ಟ್ರೈಬರ್ ಮಾದರಿಯೊಂದಿಗೆ ಜನವರಿ ಅವಧಿಯ ಕಾರು ಮಾರಾಟದಲ್ಲಿ ಮುನ್ನಡೆ ಸಾಧಿಸಿದ ರೆನಾಲ್ಟ್
ರೆನಾಲ್ಟ್ ಇಂಡಿಯಾ ಕಂಪನಿಯು 2021ರ ಜನವರಿ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರೆನಾಲ್ಟ್ ಕಂಪನಿಯು ಕಳೆದ ವರ್ಷದ ಜನವರಿ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ತುಸು ಮುನ್ನಡೆ ಕಾಯ್ದುಕೊಂಡಿದೆ.

2020ರ ಜನವರಿ ಅವಧಿಯಲ್ಲಿ ಒಟ್ಟು 7,805 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ರೆನಾಲ್ಟ್ ಕಂಪನಿಯು 2021ರ ಜನವರಿಯಲ್ಲಿ 8,209 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.5 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಆದರೆ ತಿಂಗಳ ವಾಹನ ಮಾರಾಟದಲ್ಲಿ ಕಳೆದ ಡಿಸೆಂಬರ್‌ಗಿಂತ ಶೇ.16 ರಷ್ಟು ಕುಸಿತ ಕಂಡಿರುವ ರೆನಾಲ್ಟ್ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರುಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಸದ್ಯ ಕಾರು ಮಾರಾಟದಲ್ಲಿ ಎಂಟನೇ ಸ್ಥಾನದಲ್ಲಿರುವ ರೆನಾಲ್ಟ್ ಕಂಪನಿಯು ಮುಂಬರುವ ದಿನಗಳಲ್ಲಿ ಬಿಡುಗಡೆಯಾಗಲಿರುವ ಕಿಗರ್ ಹೊಸ ಕಾರಿನ ಮೂಲಕ ಪ್ರತಿ ತಿಂಗಳು ಒಟ್ಟು 13 ಸಾವಿರದಿಂದ 15 ಸಾವಿರ ಯುನಿಟ್ ಮಾರಾಟ ಗುರಿಹೊಂದಿದೆ.

ರೆನಾಲ್ಟ್ ಬಿಡುಗಡೆ ಮಾಡುವ ಪ್ರಮುಖ ಕಾರುಗಳಲ್ಲಿ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಪ್ರಮುಖವಾಗಿದ್ದು, ಹೊಸ ಕಾರಿನ ಮೂಲಕ ಮಾರುತಿ ಸುಜುಕಿ ಮತ್ತು ಹ್ಯುಂಡೈ ಕಂಪನಿಗಳ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡಲಿದೆ.

ಗ್ರಾಹಕರ ಬೇಡಿಕೆಯೆಂತೆ ಸದ್ಯ ಕ್ವಿಡ್ ಹ್ಯಾಚ್‌ಬ್ಯಾಕ್, ಟ್ರೈಬರ್ ಮಿನಿ ಎಂಪಿವಿ ಮತ್ತು ಡಸ್ಟರ್ ಎಸ್‌ಯುವಿ ಕಾರುಗಳನ್ನು ಮಾರಾಟ ಮಾಡುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಕಿಗರ್ ಹೊಸ ಕಾರು ಬಿಡುಗಡೆ ಮಾಡಲಿದ್ದು, ಕಿಗರ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳಲಿದೆ. ಸದ್ಯ ಮಾರುಕಟ್ಟೆಯಲ್ಲಿ ಟ್ರೈಬರ್ ಕಾರಿಗೆ ಹೆಚ್ಚಿನ ಬೇಡಿಕೆಯಿದ್ದು ತದನಂತರ ಕ್ವಿಡ್ ಹಾಗೂ ಡಸ್ಟರ್ ಕಾರುಗಳಿಗೆ ಬೇಡಿಕೆಯಿದ್ದು, ಹೊಸ ಕಾರುಗಳ ಮೇಲೆ ಹಲವಾರು ಆಫರ್ ನೀಡಲಾಗುತ್ತಿದೆ.

ರೆನಾಲ್ಟ್ ಕಂಪನಿಯು ಕಾರುಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯುವ ಉದ್ದೇಶದಿಂದ ಹೆಚ್ಚಿನ ಮಟ್ಟದ ಆಫರ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳಲ್ಲಿ ಕ್ವಿಡ್ ಮೇಲೆ ಕನಿಷ್ಠ ಮತ್ತು ಡಸ್ಟರ್ ಕಾರಿನ ಮೇಲೆ ಗರಿಷ್ಠ ಆಫರ್ ಒದಗಿಸಲಾಗಿದೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ರೆನಾಲ್ಟ್ ಇಂಡಿಯಾ ಕೂಡಾ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.
MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲೆ ರೂ. 50 ಸಾವಿರದಷ್ಟು ಆಫರ್ ಲಭ್ಯವಿದ್ದು, ರೂ.50 ಸಾವಿರದಲ್ಲಿ ರೂ.25 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.15 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ.10 ಸಾವಿರ ಲೊಯಾಲಿಟಿ ಆಫರ್ ನೀಡಲಾಗುತ್ತಿದೆ.

ಬಜೆಟ್ ಬೆಲೆಯ ಎಂಪಿವಿ ಮಾದರಿಯಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟ್ರೈಬರ್ ಕಾರಿನ ಖರೀದಿ ಮೇಲೂ ಕೂಡಾ ಆಕರ್ಷಕ ಆಫರ್‌ಗಳು ಲಭ್ಯವಿದ್ದು, ಗರಿಷ್ಠ ರೂ.60 ಸಾವಿರದಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇದರಲ್ಲಿ ರೂ.25 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ.10 ಸಾವಿರದಷ್ಟು ಲೊಯಾಲಿಟಿ ಬೋನಸ್‌ನೊಂದಿಗೆ ರೂ.5 ಸಾವಿರ ಪಂಚಾಯ್ತಿ ಸದಸ್ಯರಿಗಾಗಿ ಹೆಚ್ಚುವರಿ ಕ್ಯಾಶ್ ಡಿಸ್ಕೌಂಟ್ ನೀಡುತ್ತಿದೆ.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ರೆನಾಲ್ಟ್ ಕಂಪನಿಯು ಡಸ್ಟರ್ ಕಾರು ಖರೀದಿಯ ಮೇಲೆ ರೂ. 50 ಸಾವಿರ ತನಕ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಕಾರಿನ ಟರ್ಬೋ ಆವೃತ್ತಿಯನ್ನು ಖರೀದಿ ಗ್ರಾಹಕರಿಗೆ ರೂ. 65 ಸಾವಿರ ತನಕ ಡಿಸ್ಕೌಂಟ್ ಲಭ್ಯವಿದೆ.


Click it and Unblock the Notifications








