Just In
- 1 hr ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 1 hr ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 3 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 3 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್‌ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- News
ಸರ್ಕಾರಗಳಿಗೆ ವರದಾನವಾಗುತ್ತಿದೆ ಫೇಸ್ಬುಕ್ ನೀತಿಯಲ್ಲಿನ ಲೋಪ
- Sports
ಐಪಿಎಲ್ 2021: ಕಣಕ್ಕಿಳಿಯಲು ಪಡಿಕ್ಕಲ್ ಸಜ್ಜು, ಆರ್ಸಿಬಿ ಸಂಭಾವ್ಯ ತಂಡ ಹೀಗಿದೆ
- Movies
'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಕಂಪ್ಯಾಕ್ಟ್ ಎಸ್‌ಯುವಿ ಮಾರಾಟಾದಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್
ರೆನಾಲ್ಟ್ ಹೊಚ್ಚ ಹೊಸ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದೆ.

ಹೊಸ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಬಿಡುಗಡೆಯಾದ ಫೆಬ್ರವರಿ ತಿಂಗಳಿನಲ್ಲಿ 3,226 ಯುನಿಟ್ ಹಾಗೂ ಮಾರ್ಚ್ ಅವಧಿಯಲ್ಲಿ 3,839 ಯುನಿಟ್ ಮಾರಾಟದೊಂದಿಗೆ ತನ್ನ ಸಹಸ್ಪರ್ಧಿ ಮಾದರಿಯಾದ ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯು ಹೆಚ್ಚಿನ ಬೇಡಿಕೆ ಪಡೆದುಕೊಳ್ಳುತ್ತಿದೆ.

ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳು ಒಂದೇ ಪ್ಲ್ಯಾಟ್‌ಫಾರ್ಮ್, ಎಂಜಿನ್ ಮತ್ತು ಬೆಲೆ ಕೂಡಾ ಒಂದೇ ಮಾದರಿಯಲ್ಲಿದ್ದು, ವಿಭಿನ್ನವಾದ ವಿನ್ಯಾಸದೊಂದಿಗೆ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಮಾರ್ಚ್ ಅವಧಿಯಲ್ಲಿ ರೆನಾಲ್ಟ್ ಕಿಗರ್ ಮಾದರಿಯು 3,839 ಯುನಿಟ್ ಮಾರಾಟಗೊಂಡಿದ್ದರೆ ನಿಸ್ಸಾನ್ ಮ್ಯಾಗ್ನೈಟ್ ಮಾದರಿಯು 2,987 ಯುನಿಟ್ ಮಾರಾಟಗೊಂಡಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಕಿಗರ್ ಕಾರು ಸದ್ಯ 6ನೇ ಸ್ಥಾನದೊಂದಿಗೆ ಟೊಯೊಟಾ ಅರ್ಬನ್ ಕ್ರೂಸರ್, ಮಹೀಂದ್ರಾ ಎಕ್ಸ್‌ಯುವಿ300 ಮತ್ತು ಹೋಂಡಾ ಡಬ್ಲ್ಯುಆರ್-ವಿ ಕಾರುಗಳನ್ನು ಹಿಂದಿಕ್ಕಿದೆ.

ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿವೆ. ಹೀಗಿರುವಾಗ ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾದರನ್ನು ಸಹ ಸೆಳೆಯುತ್ತಿದೆ.

ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೌಲಭ್ಯಗಳಿವೆ.

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.