆಚ್ಚುತ್ತಿರುವುದರಿಂದ ಇದಕ್ಕೆ ಪರಿಹಾರ ನೀಡುವುದು ಸವಾಲಿನ ಕೆಲಸವಾಗಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ದೇಶದ ಆದಾಯದ ಬಹುಪಾಲು ಭಾಗವನ್ನು ಪೆಟ್ರೋಲಿಯಂ ಆಮದಿಗಾಗಿ ಖರ್ಚು ಮಾಡಲಾಗುತ್ತಿದೆ ಎಂದು ಅವರು ಹೇಳಿದರು. ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದಾಗಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಅವಲಂಬನೆ ಕಡಿಮೆಯಾಗಲಿದೆ. ಜೊತೆಗೆ ವಾಯು ಮಾಲಿನ್ಯವು ಕಡಿಮೆಯಾಗುತ್ತದೆ ಎಂದು ಅವರು ಹೇಳಿದರು.

ದೇಶದಲ್ಲಿ ಪ್ರತಿ ವರ್ಷ 8 ಲಕ್ಷ ಕೋಟಿ ಪೆಟ್ರೋಲಿಯಂ ಆಮದು ಮಾಡಿಕೊಳ್ಳಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದರು. ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ಎಲೆಕ್ಟ್ರಿಕ್ ವಾಹನಗಳ ಚಾಲನೆಗೆ ಕಡಿಮೆ ಖರ್ಚಾಗುತ್ತದೆ ಎಂದು ಗಡ್ಕರಿ ಹೇಳಿದರು.
MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಕೃಷಿ ಹಾಗೂ ನಿರ್ಮಾಣ ಕ್ಷೇತ್ರದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಅವರು ಹೇಳಿದರು. ಕೃಷಿಯಲ್ಲಿ ಎಲೆಕ್ಟ್ರಿಕ್ ಟ್ರಾಕ್ಟರ್ ಹಾಗೂ ಉಪಕರಣಗಳನ್ನು ಬಳಸುವುದರಿಂದ ಡೀಸೆಲ್ ವೆಚ್ಚವನ್ನು ಕಡಿಮೆ ಮಾಡಬಹುದು.

ಇದರಿಂದ ರೈತರ ಆದಾಯ ಹೆಚ್ಚಾಗುತ್ತದೆ ಎಂದು ನಿತಿನ್ ಗಡ್ಕರಿ ಹೇಳಿದರು. ವಾಹನ ಉತ್ಪಾದನಾ ಘಟಕಗಳು ಹಾಗೂ ಕಾರ್ಖಾನೆಗಳಿಂದ ಹೊರಹೊಮ್ಮುವ ಹೊಗೆ ಕೂಡ ವಾಯುಮಾಲಿನ್ಯಕ್ಕೆ ಮುಖ್ಯ ಕಾರಣ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಲೆಕ್ಟ್ರಿಕ್ ಉಪಕರಣಗಳ ಬಳಕೆಯನ್ನು ಉತ್ತೇಜಿಸಲು ಉದ್ಯಮ ಕ್ಷೇತ್ರವನ್ನೂ ಪರಿಗಣಿಸಲಾಗುತ್ತಿದೆ ಎಂದು ಅವರು ಹೇಳಿದರು. ಕಲ್ಲಿದ್ದಲಿಗೆ ಪರ್ಯಾಯವನ್ನು ಸರ್ಕಾರವು ಅನ್ವೇಷಿಸುತ್ತಿದೆ. ಉತ್ಪಾದನಾ ಘಟಕಗಳು ಹಾಗೂ ಕಾರ್ಖಾನೆಗಳಲ್ಲಿನ ಎಲೆಕ್ಟ್ರಿಕ್ ಕಿಚನ್ ಸಿಸ್ಟಂಗಳು ಮಾಲಿನ್ಯವನ್ನು ಹೋಗಲಾಡಿಸಲು ಪ್ರಮುಖ ಪಾತ್ರ ವಹಿಸುತ್ತವೆ.

ಸದ್ಯಕ್ಕೆ ಇದರ ಸಾಧಕ ಭಾದಕಗಳನ್ನು ಅಧ್ಯಯನ ಮಾಡಲಾಗುತ್ತಿದೆ ಎಂದು ಗಡ್ಕರಿ ಹೇಳಿದರು. ನಿತಿನ್ ಗಡ್ಕರಿರವರು ಇತ್ತೀಚೆಗಷ್ಟೇ ಗೋ ಎಲೆಕ್ಟ್ರಿಕ್ ಅಭಿಯಾನಕ್ಕೆ ಚಾಲನೆ ನೀಡಿದರು.
MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಈ ಅಭಿಯಾನದಡಿಯಲ್ಲಿ ಪೆಟ್ರೋಲಿಯಂ ಆಮದನ್ನು ತಡೆಯುವ ಸಲುವಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನ ಹಾಗೂ ಪರಿಸರ ಸಂರಕ್ಷಣೆಯ ಬಗ್ಗೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಿದೆ. ಇತ್ತೀಚೆಗೆ ನಿತಿನ್ ಗಡ್ಕರಿ ಸಿಎನ್‌ಜಿ ಚಾಲಿತ ದೇಶದ ಮೊದಲ ಟ್ರ್ಯಾಕ್ಟರ್ ಅನ್ನು ಬಿಡುಗಡೆಗೊಳಿಸಿದರು.

ಸಿಎನ್‌ಜಿ ಕಿಟ್ ಹೊಂದಿರುವ ದೇಶದ ಮೊದಲ ಡೀಸೆಲ್ ಟ್ರಾಕ್ಟರ್ ಇದಾಗಿದೆ. ಈ ಟ್ರ್ಯಾಕ್ಟರ್ ಬಳಕೆಯಿಂದ ಪ್ರತಿ ವರ್ಷ ಡೀಸೆಲ್ ಮೇಲೆ ಮಾಡುವ ಖರ್ಚಿನಲ್ಲಿ ರೂ.1.50 ಲಕ್ಷಗಳಷ್ಟು ಹಣವನ್ನು ಉಳಿಸಬಹುದು.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಕೃಷಿ ವೆಚ್ಚವನ್ನು ಕಡಿಮೆ ಮಾಡಿ, ಕೃಷಿಯಿಂದ ಬರುವ ಆದಾಯವನ್ನು ಹೆಚ್ಚಿಸುವುದು ಈ ಟ್ರಾಕ್ಟರ್ ಉತ್ಪಾದನೆಯ ಹಿಂದಿರುವ ಮುಖ್ಯ ಉದ್ದೇಶ. ಟ್ರಾಕ್ಟರುಗಳನ್ನು ಸಿಎನ್‌ಜಿಯಾಗಿ ಪರಿವರ್ತಿಸಲು ಕೇಂದ್ರ ಸರ್ಕಾರವು ಕೇಂದ್ರಗಳನ್ನು ಸ್ಥಾಪಿಸುತ್ತಿದೆ.

ಈ ಕೇಂದ್ರಗಳಲ್ಲಿ ಸಿಎನ್‌ಜಿ ಕಿಟ್‌ಗಳನ್ನು ಟ್ರಾಕ್ಟರುಗಳಲ್ಲಿ ಅತ್ಯಂತ ಕಡಿಮೆ ಬೆಲೆಗೆ ಅಳವಡಿಸಲಾಗುವುದು ಎಂದು ಈ ಟ್ರಾಕ್ಟರ್ ಬಿಡುಗಡೆ ಸಮಾರಂಭದಲ್ಲಿ ನಿತಿನ್ ಗಡ್ಕರಿ ಹೇಳಿದರು. ದೇಶದ ಪ್ರತಿ ಜಿಲ್ಲೆಯಲ್ಲೂ ಇಂತಹ ಕೇಂದ್ರಗಳನ್ನು ತೆರೆಯುವ ಯೋಜನೆ ಸಿದ್ಧಪಡಿಸಲಾಗಿದೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಒಂದು ಲೀಟರ್ ಡೀಸೆಲ್ ಬೆಲೆ ಸುಮಾರು ರೂ.83ಗಳಾದರೆ, ಪ್ರತಿ ಕೆಜಿ ಸಿಎನ್‌ಜಿ ಬೆಲೆ ರೂ.42ಗಳಾಗಿದೆ. ಒಬ್ಬ ರೈತ ಪ್ರತಿ ವರ್ಷ ಡೀಸೆಲ್‌ಗಾಗಿ ರೂ.3 ರಿಂದ ರೂ.3.5 ಲಕ್ಷ ಖರ್ಚು ಮಾಡಬೇಕಾಗುತ್ತದೆ. ಸಿಎನ್‌ಜಿ ಟ್ರ್ಯಾಕ್ಟರ್ ಬಳಸಿದರೆ ಪ್ರತಿ ವರ್ಷ ರೂ.1.50 ಲಕ್ಷ ಉಳಿತಾಯ ಮಾಡಬಹುದು. ಶೀಘ್ರದಲ್ಲೇ ದೇಶದಲ್ಲಿ ಎಲೆಕ್ಟ್ರಿಕ್ ಟ್ರಾಕ್ಟರುಗಳನ್ನು ಬಿಡುಗಡೆಗೊಳಿಸಲಾಗುವುದು ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.