ದೀಪಾವಳಿ ಸಂಭ್ರಮದ ವೇಳೆ ಗರಿಷ್ಠ ಮಟ್ಟದ ಕಾರು ವಿತರಣೆ ಮಾಡಿದ ರೆನಾಲ್ಟ್ ಇಂಡಿಯಾ
ಕೋವಿಡ್ ಪರಿಣಾಮ ತಗ್ಗಿದ್ದ ಹೊಸ ವಾಹನಗಳ ಮಾರಾಟವು ಹಬ್ಬಗಳ ಋತುವಿನಲ್ಲಿ ಸಾಕಷ್ಟು ಸುಧಾರಿಸಿದ್ದು, ರೆನಾಲ್ಟ್ ಇಂಡಿಯಾ ಕಂಪನಿಯು ದೀಪಾವಳಿ ಸಂಭ್ರಮಕ್ಕಾಗಿ ಗರಿಷ್ಠ ಮಟ್ಟದ ಕಾರು ವಿತರಣೆ ಮಾಡಿದೆ.

ಕಳೆದ ಕೆಲ ತಿಂಗಳಿನಿಂದ ಕಾರು ಮಾರಾಟದಲ್ಲಿ ಅಸ್ಥಿರತೆಯಿಂದಾಗಿ ಸತತ ನಷ್ಟದ ಹಾದಿಯಲ್ಲಿದ್ದ ಹಲವು ಆಟೋ ಉತ್ಪಾದನಾ ಕಂಪನಿಗಳು ದಸರಾ ಮತ್ತು ದೀಪಾವಳಿ ವೇಳೆ ಹೊಸ ಕಾರುಗಳ ಮಾರಾಟದಲ್ಲಿ ಸುಧಾರಣೆ ಕಂಡಿದ್ದು, ರೆನಾಲ್ಟ್ ಇಂಡಿಯಾ ಕಂಪನಿಯು ಸಹ ಕ್ವಿಡ್, ಟ್ರೈಬರ್, ಕಿಗರ್ ಮತ್ತು ಡಸ್ಟರ್ ಕಾರುಗಳ ಮೂಲಕ ಉತ್ತಮ ಬೇಡಿಕೆ ಕಾಯ್ದುಕೊಂಡಿದೆ.

ದೀಪಾವಳಿ ಸಂಭ್ರಮದ ವೇಳೆ ರೆನಾಲ್ಟ್ ಕಂಪನಿಯು ಸುಮಾರು 3 ಸಾವಿರ ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, ಹೊಸ ಕಾರುಗಳ ಮಾರಾಟದ ನಿಖರ ಸಂಖ್ಯೆಯು ಮುಂದಿನ ತಿಂಗಳ ಕಾರು ಮಾರಾಟ ಪಟ್ಟಿಯಲ್ಲಿ ಪ್ರಕಟಗೊಳ್ಳಲಿದೆ.

ರೆನಾಲ್ಟ್ ಡೀಲರ್ಸ್‌ಗಳ ಮಾಹಿತಿಯಂತೆ ಸುಮಾರು 3 ಸಾವಿರ ಯುನಿಟ್ ಕಾರುಗಳು ದೀಪಾವಳಿ ಸಂಭ್ರಮಕ್ಕಾಗಿಯೇ ವಿತರಣೆಯಾಗಿರುವ ಬಗೆಗೆ ಮಾಹಿತಿ ಲಭ್ಯವಾಗಿದ್ದು, ಕಾರು ಮಾರಾಟ ಸುಧಾರಣೆಗಾಗಿ ಕಂಪನಿಯು ಕೈಗೊಂಡ ವಿವಿಧ ಕ್ರಮಗಳು ಮಾರಾಟ ಹೆಚ್ಚಳಕ್ಕೆ ಕಾರಣವಾಗಿವೆ.

ಹೊಸ ವಾಹನಗಳ ಮಾರಾಟಕ್ಕೆ ಪೂರಕವಾಗಿ ಬಹುತೇಕ ಆಟೋ ಕಂಪನಿಗಳು ಹಲವಾರು ಆಫರ್ ನೀಡುತ್ತಿರುವುದಲ್ಲದೆ ಸರಳ ಸಾಲ ಸೌಲಭ್ಯಗಳನ್ನು ಒದಗಿಸುತ್ತಿರುವುದು ಕಾರು ಖರೀದಿಗೆ ಪ್ರಮುಖ ಆಕರ್ಷಣೆಯಾಗಿದ್ದು, ರೆನಾಲ್ಟ್ ಕಾರುಗಳ ಖರೀದಿ ಮೇಲೂ ಗ್ರಾಹಕರು ಆಕರ್ಷಕ ಆಫರ್ ಪಡೆದುಕೊಳ್ಳಬಹುದಾಗಿದೆ.

ಕ್ವಿಡ್ ಹ್ಯಾಚ್‌ಬ್ಯಾಕ್, ಟ್ರೈಬರ್ ಮಿನಿ ಎಂಪಿವಿ, ಡಸ್ಟರ್ ಎಸ್‌ಯುವಿ ಮತ್ತು ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳ ಮೇಲೆ ಗರಿಷ್ಠ ಮಟ್ಟದ ಆಫರ್ ಘೋಷಣೆ ಮಾಡಿದ್ದು, ಹೊಸ ಆಫರ್‌ಗಳಲ್ಲಿ ಎಕ್ಸ್‌ಚೆಂಜ್, ಕ್ಯಾಶ್ ಬ್ಯಾಕ್, ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದೆ.

ಹೊಸ ಆಫರ್‌ಗಳಲ್ಲಿ ಕಿಗರ್ ಕಾರಿನ ಮೇಲೆ ಕನಿಷ್ಠ ಮತ್ತು ಡಸ್ಟರ್ ಕಾರಿನ ಮೇಲೆ ಗರಿಷ್ಠ ಆಫರ್ ಘೋಷಣೆ ಮಾಡಲಾಗಿದ್ದು, ಆಯ್ದು ಕಾರು ಖರೀದಿ ಮೇಲೆ ಗ್ರಾಹಕರಿಗೆ ಕಂಪನಿಯು ನೀಡುತ್ತಿರುವ ಲೊಯಾಲಿಟಿ ಆಫರ್ ಕೂಡಾ ಪ್ರಮುಖ ಆಕರ್ಷಣೆಯಾಗಿದೆ.

ಇನ್ನು ಮಾರುಕಟ್ಟೆಯಲ್ಲಿ ಕಳೆದ ಕೆಲ ವರ್ಷಗಳಿಂದ ಕನಿಷ್ಠ ಪ್ರಮಾಣದ ಮಾರಾಟಗೊಂದಿಗೆ ಸತತ ಹಿನ್ನಡೆ ಅನುಭವಿಸಿದ್ದ ರೆನಾಲ್ಟ್ ಕಂಪನಿಗೆ ಹೊಸ ಕಿಗರ್ ಕಾರು ಉತ್ತಮ ಬೇಡಿಕೆ ತಂದುಕೊಡುತ್ತಿದ್ದು, ನಿಸ್ಸಾನ್ ಜೊತೆಗೂಡಿ ನಿರ್ಮಾಣ ಮಾಡಲಾಗಿರುವ ಹೊಸ ಕಾರು ತಾಂತ್ರಿಕವಾಗಿ ಮ್ಯಾಗ್ನೈಟ್ ಕಾರು ಮಾದರಿಯೊಂದಿಗೆ ಪ್ಲಾಟ್‌ಫಾರ್ಮ್ ಹಂಚಿಕೊಂಡಿದೆ.

ಬಜೆಟ್ ಬೆಲೆಯಲ್ಲಿ ಅತ್ಯುತ್ತಮ ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮಿಂಚುತ್ತಿರುವ ಕಿಗರ್ ಕಾರು ರೆನಾಲ್ಟ್ ಕಂಪನಿಗೆ ಹೆಚ್ಚಿನ ಬೇಡಿಕೆ ತಂದುಕೊಡುತ್ತಿದ್ದು, ಎರಡು ಮಾದರಿಗಳಲ್ಲೂ 1.0-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದೆ.

ಪ್ರತಿಸ್ಪರ್ಧಿ ಮಾದರಿಗಳಾದ ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಹೋಂಡಾ ಡಬ್ಲ್ಯುಆರ್-ವಿ ಮಾದರಿಗಳಿಂತಲೂ ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಇಂಧನ ದಕ್ಷತೆಯಲ್ಲಿ ಮುಂಚೂಣಿಯಲ್ಲಿದ್ದು, ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳು ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಅತಿ ಕಡಿಮೆ ಬೆಲೆ ಹೊಂದಿವೆ.

ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.64 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.10.09 ಲಕ್ಷ ಬೆಲೆ ಹೊಂದಿದೆ.

ಕಳೆದ ತಿಂಗಳು ಬೆಲೆ ಹೆಚ್ಚಳದ ನಂತರವೂ ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿದ್ದು, ಹೀಗಿರುವಾಗ ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸೆಳೆಯುತ್ತಿದೆ.

ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಾರುಗಳ ಎಂಜಿನ್ ಮತ್ತು ಬೆಲೆ ಕೂಡಾ ಒಂದೇ ಮಾದರಿಯಲ್ಲಿದ್ದು, ವಿಭಿನ್ನವಾದ ವಿನ್ಯಾಸದೊಂದಿಗೆ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಪ್ರೀಮಿಯಂ ಫೀಚರ್ಸ್‌ಗಳಾದ ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೌಲಭ್ಯಗಳು ಸಹ ಈ ಕಾರಿನಲ್ಲಿವೆ.


Click it and Unblock the Notifications