Petrol, Diesel Price: ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಬೆಲೆಯಿಂದಾಗಿ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ನಿಯಂತ್ರಣ ತಪ್ಪಿರುವ ಪೆಟ್ರೋಲ್ ಬೆಲೆ ತಗ್ಗಿಸಲು ಕೇಂದ್ರ ಸರ್ಕಾರವು ಮೊನ್ನೆಯಷ್ಟೇ ಮಹತ್ವದ ನಿರ್ಧಾರ ತೆಗೆದುಕೊಳ್ಳುವ ಮೂಲಕ ಇಂಧನಗಳ ಮೇಲಿನ ಅಬಕಾರಿ ಸುಂಕವನ್ನು ಕಡಿತ ಮಾಡಿ ದೇಶದ ಜನತೆಗೆ ದೀಪಾವಳಿ ಉಡುಗೊರೆ ನೀಡಿತ್ತು.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ದಿನಂಪ್ರತಿ ಹೆಚ್ಚುತ್ತಿರುವ ಇಂಧನ ಬೆಲೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಾಹನ ಮಾಲೀಕರಿಗೆ ಕೇಂದ್ರ ಸರ್ಕಾರವು ಇಂಧನಗಳ ಮೇಲಿನ ಅಬಕಾರಿ ಸುಂಕ(Excise Duty) ಪ್ರಮಾಣವನ್ನು ಕಡಿತ ಮಾಡಿದ್ದು, ಕೇಂದ್ರ ಸರ್ಕಾರವು ಅಬಕಾರಿ ಸುಂಕ ಕಡಿತಗೊಳಿಸುತ್ತಿದ್ದಂತೆ ಕರ್ನಾಟಕ ಸರ್ಕಾರವು ಸಹ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಕೇಂದ್ರ ಸರ್ಕಾರಕ್ಕಿಂತಲೂ ಹೆಚ್ಚು ಇಳಿಕೆ ಮಾಡಿತ್ತು.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಮೊದಲ ದಿನವೇ ಕರ್ನಾಟಕ ಸರ್ಕಾರವು ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ. 6.29 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ರೂ. 12.47 ಪೈಸೆ ಇಳಿಕೆ ಮಾಡಿತ್ತು.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ನವೆಂಬರ್ 4ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ. 19 ರಷ್ಟು ಇಳಿಕೆ ಮಾಡಿದ್ದ ಕರ್ನಾಟಕ ಸರ್ಕಾರವು ಇಂದು ಕೂಡಾ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಇಳಿಕೆ ಮಾಡಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಹೌದು, ಕರ್ನಾಟಕ ಸರ್ಕಾರವು ನಮ್ಮ ಬೆಂಗಳೂರಿನಲ್ಲಿ ನವೆಂಬರ್ 5ರಂದು ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ. 7.06 ಪೈಸೆ ಮತ್ತು ಡೀಸೆಲ್ ಬೆಲೆಯಲ್ಲಿ ರೂ. 7.02 ಪೈಸೆ ಕಡಿತ ಮಾಡಿದ್ದು, ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಪೆಟ್ರೋಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ರೂ. 14 ಮತ್ತು ಡೀಸೆಲ್ ಬೆಲೆಯಲ್ಲಿ ರೂ.20 ಇಳಿಕೆಯಾಗಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಬೆಲೆ ಇಳಿಕೆಯ ನಂತರ ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ. 100.58 ಪೈಸೆ ಮತ್ತು ಡೀಸೆಲ್ ಪ್ರತಿ ಲೀಟರ್‌ಗೆ ರೂ. 85.01 ಪೈಸೆಗೆ ಮಾರಾಟಗೊಳ್ಳುತ್ತಿದ್ದು, ದೀಪಾವಳಿಯ ಹಬ್ಬದ ಎರಡನೇ ದಿನವೂ ಕೂಡಾ ಕರ್ನಾಟಕ ಸರ್ಕಾರವು ವಾಹನ ಮಾಲೀಕರಿಗೆ ಸಿಹಿ ಸುದ್ದಿ ನೀಡಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಇನ್ನು ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಹೊಸ ವಾಹನಗಳ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಎಂಜಿನ್ ಕಾರ್ಯಕ್ಷಮತೆಗಾಗಿ ಗುಣಮಟ್ಟದ ಇಂಧನ ಬಳಕೆಗೆ ಗ್ರಾಹಕರು ಆದ್ಯತೆ ನೀಡುತ್ತಿದ್ದಾರೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ದೇಶದ ಅತಿ ದೊಡ್ಡ ತೈಲ ಕಂಪನಿಗಳಲ್ಲಿ ಒಂದಾದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಕೂಡಾ ಭಾರತದಲ್ಲಿ ಹಸಿರು ವಾಹನ ಕಾರ್ಯಾಚರಣೆಗಳನ್ನು ಉತ್ತೇಜಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಕಂಪನಿಯು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ದೇಶಾದ್ಯಂತ 10,000 ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಸ್ಟೇಷನ್‌ಗಳನ್ನು ಸ್ಥಾಪಿಸುವ ಯೋಜನೆಯನ್ನು ಪ್ರಕಟಿಸಿದ್ದು, ಇದರ ಜೊತೆಗೆ ಕಂಪನಿಯು ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಎಂಬ ಹೊಸ ಉತ್ಪನ್ನವನ್ನು ಭಾರತದಲ್ಲಿ ಬಿಡುಗಡೆ ಮಾಡಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಈ ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ದೇಶದ ಕೆಲವು ಭಾಗಗಳಲ್ಲಿ ಮಾತ್ರ ಮಾರಾಟವಾಗಲಿದೆ. ದೇಶದ 63 ಪ್ರಮುಖ ನಗರಗಳ 126 ಪೆಟ್ರೋಲ್ ಬಂಕ್ ಗಳಲ್ಲಿ ಮಾತ್ರ ಈ ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಮಾರಾಟವಾಗಲಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಪರೀಕ್ಷಾರ್ಥವಾಗಿ ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಮಾತ್ರ ಮಾರಾಟಕ್ಕೆ ಇಡಲಾಗಿದೆ. ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಶೀಘ್ರದಲ್ಲೇ ದೇಶದ ಇತರ ಭಾಗಗಳಲ್ಲಿಯೂ ಲಭ್ಯವಿರಲಿದೆ ಎಂದು ವರದಿಯಾಗಿದೆ. ಡೀಸೆಲ್ ಅನ್ನು ಡೀಸೆಲ್ ಮಲ್ಟಿ ಫಂಕ್ಷನಲ್ ಸಂಯೋಜಕವಾಗಿ, ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಆಗಿ ಪರಿವರ್ತಿಸಲಾಗಿದೆ. ಈ ಡೀಸೆಲ್ ಇಂಧನ ಮಿತವ್ಯಯವಾಗಿದ್ದು, ಮಾಲಿನ್ಯವನ್ನು ಕಡಿಮೆ ಮಾಡಲು ನೆರವಾಗಲಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಈ ಎಕ್ಸ್‌ಟ್ರಾ ಗ್ರೀನ್ ಡೀಸೆಲ್ 5% ನಿಂದ 6% ನಷ್ಟು ಹೆಚ್ಚು ಸುಧಾರಿತ ಇಂಧನ ಆರ್ಥಿಕತೆಯನ್ನು ಹೊಂದಿದೆ. ಈ ಡೀಸೆಲ್ ಸಾಂಪ್ರದಾಯಿಕ ಡೀಸೆಲ್‌ಗಿಂತ ಹಲವು ಪಟ್ಟು ಹೆಚ್ಚು ಲಾಭದಾಯಕವಾಗಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಪ್ರತಿ ಲೀಟರ್‌ಗೆ ಕೇವಲ 130 ಗ್ರಾಂ ನಷ್ಟು ಕಾರ್ಬನ್-ಡೈಆಕ್ಸೈಡ್ ಅನ್ನು ಹೊರಸೂಸುತ್ತದೆ. ಕಾರ್ಬನ್ ಮಾನಾಕ್ಸೈಡ್ ಹೊರ ಸೂಸುವಿಕೆ ಪ್ರಮಾಣವು 5.29% ಆದರೆ, ಎನ್‌ಒಎಕ್ಸ್ ಹೊರ ಸೂಸುವಿಕೆ ಪ್ರಮಾಣ 4.99% ನಷ್ಟಾಗಿದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಇಂಡಿಯನ್ ಆಯಿಲ್ ಕಂಪನಿಯ ಪ್ರಕಾರ, ಎಕ್ಸ್‌ಟ್ರಾ ಗ್ರೀನ್ ಡೀಸೆಲ್, ಎಂಜಿನ್ ಶಬ್ದವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಈ ಡೀಸೆಲ್ ಎನ್‌ಎ‌ಸಿಇ ಪ್ರಮಾಣೀಕೃತವಾಗಿದೆ. ಇದರಿಂದ ಹೊಸ ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಎಲ್ಲಾ ರೀತಿಯಲ್ಲೂ ವಿಶೇಷವಾದ ಡೀಸೆಲ್ ಆಗಿ ಕಾಣುತ್ತದೆ.

ಕರ್ನಾಟಕದಲ್ಲಿ ಸತತ ಎರಡನೇ ದಿನವೂ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಜೊತೆಗೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ One4U ಎಂಬ ಇಂಧನ ಉಡುಗೊರೆ ಕಾರ್ಡ್ ಅನ್ನು ಸಹ ಪರಿಚಯಿಸಿದ್ದು, ಉತ್ತಮ ಇಂಧನ ದಕ್ಷತೆ ಹೊಂದಿರುವ ಎಕ್ಸ್‌ಟ್ರಾ ಗ್ರೀನ್ ಡೀಸೆಲ್ ಶೀಘ್ರದಲ್ಲೇ ದೇಶಾದ್ಯಂತ ಮಾರಾಟಗೊಳ್ಳಲಿದೆ.

Most Read Articles

Kannada
English summary
Petrol diesel price in karnataka today details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X