25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿದೆ. ಪ್ರತಿ ಲೀಟರ್‌ಗೆ 25 ಪೈಸೆ ಹೆಚ್ಚಳದೊಂದಿಗೆ ಪೆಟ್ರೋಲ್ ಬೆಲೆ ದೆಹಲಿಯಲ್ಲಿ ಪ್ರತಿ ಲೀಟರ್‌ಗೆ ರೂ.84.95ಗಳಾಗಿದೆ.

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಈ ಹಿಂದೆ ಪ್ರತಿ ಲೀಟರ್ ಬೆಲೆ ರೂ.84ಗಳಾಗಿದ್ದು, ಇದುವರೆಗಿನ ದಾಖಲೆಯಾಗಿತ್ತು. ಲಾಕ್‌ಡೌನ್ ನಂತರ ಸರ್ಕಾರವು ಪ್ರತಿದಿನ ಇಂಧನ ದರವನ್ನು ಪರಿಷ್ಕರಿಸುವುದನ್ನು ನಿಷೇಧಿಸಿತ್ತು. ನಂತರ ಸುಮಾರು ಒಂದು ತಿಂಗಳವರೆಗೆ ಇಂಧನ ಬೆಲೆಗಳು ಸ್ಥಿರವಾಗಿದ್ದವು. ಈಗ ತೈಲ ಕಂಪನಿಗಳು ಪ್ರತಿದಿನ ಇಂಧನ ಬೆಲೆಗಳನ್ನು ಪರಿಷ್ಕರಿಸುತ್ತಿವೆ. ಈ ಕಾರಣಕ್ಕೆ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗಿದೆ.

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 84.95ಗಳಿಗೆ ಏರಿಕೆಯಾಗಿದ್ದರೆ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ರೂ.91.56ಗಳಿಗೆ ತಲುಪಿದೆ. ಈ ಬೆಲೆಯು ದೇಶದಲ್ಲಿಯೇ ಅತಿ ಹೆಚ್ಚು. ಬೆಲೆ ಹೆಚ್ಚಳವು ಪೆಟ್ರೋಲ್'ಗೆ ಮಾತ್ರ ಸೀಮಿತವಾಗಿಲ್ಲ, ಡೀಸೆಲ್ ದರವನ್ನೂ ಹೆಚ್ಚಿಸಲಾಗಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಈಗ ಡೀಸೆಲ್ ಬೆಲೆ ದೆಹಲಿಯಲ್ಲಿ ಪ್ರತಿ ಲೀಟರ್ ರೂ.71.13ಗಳಾಗಿದ್ದರೆ, ಮುಂಬೈನಲ್ಲಿ ರೂ.81.87ಗಳಾಗಿದೆ. ಮೊದಲು ಜನವರಿ 7ರಂದು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಕ್ರಮವಾಗಿ 23 ಪೈಸೆ ಹಾಗೂ 26 ಪೈಸೆಗಳಷ್ಟು ಹೆಚ್ಚಿಸಲಾಗಿತ್ತು.

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಜನವರಿ 6ರಿಂದ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಪರಿಷ್ಕರಿಸುತ್ತಿವೆ. 2018ರ ಅಕ್ಟೋಬರ್ 4ರಂದು ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರಿಗೆ ರೂ.84ಗಳಾಗಿದ್ದರೆ, ಡೀಸೆಲ್ ದರ ಲೀಟರಿಗೆ ರೂ.75.45ಗಳಾಗಿತ್ತು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

2020ರ ಅಂತ್ಯದಿಂದ ಇಂಧನ ಬೆಲೆ ಹೆಚ್ಚಾಗತೊಡಗಿತ್ತು. ಈಗ ನಿರಂತರವಾಗಿ ಹೆಚ್ಚುತ್ತಿದೆ. ಬೆಂಗಳೂರಿನ ಬಗ್ಗೆ ಹೇಳುವುದಾದರೆ ಇಂದು ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್‌ ಬೆಲೆ ಲೀಟರ್‌ಗೆ ರೂ.87.82ಗಳಾಗಿದ್ದರೆ, ಡೀಸೆಲ್‌ ಬೆಲೆ ಲೀಟರ್‌ಗೆ ರೂ.79.67ಗಳಾಗಿದೆ.

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ ರೂ.87.63ಗಳಾದರೆ, ಡೀಸೆಲ್ ಬೆಲೆ ಲೀಟರಿಗೆ ರೂ.80.40ಗಳಾಗಿದೆ. ಕರೋನಾ ವೈರಸ್ ಕಾರಣದಿಂದಾಗಿ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಣೆಯನ್ನು ನಿಲ್ಲಿಸಿದ್ದವು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಪ್ರಮುಖ ತೈಲ ಕಂಪನಿಗಳಾದ ಭಾರತ್ ಪೆಟ್ರೋಲಿಯಂ, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಹಿಂದೂಸ್ತಾನ್ ಪೆಟ್ರೋಲಿಯಂಗಳ ದೈನಂದಿನ ಇಂಧನ ಬೆಲೆಪರಿಷ್ಕರಣೆಯು ಅಂತರರಾಷ್ಟ್ರೀಯ ಬೆಲೆ ಹಾಗೂ ವಿದೇಶಿ ವಿನಿಮಯ ದರವನ್ನು ಅವಲಂಬಿಸಿರುತ್ತದೆ.

25 ಪೈಸೆ ಹೆಚ್ಚಳದೊಂದಿಗೆ ಸಾರ್ವಕಾಲಿಕ ಏರಿಕೆ ಕಂಡ ಪೆಟ್ರೋಲ್ ಬೆಲೆ

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಬೆಳಿಗ್ಗೆ 6 ಗಂಟೆಗೆ ತೈಲ ಬೆಲೆಯಲ್ಲಿ ಬದಲಾವಣೆಗಳನ್ನು ಮಾಡುತ್ತದೆ. ಪೆಟ್ರೋಲ್, ಡೀಸೆಲ್ ಬಳಕೆಯನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ದೇಶದಲ್ಲಿರುವ ಎಲ್ಲಾ 69,000 ಪೆಟ್ರೋಲ್ ಬಂಕ್'ಗಳಲ್ಲಿ ಚಾರ್ಜಿಂಗ್ ಸ್ಟೇಷನ್ ನಿರ್ಮಿಸುವ ಯೋಜನೆಯನ್ನು ಸಿದ್ದಪಡಿಸಿದೆ.

Most Read Articles

Kannada
English summary
Petrol price increased all time high in Delhi. Read in Kannada.
Story first published: Monday, January 18, 2021, 18:08 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X