Just In
- 13 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 21 min ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 30 min ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- 1 hr ago Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
Don't Miss!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತಿ ಹೆಚ್ಚು ಮೈಲೇಜ್ ನೀಡುವ ರೆನಾಲ್ಟ್ ಕಿಗರ್ ಕಾರಿನ ಹೊಸ ಟಿವಿ ಜಾಹೀರಾತು ಬಿಡುಗಡೆ
ರೆನಾಲ್ಟ್ ಇಂಡಿಯಾ(Renault India) ಕಂಪನಿಯು ತನ್ನ ಹೊಸ ಕಿಗರ್ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಗ್ರಾಹಕರಿಗೆ ಪ್ರಸ್ತುತ ಪಡಿಸಲು ಹೊಸ ಟಿವಿ ಜಾಹೀರಾತು ಬಿಡುಗಡೆ ಮಾಡಿದೆ.
ಹೊಸ ಜಾಹೀರಾತು ಮೂಲಕ ಮತ್ತಷ್ಟು ಕಂಪ್ಯಾಕ್ಟ್ ಎಸ್ಯುವಿ ಖರೀದಿದಾರರನ್ನು ಸೆಳೆಯುವ ಯೋಜನೆಯಲ್ಲಿರುವ ರೆನಾಲ್ಟ್ ಇಂಡಿಯಾ ಕಂಪನಿಯು ಹೊಸ ಕಾರಿನ ತಾಂತ್ರಿಕ ಅಂಶಗಳನ್ನು ಪ್ರಸ್ತುತ ಪಡಿಸುವ ಟಿವಿ ಜಾಹೀರಾತು ಬಿಡುಗಡೆ ಮಾಡಿದ್ದು, ಹೊಸ ಕಾರು ಬಿಡುಗಡೆಯಾದ ಕೆಲವೇ ತಿಂಗಳ ಅವಧಿಯಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ಮೂಲಕ ಕಂಪ್ಯಾಕ್ಟ್ ಎಸ್ಯುವಿ ಕಾರು ಮಾರಾಟದಲ್ಲಿ ಉತ್ತಮ ಸ್ಥಾನ ಕಾಯ್ದುಕೊಂಡಿದೆ.
ಸಹಭಾಗಿತ್ವ ಯೋಜನೆ ಅಡಿ ನಿರ್ಮಾಣವಾಗಿರುವ ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳು ಒಂದೇ ಪ್ಲ್ಯಾಟ್ಫಾರ್ಮ್, ಎಂಜಿನ್ ಆಯ್ಕೆ ಹೊಂದಿದ್ದು, ಬೆಲೆ ಕೂಡಾ ಒಂದೇ ಮಾದರಿಯಲ್ಲಿದೆ.
ಆದರೂ ಕೂಡಾ ಎರಡು ಕಾರು ಮಾದರಿಗಳು ವಿಭಿನ್ನವಾದ ವಿನ್ಯಾಸದೊಂದಿಗೆ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಕಿಗರ್ ಕಾರು ಮಾದರಿಯು ಸೆಗ್ಮೆಂಟ್ ಫಸ್ಟ್ ಫೀಚರ್ಸ್ ಹೊಂದಿದೆ.
ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 14 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿವೆ.
ಹೀಗಿರುವಾಗ ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್ಯುವಿ ಜೊತೆಗೆ ಹ್ಯಾಚ್ಬ್ಯಾಕ್ ಕಾರು ಖರೀದಿದಾದರನ್ನು ಸಹ ಸೆಳೆಯುತ್ತಿದೆ.
ಹೊಸ ಕಿಗರ್ ಕಾರು ಆರ್ಎಕ್ಸ್ಇ, ಆರ್ಎಕ್ಸ್ಎಲ್, ಆರ್ಎಕ್ಸ್ಟಿ ಮತ್ತು ಆರ್ಎಕ್ಸ್ಜೆಡ್ ಎನ್ನುವ ನಾಲ್ಕು ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹೆಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.64 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 10.09 ಲಕ್ಷ ಬೆಲೆ ಹೊಂದಿದೆ.
ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್ರೈಲ್ಸ್ ಸೌಲಭ್ಯಗಳೊಂದಿಗೆ ಎಸ್ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.
ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.
ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್ಬೋರ್ಡ್ ಜೋಡಣೆ ಮಾಡಲಾಗಿದೆ.
ಹೊಸ ಕಾರಿನಲ್ಲಿ ಆ್ಯಪಲ್ ಕಾರ್ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್ಟಿ ಡಿಜಿಟಲ್ ಇನ್ಸ್ಟ್ರುಮೆಂಟ್ ಡಿಸ್ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.
ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್ಲೆಸ್ ಚಾರ್ಜಿಂಗ್ ಮತ್ತು ಸನ್ರೂಫ್ ಸೌಲಭ್ಯಗಳಿವೆ.
ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.
ಹೊಸ ಕಿಗರ್ ಕಾರು ಮಾದರಿಯು ಪರ್ಫಾಮೆನ್ಸ್ ಜೊತೆಗೆ ಎಆರ್ಎಐ ಟೆಸ್ಟಿಂಗ್ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ಗೆ ಗರಿಷ್ಠ ಇಂಧನ ದಕ್ಷತೆ ಹೊಂದಿದ್ದು, ಹೊಸ ಕಾರು ಪ್ರತಿ ಲೀಟರ್ಗೆ 20.5 ಕಿ.ಮೀ ಮೈಲೇಜ್ ಸಾಧಿಸಿದೆ ಎಂದು ಕಂಪನಿ ಘೋಷಿಸಿದೆ.
ಹೊಸ ಕಾರಿನ 1.0 ಲೀಟರ್ ಟರ್ಬೊ ಮ್ಯಾನುವಲ್ ಮಾದರಿಯು ಹೆಚ್ಚಿನ ಮಟ್ಟದ ಇಂಧನ ದಕ್ಷತೆ ಪಡೆದುಕೊಂಡಿದ್ದು, 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮ್ಯಾನುವಲ್ ಮಾದರಿಯು ಕೂಡಾ ಉತ್ತಮ ಇಂಧನ ದಕ್ಷತೆ ಹೊಂದಿದೆ. ಹಾಗೆಯೇ ಸುರಕ್ಷತೆ ವಿಚಾರದಲ್ಲೂ ಪ್ರತಿಸ್ಪರ್ಧಿಗಳಿಗೆ ಪೈಪೋಟಿ ನೀಡುತ್ತಿರುವ ಹೊಸ ಕಾರು 4 ಸ್ಟಾರ್ ಸೇಫ್ಟಿ ರೇಟಿಂಗ್ಸ್ ಹೊಂದಿದ್ದು, ಹೊಸ ಕಾರು ಮುಂಬರುವ ಕೆಲವೇ ದಿನಗಳಲ್ಲಿ ಆ್ಯನಿವರ್ಸರಿ ಎಡಿಷನ್ ಪಡೆದುಕೊಳ್ಳಲಿದೆ.