Just In
Don't Miss!
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Finance
ಮಹಾರಾಷ್ಟ್ರದಲ್ಲಿ ಲಾಕ್‌ಡೌನ್: ಕಾರುಗಳ ಉತ್ಪಾದನೆ ಮೇಲೆ ಭಾರೀ ಪರಿಣಾಮ
- News
ಬಿಟ್ ಕಾಯಿನ್ ಮೌಲ್ಯ $60,000 ನಂತೆ ಸ್ಥಿರ, ಟ್ರೇಡರ್ಸ್ಗೆ ನೆಮ್ಮದಿ
- Movies
ಸುಶಾಂತ್ ಸಿಂಗ್ ಸಾವಿನ ಬಗ್ಗೆ ಕಂಗನಾ ರಣಾವತ್ ಯೂ-ಟರ್ನ್?
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಿಗರ್ ಮತ್ತು ಟ್ರೈಬರ್ ಮಾದರಿಯೊಂದಿಗೆ ಉತ್ತಮ ಬೇಡಿಕೆ ಪಡೆದುಕೊಂಡ ರೆನಾಲ್ಟ್
ರೆನಾಲ್ಟ್ ಇಂಡಿಯಾ ಕಂಪನಿಯು 2021ರ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರೆನಾಲ್ಟ್ ಕಂಪನಿಯು ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ಪಡೆದುಕೊಂಡಿದೆ.

2020ರ ಮಾರ್ಚ್ ಅವಧಿಯಲ್ಲಿ ಒಟ್ಟು 3,269 ಯನಿಟ್ ಕಾರುಗಳನ್ನು ಮಾರಾಟ ಮಾಡಿದ್ದ ರೆನಾಲ್ಟ್ ಕಂಪನಿಯು 2021ರ ಮಾರ್ಚ್‌ನಲ್ಲಿ 12,356 ಯುನಿಟ್ ಕಾರುಗಳನ್ನು ಮಾರಾಟ ಮಾಡುವ ಮೂಲಕ ಶೇ.278 ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ. ಕಳೆದ ವರ್ಷದ ಮಾರ್ಚ್ ಅವಧಿಯಲ್ಲಿ ಲಾಕ್‌ಡೌನ್ ಆದ ಪರಿಣಾಮ ತೀವ್ರ ಹಿನ್ನಡೆ ಅನುಭವಿಸಿದ್ದ ಆಟೋ ಉತ್ಪಾದನಾ ಕಂಪನಿಗಳು ಈ ವರ್ಷದ ಮಾರ್ಚ್ ಅವಧಿಯಲ್ಲಿನ ಮಾರಾಟ ಬೆಳವಣಿಗೆ ಹೆಚ್ಚಿನ ಮಟ್ಟದ ಮುನ್ನಡೆ ಕಾಯ್ದುಕೊಂಡಿವೆ.

ತಿಂಗಳ ವಾಹನ ಮಾರಾಟದಲ್ಲಿ ಕಳೆದ ರೆನಾಲ್ಟ್ ಕಂಪನಿಯು ಕಳೆದ ಫೆಬ್ರವರಿ ಅವಧಿಗಿಂತ ಮಾರ್ಚ್ ಅವಧಿಯಲ್ಲಿ ಶೇ. 12 ರಷ್ಟು ಬೆಳವಣಿಗೆ ಸಾಧಿಸಿದ್ದು, ರೆನಾಲ್ಟ್ ಕಂಪನಿಯು ಹೊಸ ಕಿಗರ್ ಮತ್ತು ಟ್ರೈಬರ್ ಆಟೋಮ್ಯಾಟಿಕ್ ಆವೃತ್ತಿಗಳೊಂದಿಗೆ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದೆ.

ಸದ್ಯ ಕಾರು ಮಾರಾಟದಲ್ಲಿ ಎಳನೇ ಸ್ಥಾನದಲ್ಲಿರುವ ರೆನಾಲ್ಟ್ ಕಂಪನಿಯು ಕಿಗರ್ ಮತ್ತು ಟ್ರೈಬರ್ ಮೂಲಕ ಪ್ರತಿ ತಿಂಗಳು ಒಟ್ಟು 13 ಸಾವಿರದಿಂದ 15 ಸಾವಿರ ಯುನಿಟ್ ಮಾರಾಟ ಗುರಿಹೊಂದಿದ್ದು, ಮಾರುತಿ ಮತ್ತು ಹ್ಯುಂಡೈ ಕಂಪನಿಗಳ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಿಗೆ ತೀವ್ರ ಪೈಪೋಟಿ ನೀಡುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ಸದ್ಯ ಕ್ವಿಡ್ ಹ್ಯಾಚ್‌ಬ್ಯಾಕ್, ಟ್ರೈಬರ್ ಮಿನಿ ಎಂಪಿವಿ, ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಮತ್ತು ಡಸ್ಟರ್ ಎಸ್‌ಯುವಿ ಕಾರುಗಳನ್ನು ಮಾರಾಟ ಮಾಡುತ್ತಿರುವ ರೆನಾಲ್ಟ್ ಕಂಪನಿಯು ಕಿಗರ್ ಮತ್ತು ಟ್ರೈಬರ್ ಕಾರುಗಳೊಂದಿಗೆ ಉತ್ತಮ ಬೇಡಿಕೆ ಕಾಯ್ದುಕೊಳ್ಳುತ್ತಿದೆ. ಬಜೆಟ್ ಬೆಲೆಯೊಂದಿಗೆ ಬಿಡುಗಡೆಯಾಗಿರುವ ಹೊಸ ಕಿಗರ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಗ್ರಾಹಕರನ್ನು ಮಾತ್ರವಲ್ಲದೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾರರನ್ನು ಸಹ ಸೆಳೆಯುತ್ತಿದೆ.

ಗ್ರಾಹಕರ ಬೇಡಿಕೆಯೆಂತೆ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಕಿಗರ್ ಕಾರು ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿವೆ. ಆದರೆ ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿರುವ ಕಿಗರ್ ಮತ್ತು ಮ್ಯಾಗ್ನೈಟ್ ಕಾರು ಮಾದರಿ ಮಾತ್ರ ಅತಿ ಕಡಿಮೆ ಬೆಲೆಯಲ್ಲಿ ಅಭಿವೃದ್ದಿಗೊಳ್ಳುವ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

ಹೊಸ ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಸುರಕ್ಷತೆಯಲ್ಲೂ ಕಿಗರ್ ಕಾರು ಮಾದರಿಯು ಗ್ರಾಹಕರನ್ನು ಸೆಳೆಯುತ್ತಿದೆ.
MOST READ: ವಾಣಿಜ್ಯ ವಾಹನಗಳ ನಿರ್ವಹಣಾ ವೆಚ್ಚ ತಗ್ಗಿಸಲು ಹೊಸ ಟರ್ಬೊ ಟ್ರಾನ್ ಎಂಜಿನ್ ಪರಿಚಯಿಸಿದ ಟಾಟಾ ಮೋಟಾರ್ಸ್

ಈ ಮೂಲಕ ಹೊಸ ಕಿಗರ್ ಮಾದರಿಯು ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಬಹುತೇಕ ವೆರಿಯೆಂಟ್‌ಗಳಲ್ಲಿ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ನೀಡಿರುವುದು ಆಯ್ಕೆಗೆ ಉತ್ತಮ ಎನ್ನಿಸಲಿದೆ.