ರೆನಾಲ್ಟ್ ಕಾರುಗಳ ಖರೀದಿ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ರೆನಾಲ್ಟ್ ಇಂಡಿಯಾ ಕಂಪನಿಯು ಹೊಸ ಕಾರು ಮಾರಾಟದಲ್ಲಿ ಹಲವು ತಿಂಗಳಿನಿಂದ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಇತ್ತೀಚೆಗೆ ಬಿಡುಗಡೆಯಾಗಲಿರುವ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಹೊಸ ಟ್ರೈಬರ್ ಮಾರಾಟದಲ್ಲೂ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ಕೋವಿಡ್ ಪರಿಣಾಮ ಕಳೆದ ವರ್ಷ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ಕಾರು ಕಂಪನಿಗಳಿಗೆ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿದ್ದು, ಕೋವಿಡ್ 2ನೇ ಅಲೆ ಪರಿಣಾಮ ಮೇ ಅವಧಿಯಲ್ಲಿ ತುಸು ಹಿನ್ನಡೆ ಅನುಭವಿಸಿತ್ತು. ಇದೀಗ ಲಾಕ್‌ಡೌನ್ ಸಡಿಲಿಕೆ ನಂತರ ವಾಹನ ಮಾರಾಟವು ಮತ್ತೆ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ವಾಹನ ಖರೀದಿಯನ್ನು ಉತ್ತೇಜಿಸಲು ವಿವಿಧ ಕಾರು ಕಂಪನಿಗಳು ಭರ್ಜರಿ ಆಫರ್‌ ಘೋಷಣೆ ಮಾಡುತ್ತಿವೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ರೆನಾಲ್ಟ್ ಕಂಪನಿಯು ಸಹ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿವೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ರೆನಾಲ್ಟ್ ಕಾರುಗಳ ಖರೀದಿ ಮೇಲೂ ಗ್ರಾಹಕರು ಆಕರ್ಷಕ ಆಫರ್ ಪಡೆದುಕೊಳ್ಳಬಹುದಾಗಿದೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ಹೊಸ ಆಫರ್‌ಗಳಲ್ಲಿ ಕಿಗರ್ ಕಾರಿನ ಮೇಲೆ ಕನಿಷ್ಠ ಮತ್ತು ಡಸ್ಟರ್ ಕಾರಿನ ಮೇಲೆ ಗರಿಷ್ಠ ಆಫರ್ ಘೋಷಣೆ ಮಾಡಲಾಗಿದ್ದು, ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಆಕರ್ಷಕ ಬಡ್ಡಿದರವು ಪ್ರಮುಖ ಆಕರ್ಷಣೆಯಾಗಲಿದೆ. ಗ್ರಾಹಕರು ಆರಂಭಿಕ ಕಾರು ಮಾದರಿಯಾದ ಕ್ವಿಡ್ ಖರೀದಿ ಮೇಲೆ ರೂ.42 ಸಾವಿರ ಮೌಲ್ಯದ ಆಫರ್ ಲಭ್ಯವಿದ್ದಲ್ಲಿ ಟಾಪ್ ಎಂಡ್ ಮಾದರಿಯಾದ ಡಸ್ಟರ್ ಎಸ್‌ಯುವಿ ಕಾರಿನ ಮೇಲೆ ರೂ.65 ಸಾವಿರ ತನಕ ಆಫರ್ ಪಡೆಯಬಹುದಾಗಿದೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲಿನ ರೂ. 42 ಸಾವಿರ ಮೌಲ್ಯದ ಆಫರ್‌ಗಳಲ್ಲಿ ರೂ.10 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.20 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.10 ಸಾವಿರ ಲೊಯಾಲಿಟಿ ಆಫರ್ ಮತ್ತು ಆನ್‌ಲೈನ್ ಬುಕ್ಕಿಂಗ್ ಮೇಲೆ ರೂ.2 ಸಾವಿರ್ ಡಿಸ್ಕೌಂಟ್ ನೀಡಲಾಗುತ್ತಿದೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ಬಜೆಟ್ ಬೆಲೆಯಲ್ಲಿ ಸದ್ದು ಮಾಡುತ್ತಿರುವ ಟ್ರೈಬರ್ ಕಾರಿನ ಖರೀದಿ ಮೇಲೂ ಕೂಡಾ ಆಕರ್ಷಕ ಆಫರ್‌ಗಳು ಲಭ್ಯವಿದ್ದು, ಗರಿಷ್ಠ ರೂ.45 ಸಾವಿರದಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇದರಲ್ಲಿ ರೂ.20 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ.10 ಸಾವಿರದಷ್ಟು ಲೊಯಾಲಿಟಿ ಬೋನಸ್‌ನೊಂದಿಗೆ ರೂ.5 ಸಾವಿರದಷ್ಟು ಆನ್‌ಲೈನ್ ಬುಕ್ಕಿಂಗ್ ಮೇಲೆ ಹೆಚ್ಚುವರಿ ಕ್ಯಾಶ್ ಡಿಸ್ಕೌಂಟ್ ನೀಡುತ್ತಿದೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ರೆನಾಲ್ಟ್ ಕಂಪನಿಯು ಈ ಬಾರಿ ಕಿಗರ್ ಕಾರು ಖರೀದಿಯ ಮೇಲೂ ಇದೀಗ ಮೊದಲ ಬಾರಿಗೆ ಹೊಸ ಆಫರ್ ಘೋಷಿಸಿದ್ದು, ಜುಲೈ ಅವಧಿಯಲ್ಲಿ ಕಿಗರ್ ಕಾರು ಖರೀದಿಸುವ ಗ್ರಾಹಕರಿಗೆ ರೆನಾಲ್ಟ್ ಕಂಪನಿಯು ರೂ.10 ಸಾವಿರ ಎಕ್ಸ್‌ಚೆಂಜ್ ಆಫರ್ ನೀಡುತ್ತಿದೆ.

ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜುಲೈ ತಿಂಗಳ ಆಫರ್ ಘೋಷಣೆ

ಇನ್ನು ಡಸ್ಟರ್ ಕಾರು ಖರೀದಿಯ ಮೇಲೆ ರೆನಾಲ್ಟ್ ಕಂಪನಿಯು ರೂ.65 ಸಾವಿರ ಮೌಲ್ಯದ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಕಾರಿನ ಟರ್ಬೊ ಆವೃತ್ತಿಯನ್ನು ಖರೀದಿಸುವ ಗ್ರಾಹಕರಿಗೆ ಗರಿಷ್ಠ ಡಿಸ್ಕೌಂಟ್ ಲಭ್ಯವಿದೆ.

Most Read Articles

Kannada
English summary
Renault announced July 2021 offers. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X