ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಗಳಾದ ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡಿದ್ದು, ಹೊಸ ದರವು ಇಂದಿನಿಂದಲೇ ಅನ್ವಯವಾಗುವಂತೆ ಜಾರಿಗೊಳಿಸಿದೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಹೊಸ ದರಪಟ್ಟಿಯಲ್ಲಿ ರೆನಾಲ್ಟ್ ಕಂಪನಿಯು ವಿವಿಧ ಕಾರುಗಳ ಬೆಲೆಯನ್ನು ರೂ. 16 ಸಾವಿರದಿಂದ 28 ಸಾವಿರ ತನಕ ಹೆಚ್ಚಳ ಮಾಡಿದ್ದು, ಆರಂಭಿಕ ಕಾರು ಮಾದರಿಯಾದ ಕ್ವಿಡ್ ಕಾರು ರೂ. 18,500, ಟ್ರೈಬರ್ ಕಾರು ರೂ. 16 ಸಾವಿರ ಮತ್ತು ಡಸ್ಟರ್ ಕಾರು ಮಾದರಿಯು ರೂ.28 ಸಾವಿರ ಬೆಲೆ ಹೆಚ್ಚಳ ಪಡೆದುಕೊಂಡಿದೆ. ಬಿಡಿಭಾಗಗಳ ನಿರ್ವಹಣಾ ವೆಚ್ಚದಲ್ಲಿ ಹೆಚ್ಚಳವೇ ಕಾರುಗಳ ಬೆಲೆ ಏರಿಕೆಗೆ ಕಾರಣವಾಗಿದ್ದು, ಬಹುತೇಕ ಕಾರು ಕಂಪನಿಗಳು ತಮ್ಮ ಪ್ರಮುಖ ಕಾರುಗಳ ಬೆಲೆ ಏರಿಕೆಯನ್ನು ಘೋಷಣೆ ಮಾಡಿವೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಬೆಲೆ ಏರಿಕೆಯ ನಂತರ ಕ್ವಿಡ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 3.12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.5.31 ಲಕ್ಷ ಬೆಲೆ ಪಡೆದುಕೊಂಡಿದ್ದು, ಹೊಸ ಕಾರು ಈ ಹಿಂದಿನಂತೆಯೇ 800ಸಿಸಿ ಮತ್ತು 1.0-ಲೀಟರ್ ಪೆಟ್ರೋಲ್ ಮಾದರಿಗಳಲ್ಲಿ ಖರೀದಿಗೆ ಲಭ್ಯವಿರಲಿದೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಟ್ರೈಬರ್ ಮಿನಿ ಎಂಪಿವಿ ಕಾರು ಮಾದರಿಯು ಹೊಸ ದರ ಪ್ರಕಟಣೆಯ ನಂತರ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.20 ಲಕ್ಷದಿಂದ ಟಾಪ್ ಎಂಡ್ ಮಾದರಿಯು 7.50 ಲಕ್ಷ ಬೆಲೆ ಹೊಂದಿದ್ದು, 1.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಮಾದರಿಗಳೊಂದಿಗೆ ಮಾರಾಟವಾಗುತ್ತಿದೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಕೊನೆಯದಾಗಿ ಡಸ್ಟರ್ ಎಸ್‌ಯುವಿ ಕಾರು ಮಾದರಿಯು ರೂ. 28 ಸಾವಿರ ಬೆಲೆ ಹೆಚ್ಚಳದೊಂದಿಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.57 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.87 ಲಕ್ಷ ಬೆಲೆ ಪಡೆದುಕೊಂಡಿದ್ದು, ಡಸ್ಟರ್ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ 1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೋ ಪೆಟ್ರೋಲ್ ಮಾದರಿಗಳೊಂದಿಗೆ ಮಾರಾಟವಾಗುತ್ತಿದೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ರೆನಾಲ್ಟ್ ಕಂಪನಿಯು ಹೆಚ್ಚಳ ಮಾಡಿರುವ ಹೊಸ ದರಗಳು ಇಂದಿನಿಂದಲೇ ಅನ್ವಯವಾಗಲಿದ್ದು, ಹೊಸ ವರ್ಷದ ಸಂಭ್ರಮದಲ್ಲಿ ಕಾರು ಖರೀದಿಯ ಯೋಜನೆಯಲ್ಲಿದ್ದ ಗ್ರಾಹಕರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಇನ್ನು ರೆನಾಲ್ಟ್ ಇಂಡಿಯಾ ಕಂಪನಿಯು ನಿಸ್ಸಾನ್ ಮಾಗ್ನೈಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಯಶಸ್ವಿ ನಂತರ ಕಿಗರ್ ಕಾರಿನ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಇದೇ ತಿಂಗಳು 28ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಹೊಸ ಕಾರು ಮಾದರಿಗಳನ್ನು ಒಂದೇ ಪ್ಲ್ಯಾಟ್‌ಫಾರ್ಮ್ ಅಡಿ ಅಭಿವೃದ್ದಿಗೊಳಿಸುತ್ತಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ನಂತರ ರೆನಾಲ್ಟ್ ಕಿಗರ್ ಕಾರು ಕೂಡಾ ಭರ್ಜರಿ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಸದ್ಯ ಕಾನ್ಸೆಪ್ಟ್ ಮಾದರಿಯಲ್ಲಿ ಅನಾವರಣಗೊಂಡಿರುವ ಕಿಗರ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳುತ್ತಿದ್ದು, ಕಾನ್ಸೆಪ್ಟ್ ಮಾದರಿಯಲ್ಲೇ ಉತ್ಪಾದನಾ ಆವೃತ್ತಿಯು ಕೂಡಾ ಅಭಿವೃದ್ದಿಗೊಳ್ಳುವ ಸುಳಿವು ನೀಡಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ಕಿಗರ್ ಕಾರು ಮಾದರಿಯು ಮ್ಯಾಗ್ನೈಟ್ ಮಾದರಿಯಲ್ಲೇ ತಾಂತ್ರಿಕ ಅಂಶಗಳು, ಎಂಜಿನ್ ಆಯ್ಕೆ ಹೊಂದಿರುವ ಹಿನ್ನಲೆ ಬೆಲೆ ಕೂಡಾ ಎರಡು ಮಾದರಿಗಳು ತುಸು ಹೆಚ್ಚು ಕಡಿಮೆ ಒಂದೇ ರೀತಿ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಮಾಗ್ನೈಟ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.49 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಹೊಂದಿದೆ.

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ವಿಭಿನ್ನವಾದ ಹೊರ ವಿನ್ಯಾಸಗಳನ್ನು ಹೊಂದಿರುವ ಮ್ಯಾಗ್ನೈಟ್ ಮತ್ತು ಕಿಗರ್ ಕಾರುಗಳು ಒಂದೇ ಮಾದರಿಯು ತಾಂತ್ರಿಕ ಅಂಶಗಳು ಮತ್ತು ಎಂಜಿನ್ ಆಯ್ಕೆ ಪಡೆದುಕೊಂಡಿದ್ದರೂ ಪ್ರತ್ಯೇಕ ಮಾರಾಟ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಕ್ವಿಡ್, ಟ್ರೈಬರ್ ಮತ್ತು ಡಸ್ಟರ್ ಕಾರುಗಳ ಬೆಲೆ ಹೆಚ್ಚಿಸಿದ ರೆನಾಲ್ಟ್

ನಾಲ್ಕು ಮೀಟರ್‌ಗಿಂತಲೂ ಕಡಿಮೆ ಉದ್ದಳತೆ ಹೊಂದಿರುವ ಸಬ್ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಪ್ರಮುಖ ಕಾರು ಕಂಪನಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದ್ದು, ಕಿಗರ್ ಕಾರು ಮಾದರಿಯು ಸಹ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಟಿಸುವ ತವಕದಲ್ಲಿದೆ.

Most Read Articles

Kannada
English summary
Renault India Increases The Prices Of The Kwid, Triber & Duster. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X