Just In
- 47 min ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 48 min ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 3 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- Movies
'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
- News
ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಮಾರ್ಚ್ ಅವಧಿಗಾಗಿ ಕಾರುಗಳ ಖರೀದಿ ಮೇಲೆ ಭರ್ಜರಿ ಆಫರ್ ಘೋಷಿಸಿದ ರೆನಾಲ್ಟ್
ಹೊಸ ವಾಹನಗಳ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಳ್ಳುತ್ತಿರುವ ವಿವಿಧ ವಾಹನ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಆಕರ್ಷಿಸಲು ಹೆಚ್ಚಿನ ಮಟ್ಟದ ಆಫರ್ಗಳನ್ನು ಮುಂದುವರಿಸಿದ್ದು, ರೆನಾಲ್ಟ್ ಇಂಡಿಯಾ ಕಂಪನಿಯು ಕೂಡಾ ವಿವಿಧ ಕಾರು ಮಾದರಿಗಳ ಮೇಲೆ ಮಾರ್ಚ್ ಅವಧಿಗಾಗಿ ಭರ್ಜರಿ ಆಫರ್ ನೀಡುತ್ತಿದೆ.

ಲಾಕ್ಡೌನ್ ವಿಧಿಸಿದ್ದ ಅವಧಿಯಿಂದಲೂ ಹೊಸ ವಾಹನಗಳ ಮಾರಾಟದಲ್ಲಿ ನಷ್ಟ ಅನುಭವಿಸುತ್ತಲೇ ಬಂದಿದ್ದ ವಿವಿಧ ಆಟೋ ಉತ್ಪಾದನಾ ಕಂಪನಿಗಳಿಗೆ ದಸರಾ ಮತ್ತು ದೀಪಾವಳಿ ನಂತರ ನೀರಿಕ್ಷೆಗೂ ಮೀರಿ ಬೇಡಿಕೆ ಹರಿದುಬರುತ್ತಿದ್ದು, ಕಳೆದ ಮೂರ್ನಾಲ್ಕು ತಿಂಗಳಿನಿಂದ ಹೊಸ ವಾಹನಗಳ ಮಾರಾಟವು ಕಳೆದ ವರ್ಷಕ್ಕಿಂತಲೂ ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ರೆನಾಲ್ಟ್ ಕಂಪನಿಯು ಕೂಡಾ ಕಳೆದ ಕೆಲ ತಿಂಗಳಿನಿಂದ ಕಾರು ಮಾರಾಟದಲ್ಲಿ ಭಾರೀ ಪ್ರಮಾಣದ ಬೆಳವಣಿಗೆ ಸಾಧಿಸುತ್ತಿದ್ದು, ಮುಂಬರುವ ಹಬ್ಬದ ಋುತುಗಳಲ್ಲಿ ಕಾರು ಖರೀದಿ ಯೋಜನೆಯಲ್ಲಿರುವ ಗ್ರಾಹಕರಿಗೆ ವಿವಿಧ ಆಫರ್ ನೀಡುತ್ತಿದೆ.

ದಸರಾ ಮತ್ತು ದೀಪಾವಳಿ ಪ್ರಯುಕ್ತ ಘೋಷಣೆ ಮಾಡಲಾಗಿದ್ದ ವಿವಿಧ ಡಿಸ್ಕೌಂಟ್ಗಳು ಮತ್ತು ಸರಳ ಸಾಲಸೌಲಭ್ಯಗಳು ಹೊಸ ವಾಹನ ಮಾರಾಟ ಸುಧಾರಣೆಗೆ ಪ್ರಮುಖ ಕಾರಣವಾಗಿದ್ದು, ಹಳೆಯ ಆಫರ್ಗಳನ್ನೇ ಇದೀಗ ಕೆಲವು ಬದಲಾವಣೆಗಳೊಂದಿಗೆ ಮತ್ತೆ ಮುಂದುವರಿಸಲಾಗಿದೆ.

ರೆನಾಲ್ಟ್ ಕಂಪನಿಯು ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್ಗಳಲ್ಲಿ ಎಕ್ಸ್ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ಆಫರ್ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿವೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ರೆನಾಲ್ಟ್ ಇಂಡಿಯಾ ಕೂಡಾ ವಿವಿಧ ಆಫರ್ಗಳನ್ನು ಘೋಷಣೆ ಮಾಡಿದೆ. ಹೊಸ ಆಫರ್ಗಳಲ್ಲಿ ಕ್ವಿಡ್ ಮೇಲೆ ಕನಿಷ್ಠ ಮತ್ತು ಡಸ್ಟರ್ ಕಾರಿನ ಮೇಲೆ ಗರಿಷ್ಠ ಆಫರ್ ಒದಗಿಸಿದ್ದು, ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಆಕರ್ಷಕ ಬಡ್ಡಿದರವು ಪ್ರಮುಖ ಆಕರ್ಷಣೆಯಾಗಲಿದೆ.

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲೆ ರೂ. 40 ಸಾವಿರದಷ್ಟು ಆಫರ್ ಲಭ್ಯವಿದ್ದು, ರೂ.40 ಸಾವಿರದಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.10 ಸಾವಿರ ಎಕ್ಸ್ಚೆಂಜ್ ಬೋನಸ್ ಮತ್ತು ರೂ.10 ಸಾವಿರ ಲೊಯಾಲಿಟಿ ಆಫರ್ ನೀಡಲಾಗುತ್ತಿದೆ.

ಇದಲ್ಲದೆ ಕ್ವಿಡ್ ಕಾರು ಖರೀದಿಯ ಮೇಲೆ ರೂ. 9 ಸಾವಿರದಷ್ಟು ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ರೂ. 5 ಸಾವಿರದಷ್ಟು ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹೆಚ್ಚುವರಿಯಾಗಿ ಆಫರ್ ನೀಡಲಾಗುತ್ತಿದ್ದು, ಹೊಸ ಕಾರು ಖರೀದಿಗಾಗಿ ಶೇ.5.99 ಬಡ್ಡಿದರದಲ್ಲಿ ಗರಿಷ್ಠ ಸಾಲ ಸೌಲಭ್ಯಗಳನ್ನು ಪಡೆದುಕೊಳ್ಳಬಹುದು.

ಟ್ರೈಬರ್ ಮಿನಿ ಎಂಪಿವಿ
ಬಜೆಟ್ ಬೆಲೆಯ ಎಂಪಿವಿ ಮಾದರಿಯಲ್ಲಿ ಸದ್ಯ ಭಾರೀ ಬೇಡಿಕೆ ಹೊಂದಿರುವ ಟ್ರೈಬರ್ ಕಾರಿನ ಖರೀದಿ ಮೇಲೂ ಕೂಡಾ ಆಕರ್ಷಕ ಆಫರ್ಗಳು ಲಭ್ಯವಿದ್ದು, ಗರಿಷ್ಠ ರೂ.45 ಸಾವಿರದಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇದರಲ್ಲಿ ರೂ.20 ಸಾವಿರ ಎಕ್ಸ್ಚೆಂಜ್ ಬೋನಸ್, ರೂ.15 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ.10 ಸಾವಿರದಷ್ಟು ಲೊಯಾಲಿಟಿ ಬೋನಸ್ನೊಂದಿಗೆ ರೂ.5 ಸಾವಿರ ಪಂಚಾಯ್ತಿ ಸದಸ್ಯರಿಗಾಗಿ ಹೆಚ್ಚುವರಿ ಕ್ಯಾಶ್ ಡಿಸ್ಕೌಂಟ್ ನೀಡುತ್ತಿದೆ.

ಇನ್ನುಳಿದ ರೂ. 9 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಆಗಿ ಪಡೆಯಬಹುದುಗಾಗಿದ್ದು, ಹೊಸ ಕಾರನ್ನು ಖರೀದಿಸಲು ಶೇ. 5.99 ಬಡ್ಡಿದರದಲ್ಲಿ ಗರಿಷ್ಠ ರೂ.3.89 ಲಕ್ಷದ ತನಕ ಸಾಲ ಪಡೆದುಕೊಳ್ಳಬಹುದಾಗಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಡಸ್ಟರ್ ಎಸ್ಯುವಿ
ರೆನಾಲ್ಟ್ ಕಂಪನಿಯು ಡಸ್ಟರ್ ಕಾರು ಖರೀದಿಯ ಮೇಲೆ ರೂ. 70 ಸಾವಿರ ತನಕ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಕಾರಿನ ಟರ್ಬೊ ಆವೃತ್ತಿಯನ್ನು ಖರೀದಿ ಮೇಲೆ ಗರಿಷ್ಠ ಡಿಸ್ಕೌಂಟ್ ಲಭ್ಯವಿದೆ.

ಹೊಸ ಆಫರ್ನಲ್ಲಿ ರೂ.30 ಸಾವಿರ ಎಕ್ಸ್ಚೆಂಜ್ ಆಫರ್, ರೂ.30 ಸಾವಿರ ಲೊಯಾಲಿಟಿ ಆಫರ್ ಮತ್ತು ಟರ್ಬೋ ಮಾದರಿಯ ಮೇಲೆ ಹೆಚ್ಚುವರಿಯಾಗಿ ರೂ. 15 ಸಾವಿರ ಕ್ಯಾಶ್ ಡಿಸ್ಕೌಂಟ್ ಪಡೆಯಬಹುದಾಗಿದ್ದು, ಡಸ್ಟರ್ ಕಾರು ಖರೀದಿಸುವ ಗ್ರಾಹಕರಿಗೆ ಕಂಪನಿಯು ವಿಶೇಷ ಕೊಡುಗೆಯಾಗಿ ಇಸಿ ಕೇರ್ ಪ್ಯಾಕೇಜ್ ವಾರಂಟಿಯನ್ನು ಸಹ ನೀಡುತ್ತಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇನ್ನು ರೆನಾಲ್ಟ್ ಕಂಪನಿಯು ಇತ್ತೀಚೆಗೆ ಬಿಡುಗಡೆ ಮಾಡಲಾದ ಕಿಗರ್ ಕಾರಿನ ಮೇಲೆ ಯಾವುದೇ ಆಫರ್ ನೀಡುತ್ತಿಲ್ಲ. ಸದ್ಯಕ್ಕೆ ಕ್ವಿಡ್, ಡಸ್ಟರ್ ಮತ್ತು ಟ್ರೈಬರ್ ಕಾರುಗಳ ಮೇಲೆ ಮಾತ್ರವೇ ಆಫರ್ ಲಭ್ಯವಿದ್ದು, ಈ ತಿಂಗಳು ಕೊನೆಯ ತನಕ ಈ ಆಫರ್ ಲಭ್ಯವಿರಲಿವೆ.