ರೆನಾಲ್ಟ್ ಕಾರುಗಳ ಖರೀದಿಗೆ ಮೇಲೆ ಜೂನ್ ತಿಂಗಳ ಆಫರ್ ಘೋಷಣೆ
ರೆನಾಲ್ಟ್ ಇಂಡಿಯಾ ಕಂಪನಿಯು ಹೊಸ ಕಾರು ಮಾರಾಟದಲ್ಲಿ ಹಲವು ತಿಂಗಳಿನಿಂದ ಉತ್ತಮ ಬೇಡಿಕೆ ಕಾಯ್ದುಕೊಂಡಿದ್ದು, ಇತ್ತೀಚೆಗೆ ಬಿಡುಗಡೆಯಾಗಲಿರುವ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಹೊಸ ಟ್ರೈಬರ್ ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಳ್ಳುತ್ತಿದೆ.

ಕೋವಿಡ್ ಪರಿಣಾಮ ಕಳೆದ ವರ್ಷ ಕನಿಷ್ಠ ಪ್ರಮಾಣದ ಹೊಸ ವಾಹನಗಳನ್ನು ಮಾರಾಟ ಮಾಡಿದ್ದ ಕಾರು ಕಂಪನಿಗಳಿಗೆ ಕಳೆದ ಕೆಲ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಹರಿದುಬಂದಿದ್ದು, ಇದೀಗ ಕೋವಿಡ್ 2ನೇ ಅಲೆ ಪರಿಣಾಮ ಮತ್ತೆ ಸಂಕಷ್ಟ ಎದುರಿಸುತ್ತಿದೆ. ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಹೊಸ ವಾಹನ ಖರೀದಿದಾರರು ಹೊಸ ಯೋಜನೆಯಿಂದ ಹಿಂದೆ ಸರಿಯುತ್ತಿರುವುದು ಆಟೋ ಕಂಪನಿಗಳಿಗೆ ಭಾರೀ ನಷ್ಟ ಭೀತಿ ಎದುರಾಗಿದ್ದು, ಈ ಹಿನ್ನಲೆಯಲ್ಲಿ ಪ್ರಮುಖ ಕಾರು ಕಂಪನಿಗಳು ಹೊಸ ವಾಹನ ಖರೀದಿಯನ್ನು ಉತ್ತೇಜಿಸಲು ಹೊಸ ಹೊಸ ಆಫರ್‌ಗಳನ್ನು ಘೋಷಣೆ ಮಾಡುತ್ತಿವೆ.

ರೆನಾಲ್ಟ್ ಕಂಪನಿಯು ಸಹ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯವರೆಗೆ ಲಭ್ಯವಿರಲಿವೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ರೆನಾಲ್ಟ್ ಇಂಡಿಯಾ ಕೂಡಾ ವಿವಿಧ ಆಫರ್‌ಗಳನ್ನು ಘೋಷಣೆ ಮಾಡಿದೆ.

ಹೊಸ ಆಫರ್‌ಗಳಲ್ಲಿ ಕಿಗರ್ ಕಾರಿನ ಮೇಲೆ ಕನಿಷ್ಠ ಮತ್ತು ಡಸ್ಟರ್ ಕಾರಿನ ಮೇಲೆ ಗರಿಷ್ಠ ಆಫರ್ ಒದಗಿಸಿದ್ದು, ಕಾರು ಖರೀದಿಯಲ್ಲಿರುವ ಗ್ರಾಹಕರಿಗೆ ಆಕರ್ಷಕ ಬಡ್ಡಿದರವು ಪ್ರಮುಖ ಆಕರ್ಷಣೆಯಾಗಲಿದೆ. ಗ್ರಾಹಕರು ಆರಂಭಿಕ ಕಾರು ಮಾದರಿಯಾದ ಕ್ವಿಡ್ ಖರೀದಿ ಮೇಲೆ ರೂ.52 ಸಾವಿರ ಮೌಲ್ಯದ ಆಫರ್ ಲಭ್ಯವಿದ್ದಲ್ಲಿ ಟಾಪ್ ಎಂಡ್ ಮಾದರಿಯಾದ ಡಸ್ಟರ್ ಎಸ್‌ಯುವಿ ಕಾರಿನ ಮೇಲೆ ರೂ.75 ಸಾವಿರ ತನಕ ಆಫರ್ ಪಡೆಯಬಹುದಾಗಿದೆ.

ಎಂಟ್ರಿ ಲೆವಲ್ ಕಾರು ಮಾದರಿಯಾದ ಕ್ವಿಡ್ ಕಾರಿನ ಮೇಲಿನ ರೂ. 52 ಸಾವಿರ ಮೌಲ್ಯದ ಆಫರ್‌ಗಳಲ್ಲಿ ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.20 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.10 ಸಾವಿರ ಲೊಯಾಲಿಟಿ ಆಫರ್ ಮತ್ತು ಆನ್‌ಲೈನ್ ಬುಕ್ಕಿಂಗ್ ಮೇಲೆ ರೂ.2 ಸಾವಿರ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಬಜೆಟ್ ಬೆಲೆಯಲ್ಲಿ ಸದ್ದು ಮಾಡುತ್ತಿರುವ ಟ್ರೈಬರ್ ಕಾರಿನ ಖರೀದಿ ಮೇಲೂ ಕೂಡಾ ಆಕರ್ಷಕ ಆಫರ್‌ಗಳು ಲಭ್ಯವಿದ್ದು, ಗರಿಷ್ಠ ರೂ.55 ಸಾವಿರದಷ್ಟು ಡಿಸ್ಕೌಂಟ್ ನೀಡಲಾಗುತ್ತಿದೆ. ಇದರಲ್ಲಿ ರೂ.20 ಸಾವಿರ ಎಕ್ಸ್‌ಚೆಂಜ್ ಬೋನಸ್, ರೂ.20 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ.10 ಸಾವಿರದಷ್ಟು ಲೊಯಾಲಿಟಿ ಬೋನಸ್‌ನೊಂದಿಗೆ ರೂ.5 ಸಾವಿರ ಪಂಚಾಯ್ತಿ ಸದಸ್ಯರಿಗಾಗಿ ಹೆಚ್ಚುವರಿ ಕ್ಯಾಶ್ ಡಿಸ್ಕೌಂಟ್ ನೀಡುತ್ತಿದೆ.

ಇನ್ನುಳಿದ ರೂ. 9 ಸಾವಿರ ಕಾರ್ಪೊರೇಟ್ ಡಿಸ್ಕೌಂಟ್ ಆಗಿ ಪಡೆಯಬಹುದುಗಾಗಿದ್ದು, ಹೊಸ ಕಾರನ್ನು ಖರೀದಿಸಲು ಶೇ. 5.99 ಬಡ್ಡಿದರದಲ್ಲಿ ಗರಿಷ್ಠ ರೂ.3.89 ಲಕ್ಷದ ತನಕ ಸಾಲ ಪಡೆದುಕೊಳ್ಳಬಹುದಾಗಿದೆ.
MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ರೆನಾಲ್ಟ್ ಕಂಪನಿಯು ಈ ಬಾರಿ ಕಿಗರ್ ಕಾರು ಖರೀದಿಯ ಮೇಲೂ ಇದೀಗ ಮೊದಲ ಬಾರಿಗೆ ಹೊಸ ಆಫರ್ ಘೋಷಿಸಿದ್ದು, ಮೇ ಅವಧಿಯಲ್ಲಿ ಕಿಗರ್ ಕಾರು ಖರೀದಿಸುವ ಗ್ರಾಹಕರಿಗೆ ರೆನಾಲ್ಟ್ ಕಂಪನಿಯು ರೂ.15 ಸಾವಿರ ಆಫರ್ ನೀಡುತ್ತಿದೆ. ರೂ.10 ಸಾವಿರ ಕಾರ್ಪೊರೇಟ್ ಉದ್ಯೋಗಿಗಳಿಗೆ ಮತ್ತು ರೂ. 5 ಸಾವಿರದಷ್ಟು ಗ್ರಾಮೀಣ ಭಾಗದ ಗ್ರಾಹಕರಿಗೆ ಆಫರ್ ನೀಡುತ್ತಿದೆ.

ಇನ್ನು ಡಸ್ಟರ್ ಕಾರು ಖರೀದಿಯ ಮೇಲೆ ರೆನಾಲ್ಟ್ ಕಂಪನಿಯು ರೂ. 75 ಸಾವಿರ ಮೌಲ್ಯದ ಡಿಸ್ಕೌಂಟ್ ಘೋಷಣೆ ಮಾಡಿದ್ದು, ಹೊಸ ಕಾರಿನ ಟರ್ಬೊ ಆವೃತ್ತಿಯನ್ನು ಖರೀದಿಸುವ ಗ್ರಾಹಕರಿಗೆ ಗರಿಷ್ಠ ಡಿಸ್ಕೌಂಟ್ ಲಭ್ಯವಿದೆ.
MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಹೊಸ ಆಫರ್‌ನಲ್ಲಿ ರೂ.30 ಸಾವಿರ ಎಕ್ಸ್‌ಚೆಂಜ್ ಆಫರ್, ರೂ.30 ಸಾವಿರ ಲೊಯಾಲಿಟಿ ಆಫರ್ ಮತ್ತು ಟರ್ಬೋ ಮಾದರಿಯ ಮೇಲೆ ಹೆಚ್ಚುವರಿಯಾಗಿ ರೂ. 15 ಸಾವಿರ ಕ್ಯಾಶ್ ಡಿಸ್ಕೌಂಟ್ ಪಡೆಯಬಹುದಾಗಿದ್ದು, ಹೊಸ ಆಫರ್‌ಗಳು ಈ ತಿಂಗಳಾಂತ್ಯದ ತನಕ ಲಭ್ಯವಿರಲಿವೆ.


Click it and Unblock the Notifications