Just In
- 2 hrs ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 7 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- Movies
ರಾಖಿ ಸಾವಂತ್ ಬಯೋಪಿಕ್ ಈ ಸ್ಟಾರ್ ನಟಿಯೇ ಮಾಡಬೇಕಂತೆ
- News
Breaking: ರಮೇಶ್ ಜಾರಕಿಹೊಳಿ ವಿರುದ್ಧ ನೀಡಿದ್ದ ದೂರು ವಾಪಸ್ ಪಡೆದ ದಿನೇಶ್ ಕಲ್ಲಹಳ್ಳಿ?
- Sports
ಐಪಿಎಲ್ 2021: ಈ ಬಾರಿಯ ಆವೃತ್ತಿಯ ಕೆಲ ಗಮನಾರ್ಹ ಬದಲಾವಣೆಗಳು
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸತತ ಎಂಟನೇ ದಿನವೂ ಏರಿಕೆಯಾದ ಪೆಟ್ರೋಲ್, ಡೀಸೆಲ್ ಬೆಲೆ
ದೇಶದಲ್ಲಿ ಸತತ ಎಂಟನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದೆ. ಇದರಿಂದಾಗಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಹೊಸ ದಾಖಲೆಯನ್ನು ಬರೆದಿದೆ. ಫೆಬ್ರವರಿ 16ರಂದು ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ 26 - 30 ಪೈಸೆಗಳಷ್ಟು ಹಾಗೂ ಡೀಸೆಲ್ ಬೆಲೆ 33-38 ಪೈಸೆಗಳಷ್ಟು ಹೆಚ್ಚಾಗಿದೆ.

ಬೆಲೆ ಹೆಚ್ಚಳದ ನಂತರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ರೂ.88.99ಗಳಿಂದ ರೂ.89.29ಗಳಿಗೆ ಹಾಗೂ ಡೀಸೆಲ್ ಬೆಲೆ ರೂ.79.35ಗಳಿಂದ ರೂ.79.70ಗಳಿಗೆ ಏರಿಕೆಯಾಗಿದೆ. ಕಳೆದ ಎಂಟು ದಿನಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ರೂ.2.36 ಹಾಗೂ ಡೀಸೆಲ್ ಬೆಲೆ ರೂ.2.91ಗಳಷ್ಟು ಹೆಚ್ಚಾಗಿದೆ.

ಮುಂಬೈನಲ್ಲಿ 29 ಪೈಸೆ ಹೆಚ್ಚಳದ ನಂತರ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ರೂ.95.75ಗಳಿಗೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ 38 ಪೈಸೆ ಹೆಚ್ಚಳದ ನಂತರ ಪ್ರತಿ ಲೀಟರ್‌ಗೆ ರೂ.86.72ಗಳಾಗಿದೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಇನ್ನು ನಮ್ಮ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ.92.28ಗಳಾದರೆ, ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ ರೂ.84.49ಗಳಾಗಿದೆ. ಚೆನ್ನೈನಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಕ್ರಮವಾಗಿ ಪ್ರತಿ ಲೀಟರ್'ಗೆ ರೂ.91.45 ಹಾಗೂ ರೂ.84.77ಗಳಾಗಿದೆ.

ಕಳೆದ ವಾರ ಪೆಟ್ರೋಲಿಯಂ ಖಾತೆ ಸಚಿವರಾದ ಧರ್ಮೇಂದ್ರ ಪ್ರಧಾನ್'ರವರು ಇಂಧನ ಬೆಲೆಗಳನ್ನು ಕಡಿಮೆ ಮಾಡುವ ಸಲುವಾಗಿ ಅವುಗಳ ಮೇಲೆ ವಿಧಿಸಲಾಗುತ್ತಿರುವ ಅಬಕಾರಿ ಸುಂಕವನ್ನು ಕಡಿಮೆ ಮಾಡುವುದಿಲ್ಲವೆಂದು ತಿಳಿಸಿದ್ದರು.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಕರೋನಾ ವೈರಸ್ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಭಾರತದಲ್ಲಿರುವ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಣೆಯನ್ನು ಕೆಲ ದಿನಗಳವರೆಗೆ ನಿಲ್ಲಿಸಿದ್ದವು.

ಪ್ರಮುಖ ತೈಲ ಕಂಪನಿಗಳಾದ ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂಗಳು ಅಂತರರಾಷ್ಟ್ರೀಯ ಬೆಲೆಯನ್ವಯ ಹಾಗೂ ಇಂಧನದ ವಿದೇಶಿ ವಿನಿಮಯದನ್ವಯ ಪ್ರತಿ ದಿನ ತೈಲ ಬೆಳೆಯನ್ನು ಪರಿಷ್ಕರಿಸುತ್ತವೆ.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪ್ರತಿ ದಿನ ಬೆಳಿಗ್ಗೆ 6 ಗಂಟೆಗೆ ತೈಲ ಬೆಲೆಯಲ್ಲಿ ಬದಲಾವಣೆಗಳನ್ನು ತರುತ್ತದೆ. ಕೇಂದ್ರ ಸರ್ಕಾರವು ದೇಶಾದ್ಯಂತ ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡಲು ದೇಶಾದ್ಯಂತವಿರುವ 69,000ಕ್ಕೂ ಹೆಚ್ಚು ಪೆಟ್ರೋಲ್ ಬಂಕ್'ಗಳಲ್ಲಿ ಚಾರ್ಜಿಂಗ್ ಸ್ಟೇಷನ್'ಗಳನ್ನು ನಿರ್ಮಿಸುವ ಯೋಜನೆಯನ್ನು ಸಿದ್ಧಪಡಿಸಿದೆ.

ಪೆಟ್ರೋಲ್, ಡೀಸೆಲ್ ಬೆಲೆಗಳು ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಹಲವಾರು ರಿಯಾಯಿತಿಗಳನ್ನು ನೀಡುತ್ತಿವೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಬ್ಯಾಟರಿಯ ಬೆಲೆಯನ್ನು ಎಲೆಕ್ಟ್ರಿಕ್ ವಾಹನಗಳ ಬೆಲೆಯಿಂದ ಬೇರ್ಪಡಿಸಲಾಗಿರುವ ಕಾರಣಕ್ಕೆ 30%ನಷ್ಟು ತೆರಿಗೆ ಉಳಿತಾಯವಾಗುತ್ತದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ದೇಶವನ್ನು ಎಲೆಕ್ಟ್ರಿಕ್ ವಾಹನಗಳ ಉತ್ಪಾದನಾ ಕೇಂದ್ರವನ್ನಾಗಿ ಮಾಡುವುದು ಸಹ ಸೇರಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ