ಅಗಸ್ಟ್ ಅವಧಿಯಲ್ಲಿ ರೆನಾಲ್ಟ್ ಕಾರುಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಣೆ
ರೆನಾಲ್ಟ್ ಇಂಡಿಯಾ ಕಂಪನಿಯು ಕೋವಿಡ್ ಸಂಕಷ್ಟದ ನಡುವೆಯೂ ಹೊಸ ಕಾರು ಮಾರಾಟದಲ್ಲಿ ಹಲವು ತಿಂಗಳಿನಿಂದ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಇತ್ತೀಚೆಗೆ ಬಿಡುಗಡೆಯಾಗಲಿರುವ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಹೊಸ ಟ್ರೈಬರ್ ಮಾರಾಟದಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕೋವಿಡ್ ಪರಿಣಾಮ ಕಳೆದ ವರ್ಷ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ವಿವಿಧ ಕಾರು ಕಂಪನಿಗಳಿಗೆ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿದ್ದು, ಕೋವಿಡ್ 2ನೇ ಅಲೆ ಪರಿಣಾಮ ಮೇ ಅವಧಿಯಲ್ಲಿ ತುಸು ಹಿನ್ನಡೆ ಅನುಭವಿಸಿದರೂ ಇದೀಗ ಪರಿಸ್ಥಿತಿಗೆ ಅನುಗುಣವಾಗಿ ಮಾರಾಟ ಮತ್ತೆ ಹೆಚ್ಚಳವಾಗುತ್ತಿದೆ.

ಹೊಸ ವಾಹನಗಳ ಬೇಡಿಕೆ ಹೆಚ್ಚುತ್ತಿರುವುದರಿಂದ ವಿವಿಧ ಕಾರು ಕಂಪನಿಗಳು ಭರ್ಜರಿ ಆಫರ್ ಘೋಷಣೆ ಮಾಡುತ್ತಿದ್ದು, ರೆನಾಲ್ಟ್ ಕಂಪನಿಯು ಕೂಡಾ ವಿವಿಧ ಕಾರುಗಳ ಖರೀದಿ ಮೇಲೆ ಆಕರ್ಷಕ ಡಿಸ್ಕೌಂಟ್ ಆಫರ್ ನೀಡುತ್ತಿದೆ.

ರೆನಾಲ್ಟ್ ಕಂಪನಿಯು ಕ್ವಿಡ್, ಟ್ರೈಬರ್, ಡಸ್ಟರ್ ಮತ್ತು ಕಿಗರ್ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ಈ ತಿಂಗಳಾಂತ್ಯದ ತನಕ ರೆನಾಲ್ಟ್ ಕಾರುಗಳ ಖರೀದಿ ಮೇಲೂ ಗ್ರಾಹಕರು ಆಕರ್ಷಕ ಆಫರ್ ಪಡೆದುಕೊಳ್ಳಬಹುದಾಗಿದೆ.

ಹೊಸ ಆಫರ್‌ಗಳಲ್ಲಿ ಕಿಗರ್ ಕಾರಿನ ಮೇಲೆ ಕನಿಷ್ಠ ಮತ್ತು ಡಸ್ಟರ್ ಕಾರಿನ ಮೇಲೆ ಗರಿಷ್ಠ ಆಫರ್ ಘೋಷಣೆ ಮಾಡಲಾಗಿದ್ದು, ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಆಕರ್ಷಕ ಬಡ್ಡಿದರವು ಪ್ರಮುಖ ಆಕರ್ಷಣೆಯಾಗಲಿದೆ.

ಗ್ರಾಹಕರು ಆರಂಭಿಕ ಕಾರು ಮಾದರಿಯಾದ ಕ್ವಿಡ್ ಖರೀದಿ ಮೇಲೆ ರೂ.40 ಸಾವಿರ ಮೌಲ್ಯದ ಆಫರ್ ಲಭ್ಯವಿದ್ದಲ್ಲಿ ಟಾಪ್ ಎಂಡ್ ಮಾದರಿಯಾದ ಡಸ್ಟರ್ ಎಸ್‌ಯುವಿ ಕಾರಿನ ಮೇಲೆ ರೂ.65 ಸಾವಿರ ತನಕ ಆಫರ್ ಪಡೆಯಬಹುದಾಗಿದೆ.

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲಿನ ರೂ. 40 ಸಾವಿರ ಮೌಲ್ಯದ ಆಫರ್‌ಗಳಲ್ಲಿ ರೂ.10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.10 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.10 ಸಾವಿರ ಲೊಯಾಲಿಟಿ, ರೂ. 10 ಸಾವಿರ ತನಕ ಗ್ರಾಮೀಣ ಗ್ರಾಮದ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಮತ್ತು ರೂ.5 ಸಾವಿರ ಮೌಲ್ಯದ ಫ್ರೀಡಂ ಕೊಡುಗೆಗಳನ್ನು ಪಡೆಯಬಹುದು.

ಬಜೆಟ್ ಬೆಲೆಯಲ್ಲಿ ಸದ್ದು ಮಾಡುತ್ತಿರುವ ಟ್ರೈಬರ್ ಕಾರಿನ ಖರೀದಿಯ ಮೇಲೂ ಕೂಡಾ ಆಕರ್ಷಕ ಆಫರ್‌ಗಳು ಲಭ್ಯವಿದ್ದು, ಗರಿಷ್ಠ ರೂ.60 ಸಾವಿರ ಮೌಲ್ಯದ ಆಫರ್‌ಗಳನ್ನು ನೀಡಲಾಗುತ್ತಿದೆ. ಇದರಲ್ಲಿ ಎಕ್ಸ್‌ಚೆಂಜ್ ಆಫರ್, ಕ್ಯಾಶ್ ಡಿಸ್ಕೌಂಟ್, ಲೊಯಾಲಿಟಿ ಬೋನಸ್ ಮತ್ತು ಫ್ರೀಡಂ ಕೊಡುಗೆಗಳನ್ನು ನೀಡುತ್ತಿದೆ.

ರೆನಾಲ್ಟ್ ಕಂಪನಿಯು ಹೊಸದಾಗಿ ಬಿಡುಗಡೆ ಮಾಡಲಾದ ಕಿಗರ್ ಕಾರು ಖರೀದಿಯ ಮೇಲೂ ವಿವಿಧ ಆಫರ್‌ಗಳನ್ನು ಘೋಷಿಸಿದ್ದು, ಅಗಸ್ಟ್ ಅವಧಿಯಲ್ಲಿ ಕಿಗರ್ ಕಾರು ಖರೀದಿಸುವ ಗ್ರಾಹಕರಿಗೆ ರೂ.10 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್‌ನೊಂದಿಗೆ 5 ವರ್ಷಗಳ ವಿಸ್ತರಿತ ವಾರಂಟಿ ಆಫರ್ ನೀಡುತ್ತಿದೆ.

ಡಸ್ಟರ್ ಕಾರು ಖರೀದಿಯ ಮೇಲೆ ರೆನಾಲ್ಟ್ ಕಂಪನಿಯು ರೂ. 65 ಸಾವಿರ ಮೌಲ್ಯದ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಕಾರಿನ ಟರ್ಬೊ ಆವೃತ್ತಿಯನ್ನು ಖರೀದಿಸುವ ಗ್ರಾಹಕರಿಗೆ ಗರಿಷ್ಠ ಡಿಸ್ಕೌಂಟ್ ಲಭ್ಯವಿದೆ.

ಇದರ ಜೊತೆಗೆ ರೆನಾಲ್ಟ್ ಕಂಪನಿಯು ಆರ್ಥಿಕ ಸಂಕಷ್ಟದಿಂದ ಕಾರು ಖರೀದಿಯಿಂದ ಹಿಂದೆ ಸರಿದಿರುವ ಗ್ರಾಹಕರಿಗೆ ಅತ್ಯುತ್ತಮ ಫೈನಾನ್ಸ್ ಅಸಿಸ್ಟ್ ಆರಂಭಿಸಿದ್ದು, ಕ್ವಿಡ್, ಕಿಗರ್ ಮತ್ತು ಟ್ರೈಬರ್ ಕಾರಿನ ಖರೀದಿಯ ಯೋಜನೆಯಿದ್ದಲ್ಲಿ ಮುಂದೂಡದೆ ಖರೀದಿ ಮಾಡಿ ಮತ್ತು 2022ರಿಂದ ಇಎಂಐ ಪಾವತಿಸಿ ಎನ್ನುವ ಆಫರ್ ನೀಡುತ್ತಿದೆ.


Click it and Unblock the Notifications