ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ರೆನಾಲ್ಟ್ ಇಂಡಿಯಾ ಕಂಪನಿಯು ತನ್ನ ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಗ್ರಾಹಕರಿಗೆ ಪ್ರಸ್ತುತ ಪಡಿಸಲು ಹೊಸ ಟಿವಿ ಜಾಹೀರಾತು ಪ್ರಕಟಿಸಿದೆ.

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಹೊಸ ಜಾಹೀರಾತು ಮೂಲಕ ಮತ್ತಷ್ಟು ಕಂಪ್ಯಾಕ್ಟ್ ಎಸ್‌ಯುವಿ ಖರೀದಿದಾರರನ್ನು ಸೆಳೆಯುವ ಯೋಜನೆಯಲ್ಲಿರುವ ರೆನಾಲ್ಟ್ ಕಂಪನಿಯು ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಪ್ರಸ್ತುತ ಪಡಿಸುವ ಹೊಸ ಜಾಹೀರಾತು ಬಿಡುಗಡೆ ಮಾಡಿದ್ದು, ಹೊಸ ಕಾರು ಬಿಡುಗಡೆಯಾದ ಎರಡು ತಿಂಗಳ ಅವಧಿಯಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾರಾಟದಲ್ಲಿ ಉತ್ತಮ ಸ್ಥಾನ ಕಾಯ್ದುಕೊಂಡಿದೆ.

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಸಹಭಾಗಿತ್ವ ಯೋಜನೆ ಅಡಿ ನಿರ್ಮಾಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳು ಒಂದೇ ಪ್ಲ್ಯಾಟ್‌ಫಾರ್ಮ್, ಎಂಜಿನ್ ಮತ್ತು ಬೆಲೆ ಕೂಡಾ ಒಂದೇ ಮಾದರಿಯಲ್ಲಿದ್ದು, ವಿಭಿನ್ನವಾದ ವಿನ್ಯಾಸದೊಂದಿಗೆ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿವೆ.

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಹೀಗಿರುವಾಗ ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾದರನ್ನು ಸಹ ಸೆಳೆಯುತ್ತಿದೆ. ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಹೊಸ ಜಾಹೀರಾತು ಬಿಡುಗಡೆ ಮಾಡಿದ ರೆನಾಲ್ಟ್

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.ನ

More from DriveSpark

Article Published On: Sunday, April 25, 2021, 14:35 [IST]
English summary
Renault Kiger Compact SUV New TVC Released. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+