ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

ಟೋಕಿಯೊ ಒಲಂಪಿಕ್ಸ್ ನಲ್ಲಿ ಭಾರತದ ಬಾಕ್ಸರ್ ಲವ್ಲಿನಾ ಬೊರ್ಗೊಹೈನ್ ಅವರು ಕಂಚಿನ ಪದಕವನ್ನು ಗೆದ್ದುಕೊಂಡವರು ಗೆದ್ದಿದ್ದರು. ಒಲಂಪಿಕ್ಸ್ ಅದ್ಭುತ ಪ್ರದರ್ಶನಕ್ಕಾಗಿ ಅಭಿನಂದಿಸಲು, ರೆನಾಲ್ಟ್ ಇಂಡಿಯಾ ಬಾಕ್ಸರ್‌ಗೆ ಹೊಸ ಕಿಗರ್ ಎಸ್‌ಯುವಿಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

Renault India ಮಾರಾಟ ಮತ್ತು ಮಾರ್ಕೆಟಿಂಗ್ ಉಪಾಧ್ಯಕ್ಷ ಸುಧೀರ್ ಮಲ್ಹೋತ್ರಾ ಅವರು ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರನ್ನು ಹಸ್ತಾಂತರಿಸಿದರು. ಲವ್ಲಿನಾ ಅವರು ಗುವಾಹಟಿಯಲ್ಲಿ ವಾಹನದ ವಿತರಣೆಯನ್ನು ಪಡೆದುಕೊಂಡ ಮಾತನಾಡಿ, ತನ್ನ ಮೊದಲ ಕಾರು ಇದುಗಾಗಿದೆ, ಡ್ರೈವಿಂಗ್ ಮಾಡಲು ತಿಳಿದಿದ್ದರೂ, ಹೆಚ್ಚು ಸಮಯ ಸಿಗದ ಕಾರಣ ಡ್ರೈವಿಂಗ್ ಕೌಶಲ್ಯದಲ್ಲಿ ಹೆಚ್ಚು ವಿಶ್ವಾಸವಿಲ್ಲ. ತನ್ನ ಹೊಸ ಎಸ್‌ಯುವಿಯಲ್ಲಿ ತನ್ನ ಪೋಷಕರನ್ನು ಕರೆದುಕೊಂಡು ಹೋಗಲು ತಾನು ಇಷ್ಟಪಡುತ್ತೇನೆ ಎಂದು ಹೇಳಿದರು.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

ಟೋಕಿಯೊ ಒಲಂಪಿಕ್ಸ್ ನಲ್ಲಿ ಲವ್ಲಿನಾ ಸೆಮಿ ಫೈನಲ್​ ಪಂದ್ಯದಲ್ಲಿ ಟರ್ಕಿಯಾದ ಬುಸೆನಾಜ್ ಸುರ್ಮೆನೆಲಿ ವಿರುದ್ಧ 5-0 ಅಂತರದಲ್ಲಿ ಸೋಲು ಕಾಣುವ ಮೂಲಕ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ. ಮಹಿಳಾ ಬಾಕ್ಸಿಂಗ್​ನ 69 ಕೆಜಿ ವಿಭಾಗದ ಸೆಮಿಫೈನಲ್​ನಲ್ಲಿ ಲವ್ಲಿನಾ ಬೊರ್ಗೊಹೈನ್‌ಗೆ ಎದುರಾಳಿ ಅಗ್ರ ಶ್ರೇಯಾಂಕಿತೆ ಟರ್ಕಿಯ ಬುಸೆನಾಜ್ ಸುರ್ಮೆನೆಲಿ ವಿರುದ್ಧ ತಿರುಗಿ ಬೀಳಲು ಸಾಧ್ಯವಾಗಲೇ ಇಲ್ಲ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

ಬುಸೆನಾಜ್ ಆಕ್ರಮಣಕಾರಿ ಆಟಕ್ಕೆ ಲವ್ಲಿನಾ ಸೋಲು ಅನುಭವಿಸಿದರು. ಆಗ ಸೆಮಿಫೈನಲ್​ಗೆ ಪ್ರವೇಶಿಸುವ ಮೂಲಕ ಕನಿಷ್ಠ ಕಂಚಿನ ಪದಕ ಖಾತ್ರಿಪಡಿಸಿದ್ದರು. ಇವರು ಒಲಂಪಿಕ್ಸ್ ನಲ್ಲಿ ಚಿನ್ನದ ಪದಕ ಗುರಿಯನ್ನಿರಿಸಿದ್ದರು. ಆದರೆ ಲವ್ಲಿನಾ ಬೊರ್ಗೊಹೈನ್ ಅವರು ಸೋತರೂ ವಿಶೇಷ ಸಾಧನೆ ಮಾಡಿದ್ದಾರೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

ಇತ್ತೀಚೆಗೆ Renault ಕಂಪನಿಯು 2020 ರ ಟೋಕಿಯೊ ಒಲಂಪಿಕ್ಸ್ ಬೆಳ್ಳಿ ಪದಕ ವಿಜೇತರಾದ ಮೀರಾಬಾಯಿ ಚಾನು ಅವರಿಗೂ ಹೊಸ Kiger ಎಸ್‌ಯುವಿ ಮಾದರಿಯನ್ನು ಉಡುಗೊರೆಯಾಗಿ ನೀಡಿದ್ದಾರೆ, ಟೋಕಿಯೊ ಒಲಂಪಿಕ್ಸ್‌ನಲ್ಲಿ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೀರಾಬಾಯಿ ಚಾನು ಅವರು ಬೆಳ್ಳಿ ಪದಕ ಗೆದ್ದ ಹಿನ್ನೆಲೆಯಲ್ಲಿ Renault ಕಂಪನಿಯು ಈ ಉಡುಗೊರೆಯನ್ನು ನೀಡಿದೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

Renault India ಕಂಪನಿಯು ಭಾರತಕ್ಕೆ ಕಾಲಿಟ್ಟು 10 ವರ್ಷಗಳು ಪೂರ್ತಿಯಾಗಿವೆ. ಈ Renault Kiger ಬಜೆಟ್ ಬೆಲೆಯೊಂದಿಗೆ ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆದುಕೊಂಡಿದೆ. ಹೊಸ ಕಾರಿನ ಮೂಲಕ Renault ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

Renault Kiger ಕಾಂಪ್ಯಾಕ್ಟ್ ಎಸ್‍ಯುವಿಯು ಮಾದರಿಯು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಲಭ್ಯವಿದೆ. ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಒಂದೇ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಗೊಳ್ಳುವುದರ ವಿಭಿನ್ನ ಗ್ರಾಹಕರನ್ನು ಸೆಳೆಯಲ್ಲಿ ಯಶಸ್ವಿಯಾಗುತ್ತಿವೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

ಇನ್ನು ಈ ಕಾರಿನಲ್ಲಿ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಎಂಜಿನ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಸಾಮಾನ್ಯ ಪೆಟ್ರೋಲ್ ಎಂಜಿನ್ 72 ಬಿಹೆಚ್‍ಪಿ ಪವರ್ ಮತ್ತು ಟರ್ಬೋ ಪೆಟ್ರೋಲ್ ಎಂಜಿನ್ 100 ಬಿಜೆಚ್‍ಪಿ ಪವರ್ ಅನ್ನು ಉತ್ಪಾಸುತ್ತದೆ. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಗಳನ್ನು ನೀಡಲಾಗಿದೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

Renault Kiger ಕಾರು ಪ್ರತಿಸ್ಪರ್ಧಿಮಾದರಿಗಳಂತೆ ಹಲವಾರು ಆಕರ್ಷಕ ಫೀಚರ್ಸ್ ಗಳನ್ನು ಒಳಗೊಂಡಿದೆ. ಈ Kiger ಕಾರಿನಲ್ಲಿ ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್ ಮತ್ತು ರೂಫ್‌ರೈಲ್ಸ್ ಅನ್ನು ಹೊಂದಿದೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

ಇನ್ನು ಈ ಕಾರಿನಲ್ಲಿ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಹೊಂದಿದ್ದು ಕಾರಿನ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಕನೆಕ್ಟಿವಿಟಿಯನ್ನು ಹೊಂದಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ ಹೊಂದಿದೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

Renault ಕಂಪನಿಯು ತನ್ನ Kiger ಮಾದರಿಯನ್ನು ನೇಪಾಳಕ್ಕೆ ರಫ್ತು ಮಾಡಲು ಇತ್ತೀಚೆಗೆ ಪ್ರಾರಂಭಿಸಿದೆ. ಭಾರತದಲ್ಲಿ ತಯಾರಿಸಿದ ಸ್ಮಾರ್ಟ್, ಸ್ಪೋರ್ಟಿ ಲುಕ್ ಅನ್ನು ಹೊಂದಿರುವ ಮೇಡ್ ಇನ್ ಇಂಡಿಯಾ Kiger ಕಾರನ್ನು ನೇಪಾಳಕ್ಕೆ ರಫ್ತು ಮಾಡುತ್ತಿದೆ, ಶೀಘ್ರದಲ್ಲೇ ಮೇಡ್ ಇನ್-ಇಂಡಿಯಾ Kiger ಸಾರ್ಕ್ ಪ್ರದೇಶದ ಇತರ ದೇಶಗಳಲ್ಲಿಯೂ ಲಭ್ಯವಾಗಲಿದೆ. ನೇಪಾಳದಲ್ಲಿ Renault Kiger ಗ್ರಾಹಕರಿಗೆ ಬ್ರ್ಯಾಂಡ್‌ನ ಡೀಲರ್ - ಅಡ್ವಾನ್ಸ್ಡ್ ಆಟೋಮೊಬೈಲ್ಸ್ ಪ್ರೈವೇಟ್ ಲಿಮಿಟೆಡ್ ಮೂಲಕ ಲಭ್ಯವಾಗಲಿದೆ, ಇದು ವೈಶಾಲ್ ಗ್ರೂಪ್‌ನ ಒಂದು ಭಾಗವಾಗಿದೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

ಭಾರತದಿಂದಲೇ Renault ಕಂಪನಿಯು ಈಗಾಗಲೇ ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ವಿವಿಧ ಕಾರು ಮಾದರಿಗಳ ರಫ್ತು ಕೈಗೊಳ್ಳುತ್ತಿದ್ದು, ಇದೀಗ ಕಿಗರ್ ಮಾದರಿಯೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಸದ್ಯ ಭಾರತದಲ್ಲಿ ಖರೀದಿಗೆ ಲಭ್ಯವಿರುವ ಕಿಗರ್ ಮಾದರಿಯೇ ದಕ್ಷಿಣ ಆಫ್ರಿಕಾದಲ್ಲೂ ಮಾರಾಟಗೊಳ್ಳಲಿದೆ.

ಒಲಂಪಿಕ್ಸ್ ಪದಕ ವಿಜೇತೆ ಲವ್ಲಿನಾ ಬೊರ್ಗೊಹೈನ್‌ಗೆ Kiger ಕಾರ್ ಗಿಫ್ಟ್ ನೀಡಿದ Renault

Renault Kige ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಅನ್ನು ಸೇರಿದಂತೆ ಹಲವಾರು ಅತ್ಯಾಧುನಿಕ ಫೀಚರ್ಸ್ ಗಳನ್ನು ಒಳಗೊಂಡಿದೆ.

Most Read Articles

Kannada
English summary
Renault gifts new kiger compact suv to olympic bronze medalist lovlina borgohain details
Story first published: Saturday, August 21, 2021, 15:25 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X