ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಭಾರತದ ರಿಲಯನ್ಸ್ ಜಿಯೋ ಇಂಗ್ಲೆಂಡಿನ ಬ್ರಿಟಿಷ್ ಪೆಟ್ರೋಲಿಯಂ ಜೊತೆ ಮೈತ್ರಿ ಆರಂಭಿಸಿದೆ ಎಂದು ವರದಿಯಾಗಿದೆ. ಈ ಮೈತ್ರಿಯ ಮೂಲಕ, ದೇಶಾದ್ಯಂತ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಕೆಲಸ ನಡೆಯುತ್ತಿದೆ. ಇದಕ್ಕೆ ಸಂಬಂಧಿಸಿದ ಮತ್ತಷ್ಟು ವಿವರಗಳನ್ನು ಈ ಲೇಖನದಲ್ಲಿ ನೋಡೋಣ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಜನಪ್ರಿಯ ದೂರ ಸಂಪರ್ಕ ಕಂಪನಿಯಾದ ರಿಲಯನ್ಸ್ ಜಿಯೋ ತನ್ನ ಕೈಗೆಟುಕುವ ಇಂಟರ್ ನೆಟ್ ಸೇವೆಗೆ ಹೆಸರುವಾಸಿಯಾಗಿದೆ. ಭಾರತ ಮೂಲದ ರಿಲಯನ್ಸ್ ಜಿಯೋ ಕಂಪನಿಯು ಇತ್ತೀಚೆಗೆ ಎಲೆಕ್ಟ್ರಿಕ್ ವಾಹನಗಳಿಗಾಗಿ ದೇಶದ ಅತಿದೊಡ್ಡ ಎಲೆಕ್ಟ್ರಿಕ್ ವಾಹನ ಬ್ಯಾಟರಿ ಸ್ಥಾವರವನ್ನು ನಿರ್ಮಿಸುವ ಯೋಜನೆಯ ಬಗ್ಗೆ ಘೋಷಿಸಿತ್ತು.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಈ ಹಿನ್ನೆಲೆಯಲ್ಲಿ ಕಂಪನಿಯು ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಮತ್ತಷ್ಟು ಹೆಚ್ಚಿಸಲು ಇನ್ನೂ ಹಲವು ಹೊಸ ಚಟುವಟಿಕೆಗಳನ್ನು ಆರಂಭಿಸಿದೆ. ಅದರಂತೆ, ಕಂಪನಿಯು ದೇಶಾದ್ಯಂತ ಪ್ರಮುಖ ಪ್ರದೇಶಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಪ್ರಕ್ರಿಯೆಯಲ್ಲಿ ನಿರತವಾಗಿದೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಈ ಉದ್ದೇಶಕ್ಕಾಗಿ ರಿಲಯನ್ಸ್ ಜಿಯೋ ಬ್ರಿಟಿಷ್ ಪೆಟ್ರೋಲಿಯಂ ಕಂಪನಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ವರದಿಯಾಗಿದೆ. ಬ್ಲೂಸ್ಮಾರ್ಟ್ ಸಹ ಈ ಕಂಪನಿಗಳ ಜೊತೆಗೆ ಮೈತ್ರಿಕೂಟಕ್ಕೆ ಸೇರಿಕೊಂಡಿದೆ. ಈ ಮೂರು ಕಂಪನಿಗಳು ಒಟ್ಟಾಗಿ ದೇಶದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲಿವೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಈ ಕಂಪನಿಗಳು ಜಂಟಿಯಾಗಿ ತೆರೆಯಲಿರುವ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳು ಇನ್ನು ಕೆಲವು ವರ್ಷಗಳಲ್ಲಿ ಬಳಕೆಗೆ ಬರಲಿವೆ ಎಂದು ವರದಿಯಾಗಿದೆ. ಈ ಕಂಪನಿಗಳು ಮೂಲ ಸೌಕರ್ಯ ಯೋಜನೆ, ಅಭಿವೃದ್ಧಿ ಹಾಗೂ ಕಾರ್ಯಾಚರಣೆಯಲ್ಲಿ ಒಟ್ಟಾಗಿ ಕಾರ್ಯ ನಿರ್ವಹಿಸುವ ನಿರೀಕ್ಷೆಗಳಿವೆ. ವರದಿಗಳ ಪ್ರಕಾರ ಈ ಸಹ ಭಾಗಿತ್ವವು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮೊದಲ ಹಂತದ ಚಾರ್ಜಿಂಗ್ ಕೇಂದ್ರಗಳನ್ನು ನಿರ್ಮಿಸಲು ನಿರ್ಧರಿಸಿದೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಈ ಚಾರ್ಜಿಂಗ್ ಕೇಂದ್ರದಲ್ಲಿ ಏಕಕಾಲಕ್ಕೆ 30 ಎಲೆಕ್ಟ್ರಿಕ್ ವಾಹನಗಳನ್ನು ಚಾರ್ಜ್ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಲಾಗಿದೆ. ಇಂಗ್ಲೆಂಡ್ ಮೂಲದ ಬ್ರಿಟಿಷ್ ಪೆಟ್ರೋಲಿಯಂ ತನ್ನ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ವಿಶ್ವಾದ್ಯಂತ ಆರಂಭಿಸಿದೆ. ಅದೇ ತಂತ್ರವನ್ನು ಬಳಸಿ ಕಂಪನಿಯು ಭಾರತದಲ್ಲೂ ವಿಶ್ವ ದರ್ಜೆಯ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲು ನಿರ್ಧರಿಸಿದೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಈ ಹಿನ್ನೆಲೆಯಲ್ಲಿ ವಿಶ್ವದರ್ಜೆಯ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳು ಶೀಘ್ರದಲ್ಲೇ ಭಾರತದಲ್ಲಿಯೂ ಬಳಕೆಗೆ ಬರುವ ನಿರೀಕ್ಷೆಗಳಿವೆ. ರಿಲಯನ್ಸ್ ಜಿಯೋ - ಬ್ರಿಟಿಷ್ ಪೆಟ್ರೋಲಿಯಂ ಸಹ ಭಾಗಿತ್ವವು ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಮಾತ್ರವಲ್ಲದೆ ರಿಲಯನ್ಸ್ ಕಂಪನಿಯ ಪೆಟ್ರೋಲಿಯಂ ನೆಟ್ವರ್ಕ್ ಅನ್ನು ಸಹ ವಿಸ್ತರಿಸಲಿದೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಈಗ ಸುಮಾರು 5,500 ಪೆಟ್ರೋಲ್ ಸ್ಟಾಕ್ ಗಳು ರಿಲಯನ್ಸ್ ಕಂಪನಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಮುಂದಿನ ಐದು ವರ್ಷಗಳಲ್ಲಿ 1,400 ಕೇಂದ್ರಗಳು ಕಾರ್ಯ ನಿರ್ವಹಿಸುವ ನಿರೀಕ್ಷೆಗಳಿವೆ. ಕಂಪನಿಯು ಪೆಟ್ರೋಲ್ ಬಂಕ್ ಹಾಗೂ ಎಲೆಕ್ಟ್ರಿಕ್ ವಾಹನಗಳಿಗೆ ಹೊಸ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲು ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂಬುದು ಇದರಿಂದ ಸ್ಪಷ್ಟವಾಗಿದೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಮೂಲಭೂತ ಸೌಕರ್ಯಗಳ ಕೊರತೆಯಿರುವ ಹಿನ್ನೆಲೆಯಲ್ಲಿ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಇದೇ ವೇಳೆ ಎಲೆಕ್ಟ್ರಿಕ್ ವಾಹನಗಳ ಬಳಕೆ ಹಿಂದೆಂದಿಗಿಂತಲೂ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಹೊಸ ಚಾರ್ಜಿಂಗ್ ಕೇಂದ್ರಗಳ ಆಗಮನದಿಂದ ಈ ಪ್ರಮಾಣವು ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಹಾಗೂ ಖಾಸಗಿ ಕಂಪನಿಗಳು ನಿರತವಾಗಿವೆ. ಇದರಿಂದ ಖಂಡಿತವಾಗಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆ ಹಲವು ಪಟ್ಟು ಹೆಚ್ಚಾಗುತ್ತದೆ ಎಂದು ಹೇಳಲಾಗಿದೆ. ಎಲೆಕ್ಟ್ರಿಕ್ ವಾಹನಗಳಿಗಾಗಿ ಬಹುಕೋಟಿ ವೆಚ್ಚದ ಬ್ಯಾಟರಿ ಉತ್ಪಾದನಾ ಘಟಕವನ್ನು ಆರಂಭಿಸಲು ರಿಲಯನ್ಸ್ ಕಂಪನಿಯು ನಿರ್ಧರಿಸಿದೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

ಕಂಪನಿಯು ಗ್ರೀನ್ ಎನರ್ಜಿ ಜಿಗಾ ಕಾಂಪ್ಲೆಕ್ಸ್ ಎಂಬ ಬೃಹತ್ ಬ್ಯಾಟರಿ ಘಟಕವನ್ನು ಆರಂಭಿಸುವ ಯೋಜನೆಯನ್ನು ಘೋಷಿಸಿದೆ. ಕಂಪನಿಯು ರೂ. 75,000 ಕೋಟಿ ಹೂಡಿಕೆಯೊಂದಿಗೆ ಎಲೆಕ್ಟ್ರಿಕ್ ವಾಹನ ಉದ್ಯಮಕ್ಕೆ ಪ್ರವೇಶಿಸಲು ಸಿದ್ದತೆ ನಡೆಸುತ್ತಿದೆ. ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಉದ್ಯಮವು ವೇಗವಾಗಿ ಬೆಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಟಾರ್ಟ್ ಅಪ್ ಕಂಪನಿಗಳು ಮಾತ್ರವಲ್ಲದೇ ಹಲವು ಖ್ಯಾತ ನಾಮ ಕಂಪನಿಗಳು ಸಹ ದೇಶಿಯ ಮಾರುಕಟ್ಟೆಯಲ್ಲಿ ತಮ್ಮ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ.

ಇವಿ ಚಾರ್ಜಿಂಗ್ ಕೇಂದ್ರ ತೆರೆಯಲು ಬ್ರಿಟಿಷ್ ಮೂಲದ ಕಂಪನಿಯೊಂದಿಗೆ ಕೈ ಜೋಡಿಸಿದ ರಿಲಯನ್ಸ್ ಜಿಯೋ

Hyundai, Mahindra and Mahindra, Tata Motors, MG Motor ಸೇರಿದಂತೆ ಹಲವು ಕಂಪನಿಗಳು ಈಗಾಗಲೇ ತಮ್ಮ ಎಲೆಕ್ಟ್ರಿಕ್ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿವೆ. Tata Motors ಕಂಪನಿಯು ಕೆಲವು ದಿನಗಳ ಹಿಂದಷ್ಟೇ ತನ್ನ Tigor ಎಲೆಕ್ಟ್ರಿಕ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ. ದೇಶಿಯ ಮಾರುಕಟ್ಟೆಯಲ್ಲಿ Bajaj Chetak, TVS iQube ಸೇರಿದಂತೆ ಹಲವು ಕಂಪನಿಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರಾಟ ಮಾಡಲಾಗುತ್ತದೆ.

Most Read Articles

Kannada
English summary
Reliance jio joins hand with british company to setup ev charging stations in india details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X