ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ವಿಶ್ವಾದ್ಯಂತ ಜನರು ಪೆಟ್ರೋಲ್, ಡೀಸೆಲ್ ಎಂಜಿನ್ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳಿಗೆ ಆದ್ಯತೆ ನೀಡುತ್ತಿದ್ದಾರೆ. ಬಹುತೇಕ ಎಲ್ಲಾ ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ಇದರಿಂದ ನಾರ್ವೆ ದೇಶವು ಸಹ ಹೊರತಾಗಿಲ್ಲ. ಮಾತ್ರವಲ್ಲದೇ ನಾರ್ವೆ ಎಲೆಕ್ಟ್ರಿಕ್ ವಾಹನಗಳ ಮಾರಾಟದಲ್ಲಿ ಹೊಸ ದಾಖಲೆಯನ್ನು ಬರೆದಿದೆ. 2020ರಲ್ಲಿ ನಾರ್ವೆಯಲ್ಲಿ ನೋಂದಾಯಿಸಲ್ಪಟ್ಟ ಹೊಸ ಕಾರುಗಳಲ್ಲಿ 50%ಕ್ಕಿಂತ ಹೆಚ್ಚು ಎಲೆಕ್ಟ್ರಿಕ್ ಕಾರುಗಳಾಗಿವೆ. 100 ಕಾರುಗಳು ಹೊಸದಾಗಿ ನೋಂದಾಯಿಸಲ್ಪಟ್ಟಿದ್ದರೆ, ಅವುಗಳಲ್ಲಿ 50ಕ್ಕೂ ಹೆಚ್ಚು ಕಾರುಗಳು ಎಲೆಕ್ಟ್ರಿಕ್ ಕಾರುಗಳಾಗಿವೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ನಾರ್ವೆ ಈ ಸಾಧನೆ ಮಾಡಿದ ವಿಶ್ವದ ಮೊದಲ ದೇಶ ಎಂಬ ಹೆಗ್ಗಳಿಕೆಯನ್ನು ಪಡೆದಿದೆ. 2020ರಲ್ಲಿ ನಾರ್ವೆಯಲ್ಲಿ ನೋಂದಾಯಿಸಲಾದ ಒಟ್ಟು ಕಾರುಗಳಲ್ಲಿ 54.3%ನಷ್ಟು ಎಲೆಕ್ಟ್ರಿಕ್ ಕಾರುಗಳಾಗಿವೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

2019ರಲ್ಲಿ ನಾರ್ವೆಯಲ್ಲಿ ಮಾರಾಟವಾದ ಒಟ್ಟು ಕಾರುಗಳಲ್ಲಿ 42.4%ನಷ್ಟು ಎಲೆಕ್ಟ್ರಿಕ್ ಕಾರುಗಳು ರಿಜಿಸ್ಟರ್ ಆಗಿದ್ದವು. ನಾರ್ವೆ ದೇಶದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಳಕೆ ವೇಗವಾಗಿ ಹೆಚ್ಚುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ಆಡಿ ಇ-ಟ್ರಾನ್, ಟೆಸ್ಲಾ ಮಾಡೆಲ್ 3, ಫೋಕ್ಸ್‌ವ್ಯಾಗನ್ ಐಡಿ 3 ಹಾಗೂ ನಿಸ್ಸಾನ್ ಲೀಫ್ ನಾರ್ವೆಯಲ್ಲಿ ಹೆಚ್ಚು ಮಾರಾಟವಾದ ಟಾಪ್ 4 ಎಲೆಕ್ಟ್ರಿಕ್ ಕಾರುಗಳಾಗಿವೆ. ನಾರ್ವೆಯಲ್ಲಿ 2025ರ ವೇಳೆಗೆ ಎಲ್ಲಾ ಹೊಸ ಕಾರುಗಳನ್ನು ಪರಿಸರ ಸ್ನೇಹಿಯಾಗಿ ಮಾರಾಟ ಮಾಡುವ ಗುರಿಯನ್ನು ಹೊಂದಲಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ನಾರ್ವೆ ಈ ಗುರಿಯನ್ನು ಸಾಧಿಸುವತ್ತ ನಿರತವಾಗಿದೆ. ಪರಿಸರ ಸ್ನೇಹಿ ವಾಹನಗಳ ಬಳಕೆಯಲ್ಲಿ ನಾರ್ವೆ ವಿಶ್ವದ ಅಗ್ರಗಣ್ಯ ದೇಶ ಎಂದು ಹೇಳಿದರೆ ತಪ್ಪಾಗಲಾರದು. ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳು ಜಗತ್ತಿನೆಲ್ಲೆಡೆ ಸದ್ದು ಮಾಡಲಿವೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ಪೆಟ್ರೋಲ್, ಡೀಸೆಲ್ ವಾಹನಗಳು ಪರಿಸರವನ್ನು ಕಲುಷಿತಗೊಳಿಸುತ್ತಿರುವುದರಿಂದ ಹಾಗೂ ಕಚ್ಚಾ ತೈಲ ಆಮದಿಗೆ ಹೆಚ್ಚಿನ ಮೊತ್ತವನ್ನು ಖರ್ಚು ಮಾಡಬೇಕಾಗಿರುವುದರಿಂದ ವಿಶ್ವದ ಹಲವು ದೇಶಗಳು ಈಗ ಎಲೆಕ್ಟ್ರಿಕ್ ವಾಹನಗಳತ್ತ ಗಮನ ಹರಿಸುತ್ತಿವೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ಇವುಗಳಲ್ಲಿ ಭಾರತವೂ ಒಂದು. ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ಇನ್ನೂ ಹೆಚ್ಚು ಜನಪ್ರಿಯವಾಗಿಲ್ಲ. ಆದರೆ ಜನಪ್ರಿಯವಾಗಿಸುವ ಪ್ರಯತ್ನಗಳು ನಡೆಯುತ್ತಿವೆ. ಇದರ ಅಂಗವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ.

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸುವುದು ಹಾಗೂ ಎಲೆಕ್ಟ್ರಿಕ್ ವಾಹನಗಳ ಖರೀದಿದಾರರಿಗೆ ಸಬ್ಸಿಡಿ ನೀಡುವುದು ಸೇರಿದಂತೆ ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಲೆಕ್ಟ್ರಿಕ್ ಕಾರುಗಳ ಮಾರಾಟದಲ್ಲಿ ಹೊಸ ದಾಖಲೆ ಬರೆದ ನಾರ್ವೆ

ಇದರಿಂದಾಗಿ ಜನರಲ್ಲಿ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಜಾಗೃತಿ ಮೂಡುತ್ತಿದೆ. ವಿಶ್ವದ ಪ್ರಮುಖ ಎಲೆಕ್ಟ್ರಿಕ್ ಕಾರು ತಯಾರಕ ಕಂಪನಿಯಾದ ಟೆಸ್ಲಾ ಶೀಘ್ರದಲ್ಲಿಯೇ ದೇಶಿಯ ಮಾರುಕಟ್ಟೆಯನ್ನು ಪ್ರವೇಶಿಸಲು ಸಜ್ಜಾಗಿದೆ. ಈ ಕಾರಣಗಳಿಂದಾಗಿ ಮುಂಬರುವ ದಿನಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಹೆಚ್ಚಾಗುವ ಸಾಧ್ಯತೆಗಳಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Norway creates new world record in electric car sales. Read in Kannada.
Story first published: Saturday, January 9, 2021, 12:21 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X