ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯು ಪ್ರಮುಖ ಪ್ರಕಟಣೆಯನ್ನು ಹೊರಡಿಸಿದೆ. ಇದರನ್ವಯ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಎಲೆಕ್ಟ್ರಿಕ್ ವಾಹನಗಳ ದಾಖಲೆಯನ್ನು ನವೀಕರಿಸಲು ಸಹ ಯಾವುದೇ ಶುಲ್ಕ ಪಾವತಿಸುವಂತಿಲ್ಲ. ಇದಕ್ಕೂ ವಿನಾಯಿತಿ ನೀಡಲಾಗಿದೆ. ಆಗಸ್ಟ್ 2 ರಂದು ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂ ನೋಂದಣಿ ನವೀಕರಣ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಈ ಘೋಷಣೆ ಮಾಡಲಾಗಿದೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಹೇಳಿದೆ. ಈ ಘೋಷಣೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗಿರುವವರಲ್ಲಿ ಉತ್ಸಾಹವನ್ನು ಉಂಟು ಮಾಡಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಮೇ 27 ರಂದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಇಲಾಖೆ ಕರಡು ಅಧಿಸೂಚನೆ ಹೊರಡಿಸಿ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕ ಹಾಗೂನೋಂದಣಿ ನವೀಕರಣ ಶುಲ್ಕದಿಂದ ವಿನಾಯಿತಿ ನೀಡುವ ಯೋಜನೆಯನ್ನು ಪ್ರಸ್ತಾಪಿಸಿತು.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಕರಡು ಸೂಚನೆಯನ್ನು ಪ್ರಕಟಿಸಿದ 30 ದಿನಗಳ ಒಳಗೆ, ಸಾರ್ವಜನಿಕರು ಹಾಗೂ ಮಧ್ಯಸ್ಥಗಾರರಿಗೆ ತಮ್ಮ ಅಭಿಪ್ರಾಯಗಳನ್ನು ಸಲ್ಲಿಸುವಂತೆ ತಿಳಿಸಲಾಗಿತ್ತು. ಆದರೆ ಕರಡು ಪ್ರಕಟಣೆಗೆ ಯಾವುದೇ ಆಕ್ಷೇಪಗಳು ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಘೋಷಣೆಯನ್ನು ಮಾಡಲಾಗಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಾರ್ವಜನಿಕರು ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗಿದ್ದಾರೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಈಗ ಕೇಂದ್ರ ಸಾರಿಗೆ ಇಲಾಖೆಯು ಹೊರಡಿಸಿರುವ ಪ್ರಕಟಣೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯ ಪ್ರಕಾರ, ಈ ಪ್ರಕಟಣೆಯಿಂದಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಗಮನಾರ್ಹವಾಗಿ ಹೆಚ್ಚಾಗುವ ನಿರೀಕ್ಷೆಗಳಿವೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲವನ್ನು ಆಮದು ಮಾಡಿಕೊಳ್ಳುವ ದೇಶಗಳಲ್ಲಿ ಒಂದಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಲು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆ ಕಡಿಮೆಯಾಗಿ, ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾದರೆ ಭಾರತದ ವಾಯು ಮಾಲಿನ್ಯ ಸಮಸ್ಯೆ ಕಡಿಮೆಯಾಗುತ್ತದೆ ಎಂಬುದು ಗಮನಾರ್ಹ ಸಂಗತಿ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಕೇಂದ್ರ ಸರ್ಕಾರವು ಫೇಮ್ ಇಂಡಿಯಾ 2 ಯೋಜನೆಯಡಿ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ಸೇರಿದಂತೆ ವಿವಿಧ ರಿಯಾಯಿತಿಗಳನ್ನು ನೀಡುತ್ತದೆ. ಇದರ ಜೊತೆಗೆ, ವಿವಿಧ ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ನೀತಿಗಳನ್ನು ಘೋಷಿಸಿವೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಇದರ ಅಡಿಯಲ್ಲಿ, ಆಯಾ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಸೇರಿದಂತೆ ರಿಯಾಯಿತಿಗಳನ್ನು ನೀಡುತ್ತಿವೆ. ಇದರಿಂದ ಮುಂಬರುವ ವರ್ಷಗಳಲ್ಲಿಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುವ ನಿರೀಕ್ಷೆಗಳಿವೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಟೆಸ್ಲಾ ಸೇರಿದಂತೆ ದೈತ್ಯ ಕಂಪನಿಗಳು ಶೀಘ್ರದಲ್ಲೇ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಆರಂಭಿಸಲಿವೆ. ಆಮದು ತೆರಿಗೆಯನ್ನು ಕಡಿಮೆ ಮಾಡುವಂತೆ ಟೆಸ್ಲಾ ಕಂಪನಿಯು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸರ್ಕಾರವು ಟೆಸ್ಲಾ ಭಾರತದಲ್ಲಿ ಹೂಡಿಕೆ ಮಾಡಲು ಹಾಗೂ ಉತ್ಪಾದನಾ ಘಟಕ ಆರಂಭಿಸಲು ಆಮದು ತೆರಿಗೆ ಕಡಿತ ಸೇರಿದಂತೆ ವಿವಿಧ ರಿಯಾಯಿತಿಗಳನ್ನು ನೀಡಲು ಸಿದ್ಧವಾಗಿರುವುದಾಗಿ ತಿಳಿಸಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಟೆಸ್ಲಾ ಕಂಪನಿಯು ಶೀಘ್ರದಲ್ಲಿಯೇ ತನ್ನ ವಾಹನಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ. ಓಲಾ ಎಲೆಕ್ಟ್ರಿಕ್ ಶೀಘ್ರದಲ್ಲೇ ಭಾರತದಲ್ಲಿ ತನ್ನ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟವನ್ನು ಆರಂಭಿಸಲಿದೆ. ಓಲಾ ಎಲೆಕ್ಟ್ರಿಕ್ ನ ಮೊದಲ ಎಲೆಕ್ಟ್ರಿಕ್ ಸ್ಕೂಟರ್ ಆಗಸ್ಟ್ 15 ರಂದು ಮಾರಾಟಕ್ಕೆ ಬರಲಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಈಗಾಗಲೇ ಬುಕ್ಕಿಂಗ್ ಆರಂಭಿಸಲಾಗಿದೆ. ಈ ಎಲೆಕ್ಟ್ರಿಕ್ ಸ್ಕೂಟರ್ ಮಾರಾಟಕ್ಕೆ ಇನ್ನೂ ಕೆಲವು ದಿನಗಳು ಬಾಕಿ ಉಳಿದಿವೆ. ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗಾಗಿ ಕೇವಲ 24 ಗಂಟೆಗಳಲ್ಲಿ 1 ಲಕ್ಷಕ್ಕೂ ಹೆಚ್ಚು ಬುಕ್ಕಿಂಗ್‌ಗಳನ್ನು ಸ್ವೀಕರಿಸಿರುವುದಾಗಿ ಓಲಾ ಕಂಪನಿ ತಿಳಿಸಿದೆ.

ಎಲೆಕ್ಟ್ರಿಕ್ ವಾಹನ ಖರೀದಿಸ ಬಯಸುವವರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸಾರಿಗೆ ಇಲಾಖೆ

ಓಲಾ ಎಲೆಕ್ಟ್ರಿಕ್ ಸ್ಕೂಟರ್‌ಗೆ ನಿರ್ದಿಷ್ಟವಾಗಿ ಎಷ್ಟು ಬುಕ್ಕಿಂಗ್‌ಗಳು ಬಂದಿವೆ ಎಂಬುದನ್ನು ಓಲಾ ಎಲೆಕ್ಟ್ರಿಕ್ ಅಧಿಕೃತವಾಗಿ ಘೋಷಿಸಿಲ್ಲ. ಓಲಾ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಜನರು ಹೆಚ್ಚು ನಿರೀಕ್ಷೆ ಹೊಂದಿರುವುದರಿಂದ ಹೆಚ್ಚು ಬುಕ್ಕಿಂಗ್‌ಗಳನ್ನು ಪಡೆದಿದೆ ಎಂದು ಹೇಳಲಾಗಿದೆ. ಎಲೆಕ್ಟ್ರಿಕ್ ಚಾರ್ಜಿಂಗ್ ಕೇಂದ್ರಗಳು ಕಡಿಮೆ ಸಂಖ್ಯೆಯಲ್ಲಿರುವುದರಿಂದ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಸಂಖ್ಯೆಯಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆದು ಈ ಸಮಸ್ಯೆಗೆ ಪರಿಹಾರ ನೀಡುವ ಸಾಧ್ಯತೆಗಳಿವೆ.

Most Read Articles

Kannada
English summary
Registration fees exempted for electric vehicles details
Story first published: Wednesday, August 4, 2021, 11:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X