ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ರಾಜಸ್ಥಾನ ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದರ ಭಾಗವಾಗಿ ನಗರಾಭಿವೃದ್ಧಿ ಹಾಗೂ ವಸತಿ ಇಲಾಖೆಯು ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ರಿಯಾಯಿತಿ ದರದಲ್ಲಿ ಸರ್ಕಾರಿ ಭೂಮಿಯನ್ನು ಒದಗಿಸಲಿದೆ. ಈ ಭೂಮಿಗಳಿಗೆ ಕಡಿಮೆ ಶುಲ್ಕವನ್ನು ವಿಧಿಸಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಅದರಂತೆ ಸರ್ಕಾರಿ ಭೂಮಿಯನ್ನು 50% ನಷ್ಟು ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ. ಈ ಕೊಡುಗೆ 5 ವರ್ಷಗಳಲ್ಲಿ ಸ್ಥಾಪಿಸಲ್ಪಡುವ ಮೊದಲ 500 ಎಲೆಕ್ಟ್ರಿಕ್ ವೆಹಿಕಲ್ ಚಾರ್ಜಿಂಗ್ ಕೇಂದ್ರಗಳಿಗೆ ಅನ್ವಯವಾಗುತ್ತದೆ. ನಿನ್ನೆ (ಸೆಪ್ಟೆಂಬರ್ 28) ಈ ಬಗ್ಗೆ ಅಧಿಸೂಚನೆ ಹೊರಡಿಸಲಾಗಿದೆ. ಇದೇ ವೇಳೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ರವರು ರಾಜಸ್ಥಾನದ ಸೌರ ನೀತಿ, ರಾಜಸ್ಥಾನ ಗಾಳಿ ಹಾಗೂ ಹೈಬ್ರಿಡ್ ಇಂಧನ ನೀತಿಯ ಬಗ್ಗೆಯೂ ಸಹ ಘೋಷಿಸಿದರು.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಈ ನೀತಿಗಳ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ರಿಯಾಯಿತಿ ದರದಲ್ಲಿ ಭೂಮಿ ಒದಗಿಸಲು ವ್ಯವಸ್ಥೆ ಮಾಡಲಾಗಿದೆ. ರಾಜಸ್ಥಾನದಲ್ಲಿ ಫಾಸ್ಟ್ ಹಾಗೂ ಸ್ಲೋ ಎಂಬ ಎರಡು ವಿಧದ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಫಾಸ್ಟ್ ಚಾರ್ಜಿಂಗ್ ಕೇಂದ್ರಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಕೇವಲ 60 ನಿಮಿಷ ಸಾಕಾಗುತ್ತದೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಇನ್ನು ಸ್ಲೋ ಚಾರ್ಜಿಂಗ್ ಕೇಂದ್ರಗಳನ್ನು ಬಳಸಿದರೆ, ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಸುಮಾರು 6 ಗಂಟೆ ಬೇಕಾಗುತ್ತದೆ. ಭಾರತದಲ್ಲಿ ಈಗ ಸೀಮಿತ ಸಂಖ್ಯೆಯ ಇವಿ ಚಾರ್ಜಿಂಗ್ ಕೇಂದ್ರಗಳಿವೆ. ಚಾರ್ಜಿಂಗ್ ಕೇಂದ್ರಗಳು ಬಹಳ ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುತ್ತಿದ್ದಾರೆ. ಆ ಹಿಂಜರಿಕೆಯನ್ನು ಹೋಗಲಾಡಿಸಲು, ರಾಜಸ್ಥಾನ ಸರ್ಕಾರವು ಹೆಚ್ಚು ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಲು ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ರಾಜಸ್ಥಾನ ಸರ್ಕಾರವು ಮಾತ್ರವಲ್ಲದೇ ಕೇಂದ್ರ ಸರ್ಕಾರ ಹಾಗೂ ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ವಿವಿಧ ಕ್ರಮಗಳನ್ನು ಕೈಗೊಳ್ಳುತ್ತಿವೆ. ಇದರಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ನೀಡುವ ಸಬ್ಸಿಡಿ ಸಹ ಸೇರಿದೆ. ಕೇಂದ್ರ ಸರ್ಕಾರದ ಫೇಮ್ ಇಂಡಿಯಾ 2 ಯೋಜನೆಯಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರು ಸಬ್ಸಿಡಿ ಪಡೆಯಬಹುದು.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಇದರ ಜೊತೆಗೆ ಆಯಾ ರಾಜ್ಯ ಸರ್ಕಾರಗಳು ಸಹ ತಮ್ಮ ಎಲೆಕ್ಟ್ರಿಕ್ ವಾಹನ ನೀತಿಯ ಅಡಿಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡುತ್ತವೆ. ಆದರೆ ಎಲ್ಲಾ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ನೀಡುತ್ತಿಲ್ಲ ಎಂಬುದು ಗಮನಾರ್ಹ. ಸದ್ಯಕ್ಕೆ ದೆಹಲಿ ಹಾಗೂ ಗುಜರಾತ್‌ನಂತಹ ಕೆಲವು ರಾಜ್ಯಗಳಲ್ಲಿ ಮಾತ್ರ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಆದರೆ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ನೀಡುವ ರಾಜ್ಯಗಳ ಪಟ್ಟಿ ದಿನೇ ದಿನೇ ಹೆಚ್ಚಾಗುತ್ತಿದೆ. ವಿವಿಧ ರಾಜ್ಯಗಳು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿಗಳನ್ನು ಘೋಷಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಬರುವ ದಿನಗಳಲ್ಲಿ ಎಲ್ಲಾ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿಗಳನ್ನು ನೀಡುವ ನಿರೀಕ್ಷೆಗಳಿವೆ. ಇದರಿಂದ ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾಗುತ್ತದೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾದರೆ ಸಹಜವಾಗಿಯೇ ಎಲೆಕ್ಟ್ರಿಕ್ ವಾಹನಗಳ ಖರೀದಿ ಹೆಚ್ಚಾಗುತ್ತದೆ. ಕಳೆದ ಕೆಲವು ದಿನಗಳಲ್ಲಿ ಹಲವು ವಾಹನ ತಯಾರಕ ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸಿವೆ. ಇವುಗಳಲ್ಲಿ Ola ಎಲೆಕ್ಟ್ರಿಕ್ ಸ್ಕೂಟರ್, Simple One ಎಲೆಕ್ಟ್ರಿಕ್ ಸ್ಕೂಟರ್, ಹೊಸ Tata Tigor ಎಲೆಕ್ಟ್ರಿಕ್ ಕಾರುಗಳು ಸೇರಿವೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ದೇಶಿಯ ಮಾರುಕಟ್ಟೆಯಲ್ಲಿ ಐಷಾರಾಮಿ ಹಾಗೂ ಹೆಚ್ಚಿನ ಕಾರ್ಯಕ್ಷಮತೆಯ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವ ಮುಖ್ಯ ಉದ್ದೇಶವೆಂದರೆ ಕಚ್ಚಾ ತೈಲದ ಆಮದು ಪ್ರಮಾಣವನ್ನು ಕಡಿಮೆ ಮಾಡುವುದು. ಎಲೆಕ್ಟ್ರಿಕ್ ವಾಹನಗಳು ಪರಿಸರ ಸ್ನೇಹಿಯಾಗಿದ್ದು ಮಾಲಿನ್ಯವನ್ನುಂಟು ಮಾಡುವುದಿಲ್ಲ ಎಂಬುದು ಸಹ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಕಾರಣವಾಗಿದೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಇನ್ನು ದೇಶದ ಎರಡನೇ ಅತಿ ದೊಡ್ಡ ಪೆಟ್ರೋಲಿಯಂ ಕಂಪನಿಯಾದ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಮೂಲ ಸೌಕರ್ಯವನ್ನು ಸ್ಥಾಪಿಸಲು ತನ್ನ ಪೆಟ್ರೋಲ್ ಬಂಕ್ ಗಳನ್ನು ಬಳಸಲಿದೆ. ಕಂಪನಿಯು ಮುಂದಿನ ಐದು ವರ್ಷಗಳಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವುದಕ್ಕಾಗಿ ರೂ. 1 ಲಕ್ಷ ಕೋಟಿ ಹೂಡಿಕೆ ಮಾಡುವುದಾಗಿ ಘೋಷಿಸಿದೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಬಿಪಿಸಿಎಲ್ ದೇಶದಾದ್ಯಂತ 19,000ಕ್ಕೂ ಹೆಚ್ಚು ರಿಟೇಲ್ ಮಾರಾಟ ಮಳಿಗೆಗಳನ್ನು ಹೊಂದಿದೆ. ಈ ರಿಟೇಲ್ ಮಳಿಗೆಗಳಲ್ಲಿ ಭವಿಷ್ಯದಲ್ಲಿ ಇವಿ ಚಾರ್ಜಿಂಗ್ ಸೌಲಭ್ಯ, ಫ್ಲೆಕ್ಸ್ ಇಂಧನ ಹಾಗೂ ಹೈಡ್ರೋಜನ್ ಗಳನ್ನು ನೀಡುವುದರ ಜೊತೆಗೆ ಸುಮಾರು 7,000 ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಬಿಪಿಸಿಎಲ್ ಮುಂದಿನ ವರ್ಷಗಳಲ್ಲಿ ಸಮಗ್ರ ಹೂಡಿಕೆ ಯೋಜನೆಗಳನ್ನು ಮಾಡಲಿದೆ.

ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವವರಿಗೆ ಕಡಿಮೆ ದರದಲ್ಲಿ ಭೂಮಿ ನೀಡಲು ಮುಂದಾದ ಸರ್ಕಾರ

ಬಿಪಿಸಿಎಲ್ ಸದ್ಯಕ್ಕೆ ದೇಶದ ಪ್ರಮುಖ ನಗರಗಳ 44 ಪೆಟ್ರೋಲ್ ಬಂಕ್ ಗಳಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿದೆ. ಮುಂದಿನ ಎರಡು ವರ್ಷಗಳಲ್ಲಿ ಈ ಸಂಖ್ಯೆಯನ್ನು 1,000 ಕ್ಕೆ ಹೆಚ್ಚಿಸಲು ಕಂಪನಿ ನಿರ್ಧರಿಸಿದೆ. ಬಿಪಿಸಿಎಲ್ ಕಂಪನಿಯು ಕೊಚ್ಚಿ ಹಾಗೂ ಲಕ್ನೋ ನಗರಗಳಲ್ಲಿ ತ್ರಿಚಕ್ರ ವಾಹನಗಳಿಗೆ ಬ್ಯಾಟರಿ ವಿನಿಮಯ ಪ್ರಯೋಗಗಳನ್ನು ಆರಂಭಿಸಿದೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Rajasthan government to provide land at cheaper rates to open ev charging stations details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X