ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಡ್ರೈವಿಂಗ್ ಲೈಸೆನ್ಸ್ ಪಡೆಯುವುದನ್ನು ಸುಲಭಗೊಳಿಸಲು ಕೆಲವು ರಾಜ್ಯಗಳು ಡಿಜಿಟಲ್ ಅಪ್ಲಿಕೇಶನ್ ಅನ್ನು ಜಾರಿಗೆ ತಂದಿವೆ. ಇನ್ನು ಮುಂದೆ ಉತ್ತರ ಪ್ರದೇಶ, ಜಾರ್ಖಂಡ್, ಮಧ್ಯಪ್ರದೇಶ, ಬಿಹಾರ, ರಾಜಸ್ಥಾನ ಹಾಗೂ ದೆಹಲಿ-ಎನ್‌ಸಿಆರ್'ಗಳ ನಾಗರಿಕರು ಆನ್‌ಲೈನ್ ಮೂಲಕ ಡ್ರೈವಿಂಗ್ ಲೈಸೆನ್ಸ್'ಗೆ ಅರ್ಜಿ ಸಲ್ಲಿಸಬಹುದು.

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಡ್ರೈವಿಂಗ್ ಲೈಸೆನ್ಸ್ ಪಡೆಯ ಬಯಸುವವರು ಸಾರಿಗೆ ಇಲಾಖೆಯ https://parivahan.gov.in/ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು.ವೆಬ್‌ಸೈಟ್‌ನಲ್ಲಿ ಕೋರಲಾಗುವ ಮಾಹಿತಿಯನ್ನು ನೀಡುವ ಮೂಲಕ ಆನ್‌ಲೈನ್ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬಹುದು. ಅರ್ಜಿದಾರರ ವಿಳಾಸ, ಗುರುತಿಗೆ ಸಂಬಂಧಿಸಿದ ಕೆಲವು ಮಾಹಿತಿಯನ್ನು ಭರ್ತಿ ಮಾಡಿದ ನಂತರ ಲರ್ನರ್ ಲೈಸೆನ್ಸ್ ಪಡೆಯಲು ಅರ್ಹರಾಗಿರುತ್ತಾರೆ.

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಲರ್ನರ್ ಲೈಸೆನ್ಸ್ ಅರ್ಜಿ ಪ್ರಕ್ರಿಯೆಯಲ್ಲಿ ಆನ್‌ಲೈನ್ ಮಾಧ್ಯಮದ ಮೂಲಕವೂ ಪ್ರಶ್ನೆಗಳನ್ನು ಕೇಳಲಾಗುತ್ತದೆ. ಅರ್ಜಿದಾರರಿಗೆ 10 ಪ್ರಶ್ನೆಗಳನ್ನು ಕೇಳಲಾಗುತ್ತದೆ.ಅದರಲ್ಲಿ 6 ಪ್ರಶ್ನೆಗಳಿಗೆ ಉತ್ತರಿಸುವವರಿಗೆ ಲರ್ನರ್ ಲೈಸೆನ್ಸ್ ನೀಡಲಾಗುತ್ತದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಲರ್ನರ್ ಲೈಸೆನ್ಸ್ ಅನ್ನು ಅರ್ಜಿದಾರರಿಗೆ ಇ-ಮೇಲ್ ಮೂಲಕ ಕಳುಹಿಸಲಾಗುತ್ತದೆ. ಆನ್‌ಲೈನ್ ಮೂಲಕ ಲರ್ನರ್ ಲೈಸೆನ್ಸ್ ನೀಡುವುದರಿಂದ ಸಮಯ ಉಳಿಸುವುದರ ಜೊತೆಗೆ ಹಣವನ್ನು ಸಹ ಉಳಿಸಬಹುದು.

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಈ ಪ್ರಕ್ರಿಯೆಯಲ್ಲಿ ಆನ್‌ಲೈನ್ ಪಾವತಿ ಮಾಡಿದ ನಂತರ ಅರ್ಜಿದಾರನು ಲಭ್ಯವಿರುವ ಸ್ಲಾಟ್‌ಗಳಿಂದ ಪರೀಕ್ಷೆಯ ದಿನ ಹಾಗೂ ಸಮಯವನ್ನು ಆಯ್ಕೆ ಮಾಡಿಕೊಳ್ಳಬಹುದು. ದೆಹಲಿಯಲ್ಲಿ ಹೊಸದಾಗಿ ನಾಲ್ಕು ಆರ್‌ಟಿಒ ಕಚೇರಿಗಳನ್ನು ತೆರೆಯಲಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಈಗ ದೆಹಲಿಯಲ್ಲಿ 13 ಆರ್‌ಟಿಒ ಕಚೇರಿಗಳಿವೆ. ಈ ಕಚೇರಿಗಳಲ್ಲಿ ಲರ್ನರ್ ಲೈಸೆನ್ಸ್, ಅಂತರರಾಷ್ಟ್ರೀಯ ಲೈಸೆನ್ಸ್, ವಾಹನ ನೋಂದಣಿ, ನವೀಕರಣಕ್ಕಾಗಿ ಅರ್ಜಿಗಳನ್ನು ಸ್ವೀಕರಿಸಲಾಗುತ್ತದೆ.

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ದೆಹಲಿ ಸರ್ಕಾರವು ಸ್ವಿಚ್ ದೆಹಲಿ ಅಭಿಯಾನವನ್ನು ಆರಂಭಿಸಿದೆ. ಇದರಡಿಯಲ್ಲಿ ಅರವಿಂದ್ ಕೇಜ್ರಿವಾಲ್ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿಯನ್ನು ಘೋಷಿಸಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಅನುಕೂಲವಾಗುವಂತೆ ರಾಜ್ಯಾದ್ಯಂತ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆಗೆ ಅನುಮೋದನೆ ನೀಡಲಾಗಿದೆ.

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಸಂಬಂಧ ಕಂಪನಿಗಳಿಂದ ಟೆಂಡರ್ ಕರೆಯಲಾಗಿದೆ. 2020ರ ಆಗಸ್ಟ್ ತಿಂಗಳಿನಲ್ಲಿ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಲಾಯಿತು.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಈ ನೀತಿಯು ಜಾರಿಗೆ ಬಂದ ನಂತರ ಇದುವರೆಗೆ 6,000 ವಾಹನಗಳನ್ನು ನೋಂದಾಯಿಸಲಾಗಿದೆ. ಈ ಎಲೆಕ್ಟ್ರಿಕ್ ವಾಹನ ನೀತಿಯ ಭಾಗವಾಗಿ ದೆಹಲಿ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ಹಾಗೂ ನೋಂದಣಿ ಶುಲ್ಕದಿಂದ ರಿಯಾಯಿತಿ ನೀಡುತ್ತದೆ.

ಡ್ರೈವಿಂಗ್ ಲೈಸೆನ್ಸ್ ಪಡೆಯುವ ವಿಧಾನವೀಗ ಬಲು ಸುಲಭ

ಈ ಯೋಜನೆಯಡಿ 1,000 ಎಲೆಕ್ಟ್ರಿಕ್ ವಾಹನಗಳಿಗೆ ಪ್ರತಿ ಕಿವ್ಯಾಗೆ ರೂ.10,000 ದರದಲ್ಲಿ ಸಬ್ಸಿಡಿಯನ್ನು ಘೋಷಿಸಲಾಗಿದೆ. ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಮೇಲೆ ಗರಿಷ್ಠ ರೂ.1.50 ಲಕ್ಷ ಸಬ್ಸಿಡಿ ನೀಡಲಾಗುತ್ತದೆ.

Most Read Articles

Kannada
English summary
People of these states can apply for driving license through online. Read in Kannada.
Story first published: Monday, February 8, 2021, 18:45 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X