ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ರೆನಾಲ್ಟ್ ಇಂಡಿಯಾ ಕಂಪನಿಯ ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆಯಾದ ಮೊದಲ ತಿಂಗಳಿನಲ್ಲಿಯೇ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಇದುವರೆಗೆ ಸುಮಾರು 5 ಸಾವಿರಕ್ಕೂ ಅಧಿಕ ಗ್ರಾಹಕರಿಂದ ಬುಕ್ಕಿಂಗ್ ಪಡೆದುಕೊಂಡಿದ್ದು, ಬುಕ್ಕಿಂಗ್ ಪ್ರಮಾಣವನ್ನು ಆಧರಿಸಿ ಕಾರಿನ ವಿತರಣೆ ಮಾಡಲಾಗುತ್ತಿದೆ. ನಿನ್ನೆಯಷ್ಟೇಹೈದ್ರಾಬಾದ್‌ನಲ್ಲಿ ಪಿಪಿಎಸ್ ಡೀಲರ್ಸ್‌ನಲ್ಲಿ ಒಂದೇ ದಿನದಲ್ಲಿ ನೂರು ಯುನಿಟ್ ವಿತರಣೆ ಮಾಡಲಾಗಿದ್ದು, ಹೊಸ ಕಾರು ಮುಂಬರುವ ದಿನಗಳಲ್ಲಿ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಹೊಸ ಕಿಗರ್ ಮೂಲಕ ಬಜೆಟ್ ಕಾರು ಮಾರಾಟದಲ್ಲಿ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರೀಕ್ಷೆಯಲ್ಲಿರುವ ರೆನಾಲ್ಟ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ಅತ್ಯುತ್ತಮ ಬೆಲೆಯೊಂದಿಗೆ ಬಿಡುಗಡೆ ಮಾಡಿದ್ದು, ಹೊಸ ಕಾರು ಪ್ರತಿಸ್ಪರ್ಧಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಕಿಗರ್ ಕಾರು ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿದ್ದು, ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಗೊಂಡಿರುವ ಕಿಗರ್ ಮತ್ತು ಮ್ಯಾಗ್ನೈಟ್ ಕಾರು ಮಾದರಿ ಮಾತ್ರ ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ಆಯ್ಕೆ ಪಡೆದುಕೊಂಡಿವೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಒಂದೇ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಗೊಳ್ಳುವುದರ ಜೊತೆಗೆ ಒಂದೇ ಮಾದರಿಯ ಎಂಜಿನ್, ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿದ್ದರೂ ಸಹ ವಿಭಿನ್ನವಾದ ವಿನ್ಯಾಸದೊಂದಿಗೆ ಪ್ರತ್ಯೇಕ ಮಾರಾಟ ಸೌಲಭ್ಯದೊಂದಿಗೆ ಗ್ರಾಹಕರನ್ನು ಸೆಳೆಯಲಿದ್ದು, ಎರಡು ಹೊಸ ಕಾರು ಮಾದರಿಗಳು ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳಿಗೆ ಉತ್ತಮ ಆದಾಯ ತಂದುಕೊಡುವ ನೀರಿಕ್ಷೆಯಲ್ಲಿವೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಇನ್ನು ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯಲಿದೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಎಂಜಿನ್ ಮತ್ತು ಪರ್ಫಾಮೆನ್ಸ್

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಒಂದೇ ದಿನದಲ್ಲಿ 100 ಯುನಿಟ್ ರೆನಾಲ್ಟ್ ಕಿಗರ್ ವಿತರಣೆ ಮಾಡಿದ ಪಿಪಿಎಸ್ ಶೋರೂಂ

ಈ ಮೂಲಕ ಹೊಸ ಕಿಗರ್ ಮಾದರಿಯು ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಬಹುತೇಕ ವೆರಿಯೆಂಟ್‌ಗಳಲ್ಲಿ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ನೀಡಿರುವುದು ಆಯ್ಕೆಗೆ ಉತ್ತಮ ಎನ್ನಿಸಲಿದೆ.

Image Courtesy: PPS Renault

Most Read Articles

Kannada
English summary
New Renault Kiger 100 Units Delivered To Customers In One Day. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X