ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಕೋವಿಡ್ ಪರಿಣಾಮ ವಾಹನ ಮಾರಾಟವು ಕುಸಿತ ಒಂದು ಕಡೆಯಾದಲ್ಲಿ ವಾಹನ ಉತ್ಪಾದನೆಗೆ ಬೇಕಿರುವ ಪ್ರಮುಖ ಬಿಡಿಭಾಗಗಳ ಬೆಲೆ ಹೆಚ್ಚುತ್ತಿರುವುದು ಆಟೋ ಉದ್ಯಮಕ್ಕೆ ನಿರಂತರ ಹಿನ್ನಡೆ ಉಂಟು ಮಾಡುತ್ತಿದ್ದು, ಬಿಡಿಭಾಗಗಳ ಬೆಲೆ ಹೆಚ್ಚಳ ಪರಿಣಾಮ ಪ್ರಮುಖ ವಾಹನ ಉತ್ಪಾದನಾ ಕಂಪನಿಗಳು ತಮ್ಮ ವಾಹನಗಳ ಬೆಲೆ ಹೆಚ್ಚಳ ಮಾಡುತ್ತಿವೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ಆಟೋ ಕಂಪನಿಗಳು ಸಹ ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಸಾಕಷ್ಟು ಬೆಲೆ ಏರಿಕೆ ಕಂಡಿವೆ. 2021ರ ಅವಧಿಯಲ್ಲೇ ಈಗಾಗಲೇ ಪ್ರಮುಖ ಕಾರುಗಳ ಬೆಲೆಯಲ್ಲಿ ಎರಡರಿಂದ ಮೂರು ಬಾರಿ ಬೆಲೆ ಹೆಚ್ಚಳವಾಗಿದ್ದು, ಇದೀಗ ಮತ್ತೆ ಹೊಸ ಕಾರುಗಳ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ರೆನಾಲ್ಟ್ ಇಂಡಿಯಾ ಕಂಪನಿಯು ಸಹ ತನ್ನ ಪ್ರಮುಖ ಕಾರುಗಳ ಬೆಲೆಯನ್ನು ಇಂದಿನಿಂದಲೇ ಅನ್ವಯವಾಗುವಂತೆ ಹೆಚ್ಚಳ ಮಾಡಿದ್ದು, ರೆನಾಲ್ಟ್ ಕಾರುಗಳ ಬೆಲೆಯಲ್ಲಿ ವಿವಿಧ ಕಾರು ಮಾದರಿಗಳ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.7 ಸಾವಿರದಿಂದ 39 ಸಾವಿರದಷ್ಟು ಹೆಚ್ಚಳವಾಗಿದೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಈ ಹಿಂದೆ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಬಿಡಿಭಾಗಗಳ ವೆಚ್ಚವು ನಿರಂತರವಾಗಿ ಹೆಚ್ಚುತ್ತಿರುವ ಪರಿಣಾಮ ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿದ್ದು, ಹೊಸ ವಾಹನಗಳು ಕಳೆದ ಒಂದು ವರ್ಷದಲ್ಲಿ ಶೇ. 2ರಿಂದ ಶೇ.4 ರಷ್ಟು ಬೆಲೆ ಹೆಚ್ಚಳವಾಗಿವೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಆಟೋ ಕಂಪನಿಗಳು ವಿವಿಧ ಕಾರು ಮಾದರಿಗಳಿಗೆ ಅನುಗುಣವಾಗಿ ಪ್ರತಿ ಎರಡು ತಿಂಗಳಿಗೆ ಒಂದು ಬಾರಿ ಶೇ. 1ರಿಂದ ಶೇ.2 ರಷ್ಟು ಬೆಲೆ ಹೆಚ್ಚಳವಾಗುತ್ತಿದ್ದು, ಕಳೆದ ಒಂದು ವರ್ಷದಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿಯೇ ಸರಾಸರಿಯಾಗಿ ರೂ. 40 ಸಾವಿರದಿಂದ ರೂ.80 ಸಾವಿರದಷ್ಟು ಮೂಲ ಬೆಲೆಯಲ್ಲಿ ಹೆಚ್ಚಳವಾಗಿವೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಮಧ್ಯಮ ಗಾತ್ರದ ಕಾರುಗಳ ಬೆಲೆಯಲ್ಲಿ ರೂ. 1 ಲಕ್ಷದಿಂದ ರೂ. 1.50 ಲಕ್ಷದಷ್ಟು ಬೆಲೆ ಹೆಚ್ಚಳವಾಗಿದ್ದು, ವಿದೇಶಿ ಮಾರುಕಟ್ಟೆಗಳಿಂದ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗಿರುವ ಪರಿಣಾಮ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಸದ್ಯ ರೆನಾಲ್ಟ್ ಕಂಪನಿಯು ಬಿಡುಗಡೆ ಮಾಡಿರುವ ಹೊಸ ದರ ಪಟ್ಟಿದಲ್ಲಿ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಶೇ. 1 ರಿಂದ ಶೇ.2 ರಷ್ಟು ಹೆಚ್ಚಳವಾಗಿದ್ದು, ಹೊಸ ದರಪಟ್ಟಿ ಕೂಡಾ ಬಿಡುಗಡೆಯಾಗಿದೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಹೊಸ ದರಪಟ್ಟಿಯಲ್ಲಿ ಕ್ವಿಡ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.3.32 ಲಕ್ಷದಿಂದ ರೂ.5.48 ಲಕ್ಷ ಬೆಲೆ ಹೊಂದಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 7 ಸಾವಿರದಿಂದ ರೂ. 14 ಸಾವಿರ ಬೆಲೆ ಹೆಚ್ಚಳವಾಗಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಇತ್ತೀಚೆಗೆ ಬಿಡುಗಡೆಗೊಂಡಿರುವ ಕಿಗರ್ ಕಾರು ಮಾದರಿಯು ಸಹ ಎರಡನೇ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಳ್ಳುತ್ತಿದ್ದು, ಕಿಗರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.64 ಲಕ್ಷದಿಂದ ರೂ. 10.08 ಲಕ್ಷ ಬೆಲೆ ಹೊಂದಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 9 ಸಾವಿರದಿಂದ ರೂ. 39 ಸಾವಿರ ಬೆಲೆ ಹೆಚ್ಚಳವಾಗಿದೆ.

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಟ್ರೈಬರ ಕಾರು ಮಾದರಿಯು ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.50 ಲಕ್ಷದಿಂದ ರೂ. 7.95 ಲಕ್ಷ ಬೆಲೆ ಹೊಂದಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 13 ಸಾವಿರದಿಂದ ರೂ. 20 ಸಾವಿರ ಬೆಲೆ ಹೆಚ್ಚಳವಾಗಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಕಿಗರ್, ಡಸ್ಟರ್ ಸೇರಿದಂತೆ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಇನ್ನು ಟಾಪ್ ಎಂಡ್ ಕಾರು ಮಾದರಿಯಾದ ಡಸ್ಟರ್ ಕಾರು ಹೊಸ ದರಪಟ್ಟಿಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.86 ಲಕ್ಷದಿಂದ ರೂ.14.25 ಲಕ್ಷ ಬೆಲೆ ಹೊಂದಿದ್ದು, ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.13 ಸಾವಿರ ಬೆಲೆ ಹೆಚ್ಚಳ ಮಾಡಲಾಗಿದೆ.

More from DriveSpark

Article Published On: Saturday, June 5, 2021, 15:28 [IST]
English summary
Renault Cars Prices Increased In India On All Models. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+