ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ರೆನಾಲ್ಟ್ ಇಂಡಿಯಾ ಕಂಪನಿಯು ಕಂಪ್ಯಾಕ್ಟ್‌ ಎಸ್‌ಯುವಿ ಕಾರು ಮಾದರಿಯನ್ನು ಮುಂದಿನ ಕೆಲವೇ ವಾರಗಳಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ತಾಂತ್ರಿಕ ಅಂಶಗಳ ಮಾಹಿತಿ ಒಳಗೊಂಡ ಟಿವಿ ಜಾಹೀರಾತು ಪ್ರಕಟಿಸಿದೆ.

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ಕಿಗರ್ ಕಂಪಾಕ್ಟ್ ಎಸ್‌ಯುವಿಯನ್ನು ಕಳೆದ ವಾರವಷ್ಟೇ ಅನಾವರಣಗೊಳಿಸಿರುವ ರೆನಾಲ್ಟ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡುವ ಸಿದ್ದತೆಯಲ್ಲಿದ್ದು, ಹೊಸ ಕಿಗರ್ ಮೂಲಕ ಪ್ರತಿ ತಿಂಗಳು 5 ಸಾವಿರದಿಂದ 6 ಸಾವಿರ ಯುನಿಟ್ ಮಾರಾಟ ಗುರಿಹೊಂದಿದೆ. ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯಲ್ಲೇ ಕಿಗರ್ ಕಾರು ಕೂಡಾ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಸೆಳೆಯಲಿದ್ದು, ಕಿಗರ್ ಹೊಸ ಕಾರು ಮಾದರಿಯು ಸಿಎಂಎಫ್ಎ ಪ್ಲಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಂಡಿದೆ.

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ಸಿಎಂಎಫ್ಎ ಪ್ಲಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಿಕೊಳ್ಳುತ್ತಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳನ್ನು ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸಿದ್ದರೂ ವಿಭಿನ್ನವಾದ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

ಸದ್ಯ ಮ್ಯಾಗ್ನೈಟ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಹೊಂದಿದ್ದು, ರೆನಾಲ್ಟ್ ಕಿಗರ್ ಕಾರು ಮಾದರಿಯು ಕೂಡಾ ಮಾಗ್ನೈಟ್ ಕಾರು ಮಾದರಿಯಲ್ಲೇ ತಾಂತ್ರಿಕ ಅಂಶಗಳು, ಎಂಜಿನ್ ಆಯ್ಕೆಯೊಂದಿಗೆ ಬೆಲೆಯಲ್ಲಿ ಗ್ರಾಹಕರನ್ನು ಸೆಳೆಯಲಿದೆ.

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ರೆನಾಲ್ಟ್ ಕಿಗರ್ ಕಾರು ಮಾದರಿಯು ಮ್ಯಾಗ್ನೈಟ್ ಕಾರು ಮಾದರಿಯಲ್ಲೇ ಆರಂಭದ 1 ತಿಂಗಳ ಅವಧಿಯಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಆರಂಭಿಕವಾಗಿ ರೂ. 5 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯನ್ನು 9 ಲಕ್ಷ ಬೆಲೆಗೆ ಮಾರಾಟ ಮಾಡುವ ಸಾಧ್ಯತೆಗಳಿದ್ದು, 1 ತಿಂಗಳ ನಂತರ ಮತ್ತೆ ಬೆಲೆ ಹೆಚ್ಚಳ ಮಾಡಬಹುದಾಗಿದೆ. ಬೆಲೆ ಹೆಚ್ಚಳ ಮಾಡಿದರೂ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 10 ಸಾವಿರದಿಂದ ರೂ. 30 ಸಾವಿರ ತನಕ ಹೆಚ್ಚಳ ಮಾಡಬಹುದಾಗಿದ್ದು, ಬೆಲೆ ಹೆಚ್ಚಳದ ನಂತರ ಕಿಗರ್ ಕಾರು ಪ್ರತಿಸ್ಪರ್ಧಿ ಕಾರುಗಳ ಬೆಲೆಗಿಂತಲೂ ಸಾಕಷ್ಟು ಕಡಿಮೆಯಿರಲಿದೆ.

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾಗಿರುವ ಕಿಗರ್ ಆವೃತ್ತಿಯು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತದೆ.

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ಹೊಸ ಕಿಗರ್ ಕಾರಿನಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಸಿ ಪಿಲ್ಲರ್, ಸ್ಪೋಟಿಯಾಗಿರುವ ಸ್ಪಾಯ್ಲರ್, ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ಹಾಗೆಯೇ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ಜೊತೆಗೆ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5 -ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಟಿವಿ ಜಾಹೀರಾತು ಬಿಡುಗಡೆ

ರೆನಾಲ್ಟ್ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಮಾದರಿಯ ಜೋಡಣೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

Article Published On: Tuesday, February 2, 2021, 21:48 [IST]
English summary
Renault Released New TVC For Kiger Compact SUV. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+