ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ರೆನಾಲ್ಟ್ ಹೊಚ್ಚ ಹೊಸ ಕಿಗರ್ ಕಾರು ಮಾದರಿಯು ಬಿಡುಗಡೆಯ ನಂತರ ಮೊದಲ ಬಾರಿಗೆ ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ಆರಂಭಿಕ ಆವೃತ್ತಿಯ ಬೆಲೆ ಹೊರತುಪಡಿಸಿದ ಇನ್ನುಳಿದ ಆವೃತ್ತಿಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ರೆನಾಲ್ಟ್ ಕಂಪನಿಯು ಕಳೆದ ಫೆಬ್ರವರಿಯಲ್ಲಿ ಕಿಗರ್ ಕಾರು ಬಿಡುಗಡೆಯ ಸಂದರ್ಭದಲ್ಲೇ ಹೊಸ ಕಾರಿನ ಬೆಲೆಯನ್ನು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಹೆಚ್ಚಳ ಮಾಡುವುದಾಗಿ ಹೇಳಿಕೊಂಡಿತ್ತು. ಹೊಸ ಕಾರಿನ ಬೆಲೆಯನ್ನು ಆರಂಭಿಕವಾಗಿ ಆಕರ್ಷಕ ದರ ನಿಗದಿಪಡಿಸಿದ್ದ ಕಂಪನಿಯು ಇದೀಗ ಉತ್ಪಾದನಾ ವೆಚ್ಚ ನಿರ್ವಹಣೆಗಾಗಿ ಬೆಲೆ ಹೆಚ್ಚಳ ಮಾಡಿದ್ದು, ಹೊಸ ದರವನ್ನು ಸಹ ಪ್ರಕಟಗೊಳಿಸಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ಈ ಹಿಂದೆ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದ್ದ ಹೊಸ ಕಾರು ಇದೀಗ ರೂ. 5.45 ಲಕ್ಷದಿಂದ ರೂ. 9.75 ಲಕ್ಷ ಪಡೆದುಕೊಂಡಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಕಿಗರ್ ಆರ್‌ಎಕ್ಸ್ಇ ಆವೃತ್ತಿಯನ್ನು ಹೊರತುಪಡಿಸಿ ಇನ್ನುಳಿದ ಎಲ್ಲಾ ಆವೃತ್ತಿಗಳು ಬೆಲೆ ಹೆಚ್ಚಳ ಪಡೆದುಕೊಂಡಿದ್ದು, ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ.15 ಸಾವಿರದಿಂದ ರೂ.30 ಸಾವಿರ ತನಕ ಬೆಲೆ ಹೆಚ್ಚಳ ವಾಗಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಬೆಲೆ ಹೆಚ್ಚಳದ ನಂತರವೂ ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿದ್ದು, ಹೀಗಿರುವಾಗ ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾದರನ್ನು ಸಹ ಸೆಳೆಯುತ್ತಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ನಿಸ್ಸಾನ್ ಮ್ಯಾಗ್ನೈಟ್ ಮತ್ತು ರೆನಾಲ್ಟ್ ಕಿಗರ್ ಕಾರುಗಳು ಒಂದೇ ಪ್ಲ್ಯಾಟ್‌ಫಾರ್ಮ್, ಎಂಜಿನ್ ಮತ್ತು ಬೆಲೆ ಕೂಡಾ ಒಂದೇ ಮಾದರಿಯಲ್ಲಿದ್ದು, ವಿಭಿನ್ನವಾದ ವಿನ್ಯಾಸದೊಂದಿಗೆ ತಮ್ಮದೆ ಆದ ಜನಪ್ರಿಯತೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿವೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಿಡುಗಡೆಯ ನಂತರ ಮೊದಲ ಬಾರಿಗೆ ರೆನಾಲ್ಟ್ ಕಿಗರ್ ಬೆಲೆಯಲ್ಲಿ ಹೆಚ್ಚಳ

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

More from DriveSpark

Article Published On: Tuesday, May 4, 2021, 12:59 [IST]
English summary
Renault Kiger Price Hike Upto Rs 30,000. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+