ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ವಿಶ್ವಾದ್ಯಂತ ದಿನೇ ದಿನೇ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪರಿಸರ ಸ್ನೇಹಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ನಾರ್ವೆ ಸೇರಿದಂತೆ ಯುರೋಪಿನ ಹಲವು ದೇಶಗಳಲ್ಲಿ 2030ರ ವೇಳೆಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಫೇಮ್ 2ನಂತಹ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ವಾಹನ ತಯಾರಕ ಕಂಪನಿಗಳು ಮಾತ್ರವಲ್ಲದೇ ಸೆಲ್ ಫೋನ್ ತಯಾರಕ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಲು ಮುಂದಾಗಿವೆ. ಕೆಲವು ತಿಂಗಳ ಹಿಂದಷ್ಟೇ Lenovo ಕಂಪನಿಯು ತನ್ನ ಸ್ಕೂಟರ್ ಮಾದರಿಯ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಿತ್ತು. ಈ ಹಿಂದೆ Apple, Huwai ನಂತಹ ಕಂಪನಿಗಳು ಸಹ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿರುವ ಬಗ್ಗೆ ವರದಿಯಾಗಿತ್ತು.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಈಗ ಜನಪ್ರಿಯ ಮೊಬೈಲ್ ಫೋನ್ ತಯಾರಕ Oppo ಕೂಡ ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ಸಿದ್ಧವಾಗಿದೆ ಎಂದು ವರದಿಯಾಗಿದೆ. 91 ಮೊಬೈಲ್ಸ್ ವೆಬ್ ಸೈಟ್ ವರದಿಯ ಪ್ರಕಾರBBK ಎಲೆಕ್ಟ್ರಾನಿಕ್ಸ್ ಮಾಲೀಕತ್ವದ ಮೊಬೈಲ್ ಫೋನ್ ತಯಾರಕ ಕಂಪನಿಗಳಾದ Oppo, RealMe ಹಾಗೂ One Plus ಕಂಪನಿಗಳು ಶೀಘ್ರದಲ್ಲೇ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ಸಿದ್ಧವಾಗಿವೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಈ ಕಂಪನಿಗಳು ಈಗಾಗಲೇ ವಿವಿಧ ರೀತಿಯ ವಾಹನಗಳಿಗೆ ವ್ಯಾಪಾರ ನೋಂದಣಿ ಮಾಡಿಸಿಕೊಂಡಿವೆ ಎಂದು ಈ ವರದಿಯಲ್ಲಿ ಹೇಳಲಾಗಿದೆ. ಇತ್ತೀಚಿನ ದಿನಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆಗೊಳಿಸಲಾಗುತ್ತಿದೆ. ಇದರಿಂದ Oppo ಕಂಪನಿಯು ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಕಾಲಿಡುತ್ತಿರುವುದರಲ್ಲಿ ಆಶ್ಚರ್ಯವೇನಿಲ್ಲ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

Oppo ಕಂಪನಿಯು ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ನಿಧಾನವಾಗಿ ಪ್ರವರ್ಧಮಾನಕ್ಕೆ ಬರುತ್ತಿದೆ. ಈ ಸುದ್ದಿ Oppo ಸೆಲ್ ಫೋನ್ ಪ್ರಿಯರಲ್ಲಿ ಸಂತಸವನ್ನು ಉಂಟುಮಾಡಿದೆ. ಇದರ ಜೊತೆಗೆ ಕಂಪನಿಯ ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ ಯಾವಾಗ ಬಿಡುಗಡೆಯಾಗುತ್ತವೆ ಎಂಬ ಪ್ರಶ್ನೆ ಸಹ ಮೂಡಿದೆ. ವರದಿಗಳ ಪ್ರಕಾರ Oppo ಎಲೆಕ್ಟ್ರಿಕ್ ವಾಹನಗಳು ಭಾರತದಲ್ಲಿ 2023 ರ ಅಂತ್ಯದ ವೇಳೆಗೆ ಅಥವಾ 2024 ರ ಆರಂಭದಲ್ಲಿ ಬಿಡುಗಡೆಯಾಗುವ ನಿರೀಕ್ಷೆಗಳಿವೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

Oppo ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಯಾವ ರೀತಿಯ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂಬ ಮಾಹಿತಿಯನ್ನು ಸದ್ಯಕ್ಕೆ ಲಭ್ಯವಾಗಿಲ್ಲ. ಕಂಪನಿಯು ಶೀಘ್ರದಲ್ಲಿಯೇ ಈ ಬಗ್ಗೆ ಅಧಿಕೃತ ಮಾಹಿತಿ ಬಿಡುಗಡೆ ಮಾಡುವ ನಿರೀಕ್ಷೆಗಳಿವೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರುಕಟ್ಟೆ ದಿನದಿಂದ ದಿನಕ್ಕೆ ವಿಸ್ತಾರವಾಗುತ್ತಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಓಲಾ ಕಂಪನಿಯಂತೆ Oppo ಕಂಪನಿಯು ಸಹ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸಲು ಹಾಗೂ ಮಾರಾಟ ಮಾಡಲು ಎಲೆಕ್ಟ್ರಿಕ್ ವಾಹನ ಉತ್ಪಾದನಾ ಘಟಕವನ್ನು ತೆರೆಯುವ ನಿರೀಕ್ಷೆಗಳಿವೆ. ಇದೇ ವೇಳೆ ಕಂಪನಿಯು ಬಿಡಿ ಭಾಗಗಳನ್ನು ಆಮದು ಮಾಡಿಕೊಳ್ಳಲು ಹಾಗೂ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡುವ ಅವಕಾಶಗಳನ್ನು ಹೊಂದಿದೆ. ಆದರೆ ಈ ಬಗ್ಗೆ ಕಂಪನಿ ಇನ್ನೂ ಯಾವುದೇ ಅಧಿಕೃತ ಮಾಹಿತಿಯನ್ನು ಬಿಡುಗಡೆ ಮಾಡಿಲ್ಲ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಭಾರತದಲ್ಲಿ ಎಲೆಕ್ಟ್ರಿಕ್ ಕಾರು ವಿಭಾಗವು ಈಗ 234% ನಷ್ಟು ಬೆಳೆಯುತ್ತಿದೆ. ಈ ಹಣಕಾಸು ವರ್ಷದ ಮೊದಲಾರ್ಧದಲ್ಲಿ (ಸೆಪ್ಟೆಂಬರ್ ನಿಂದ ಏಪ್ರಿಲ್ ವರೆಗೆ) ಸುಮಾರು 6,261 ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಮಾಡಲಾಗಿದೆ. ಇದರಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ನಿರಂತರವಾಗಿ ಹೆಚ್ಚುತ್ತಿರುವುದು ಸ್ಪಷ್ಟವಾಗಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಇದನ್ನು ಗಮನದಲ್ಲಿಟ್ಟುಕೊಂಡು ಪ್ರಮುಖ ವಾಹನ ತಯಾರಕ ಕಂಪನಿಗಳು ಹಾಗೂ ಹೊಸ ವಾಹನ ತಯಾರಕ ಕಂಪನಿಗಳು ತಮ್ಮ ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುತ್ತಿವೆ. ಈ ಸಾಲಿಗೆ Oppo, RealMe ಹಾಗೂ OnePlus ಕಂಪನಿಗಳು ಹೊಸ ಸೇರ್ಪಡೆಯಾಗಿವೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಕೆಲ ದಿನಗಳ ಹಿಂದಷ್ಟೇ ಜನಪ್ರಿಯ ಮೊಬೈಲ್ ಫೋನ್ ತಯಾರಕ ಕಂಪನಿಯಾದ Xiomi ಸಹ ಎಲೆಕ್ಟ್ರಿಕ್ ವಾಹನ ಉತ್ಪಾದನೆಗೆ ಮುಂದಾಗಿರುವ ಬಗ್ಗೆ ವರದಿಯಾಗಿತ್ತು. ಕೆಲವು ದಿನಗಳಿಂದ ಸಣ್ಣ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿರುವ Xiomi ಕಂಪನಿಯು ಈಗ ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲು ನಿರ್ಧರಿಸಿರುವ ಬಗ್ಗೆ ವರದಿಯಾಗಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಲೆನೊವೊ, ಆಪಲ್, ಹುವೈ ನಂತಹ ಮೊಬೈಲ್ ಫೋನ್ ತಯಾರಕ ಕಂಪನಿಗಳು ಈಗಾಗಲೇ ಎಲೆಕ್ಟ್ರಿಕ್ ವಾಹನ ತಯಾರಿಕೆಯಲ್ಲಿ ತೊಡಗಿವೆ. ಗೂಗಲ್ ಹಾಗೂ ಅಮೆಜಾನ್ ನಂತಹ ಕಂಪನಿಗಳು ಸ್ವಯಂಚಾಲಿತ ವಾಹನಗಳನ್ನು ತಯಾರಿಸುವ ಪ್ರಕ್ರಿಯೆಯಲ್ಲಿ ನಿರತವಾಗಿವೆ. ಈ ಸಾಲಿಗೆ ಶಿಯೋಮಿ ಕಂಪನಿಯ ಜೊತೆಗೆ ರಿಯಲ್ ಮೀ ಹೊಸ ಸೇರ್ಪಡೆಯಾಗಿದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ರಿಯಲ್ ಮೀ ಕಂಪನಿಯ ಸೆಲ್ ಫೋನ್'ಗಳು ಮೊಬೈಲ್ ಮಾರುಕಟ್ಟೆಯಲ್ಲಿ ತಮ್ಮದೇ ಆದ ಪ್ರಾಬಲ್ಯವನ್ನು ಸಾಧಿಸಿವೆ. ಕಂಪನಿಯ ಮೊಬೈಲ್ ಗಳು ಭಾರತದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತವೆ ಎಂಬುದು ಗಮನಾರ್ಹ. ಕಂಪನಿಯು ಎಲೆಕ್ಟ್ರಿಕ್ ವಾಹನ ಮಾರಾಟದಲ್ಲಿಯೂ ತನ್ನ ಅಧಿಪತ್ಯವನ್ನು ಸ್ಥಾಪಿಸುವ ನಿರೀಕ್ಷೆಗಳಿವೆ. ರಿಯಲ್ ಮೀ ಕಂಪನಿಯು ಕಡಿಮೆ ಬೆಲೆಯಲ್ಲಿ ಹೆಚ್ಚು ಫೀಚರ್ ಗಳಿರುವ ಮೊಬೈಲ್ ಫೋನ್ ಗಳನ್ನು ಮಾರಾಟ ಮಾಡುತ್ತದೆ.

ಶೀಘ್ರದಲ್ಲೇ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಲಿದೆ Oppo

ಇದೇ ರೀತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಬಹುದು ಎಂಬುದು ವಾಹನ ಪ್ರಿಯರ ನಿರೀಕ್ಷೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ.

ಗಮನಿಸಿ: ಈ ಲೇಖನದಲ್ಲಿರುವ ಕೆಲವು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Oppo to enter into the ev segment in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X