ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಇಂಡಿಯಾ ಕಂಪನಿಯು ಪೂರ್ವ ನಿಗದಿಯೆಂತೆ ತನ್ನ ಹೊಚ್ಚ ಹೊಸ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ಬೆಲೆಯನ್ನು ಹೆಚ್ಚಿಸಲು ನಿರ್ಧರಿಸಿದ್ದು, ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹೊಸ ದರ ಪ್ರಕಟಿಸಲು ಸಿದ್ದವಾಗಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಕಾರು ಬಿಡುಗಡೆಯ ಸಂದರ್ಭದಲ್ಲೇ ಏಪ್ರಿಲ್ 1ರಿಂದಲೇ ಬೆಲೆ ಹೆಚ್ಚಿಸುವ ಬಗ್ಗೆ ಮಾಹಿತಿ ನೀಡಿದ್ದ ರೆನಾಲ್ಟ್ ಕಂಪನಿಯು ಇದೀಗ ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 15 ಸಾವಿರದಿಂದ ರೂ. 40 ಸಾವಿರ ಬೆಲೆ ಹೆಚ್ಚಳ ಮಾಡುವ ನೀರಿಕ್ಷೆಯಿದ್ದು, ಹೊಸ ದರಪಟ್ಟಿಯು ಏಪ್ರಿಲ್ 1ರಂದೇ ಬಿಡುಗಡೆಯಾಗಲಿದೆ. ಹೊಸ ದರವು ಈ ತಿಂಗಳು ಬುಕ್ಕಿಂಗ್ ಸಲ್ಲಿಸುವ ಯಾವುದೇ ಗ್ರಾಹಕರಿಗೆ ಅನ್ವಯವಾಗುವುದಿಲ್ಲ ಎನ್ನುವ ಮಾಹಿತಿಗಳಿದ್ದು, ಏಪ್ರಿಲ್ 1ರಿಂದಲೇ ಬುಕ್ಕಿಂಗ್ ಸಲ್ಲಿಸುವ ಗ್ರಾಹಕರಿಗೆ ಹೊಸ ದರವನ್ನೇ ಪಾವತಿ ಮಾಡಬೇಕಾಗುತ್ತದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಿಗರ್ ಕಾರು ಮಾದರಿಯು ಸದ್ಯ ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಕಿಗರ್ ಕಾರು ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿದ್ದು, ಕಿಗರ್ ಮತ್ತು ಮ್ಯಾಗ್ನೈಟ್ ಕಾರು ಮಾದರಿಗಳು ಮಾತ್ರವೇ ಈ ಕಂಪ್ಯಾಕ್ಟ್ ಎಸ್‌ಯುವಿ ವಿಭಾಗದಲ್ಲಿ ಅತಿ ಕಡಿಮೆ ಬೆಲೆಯಲ್ಲಿ ಉತ್ತಮ ಆಯ್ಕೆ ಪಡೆದುಕೊಂಡಿವೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ರೆನಾಲ್ಟ್ ಕಿಗರ್ ಮತ್ತು ನಿಸ್ಸಾನ್ ಹೊಸ ಮ್ಯಾಗ್ನೈಟ್ ಕಾರು ಒಂದೇ ಪ್ಲ್ಯಾಟ್‌ಫಾರ್ಮ್ ಅಭಿವೃದ್ದಿಗೊಳ್ಳುವುದರ ವಿಭಿನ್ನ ಗ್ರಾಹಕರನ್ನು ಸೆಳೆಯಲ್ಲಿ ಯಶಸ್ವಿಯಾಗಿದ್ದು, ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದೆ.

ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯಲಿದೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್ ಸೌಲಭ್ಯಗಳಿವೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಕಾರಿನ ಒಳಭಾಗದಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್ ಸೌಲಭ್ಯವಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಎಂಜಿನ್ ಮತ್ತು ಪರ್ಫಾಮೆನ್ಸ್

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಏಪ್ರಿಲ್ 1ರಿಂದ ಮತ್ತಷ್ಟು ದುಬಾರಿಯಾಗಲಿದೆ ರೆನಾಲ್ಟ್ ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ

ಈ ಮೂಲಕ ಹೊಸ ಕಿಗರ್ ಮಾದರಿಯು ಹ್ಯುಂಡೈ ವೆನ್ಯೂ, ಮಾರುತಿ ಸುಜುಕಿ ಬ್ರೆಝಾ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರು ಮಾದರಿಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಬಹುತೇಕ ವೆರಿಯೆಂಟ್‌ಗಳಲ್ಲಿ ಡ್ಯುಯಲ್ ಟೋನ್ ಬಣ್ಣಗಳ ಆಯ್ಕೆ ನೀಡಿರುವುದು ಆಯ್ಕೆಗೆ ಉತ್ತಮ ಎನ್ನಿಸಲಿದೆ.

More from DriveSpark

Article Published On: Tuesday, March 23, 2021, 17:32 [IST]
English summary
Renault Kiger Price Hike From 1st April 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+