ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಕಳೆದ ತಿಂಗಳು ಫೆಬ್ರವರಿ 15ರಂದು ಬಿಡುಗಡೆಯಾಗಿರುವ ರೆನಾಲ್ಟ್ ಹೊಚ್ಚ ಹೊಸ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಕಾರು ಬಿಡುಗಡೆ ಮೊದಲ ತಿಂಗಳಿನಲ್ಲಿ ಉತ್ತಮ ಬೇಡಿಕೆ ಪಡೆದುಕೊಂಡಿದೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಹೊಸ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳಲ್ಲೇ ಆಕರ್ಷಕ ಬೆಲೆಯೊಂದಿಗೆ ಗ್ರಾಹಕರನ್ನು ಸೆಳೆಯುತ್ತಿದ್ದು, ಕಾರು ವಿತರಣೆಯು ಕಳೆದ ವಾರವಷ್ಟೇ ಆರಂಭಗೊಂಡಿದ್ದರೂ ಹೊಸ ಕಾರಿನ ನೋಂದಣಿ ಪ್ರಕ್ರಿಯೆ ಕಳೆದ ತಿಂಗಳಿನಿಂದಲೇ ಆರಂಭವಾಗಿದೆ. ಮೊದಲ ತಿಂಗಳಿನಲ್ಲಿಯೇ 3,226 ಯುನಿಟ್ ಕಿಗರ್ ಕಾರುಗಳು ನೋಂದಣಿಯಾಗಿದ್ದು, ರೆನಾಲ್ಟ್ ಕಂಪನಿಯು ಬೇಡಿಕೆ ಆಧಾರದ ವಿತರಣೆ ಪ್ರಕ್ರಿಯೆ ಕೈಗೊಂಡಿದೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಸದ್ಯ ಮಾರುಕಟ್ಟೆಯಲ್ಲಿರುವ ಕಿಗರ್ ಕಾರಿನ ಪ್ರತಿ ಸ್ಪರ್ಧಿ ಕಾರುಗಳಲ್ಲಿ ನಿಸ್ಸಾನ್ ಮ್ಯಾಗ್ನೈಟ್ ಹೊರತುಪಡಿಸಿ ಬಹುತೇಕ ಕಾರುಗಳು ಆರಂಭಿಕವಾಗಿ ರೂ. 7 ಲಕ್ಷದಿಂದ ಟಾಪ್ ಎಂಡ್ ಮಾದರಿಗಳು 13 ಲಕ್ಷ ಬೆಲೆ ಅಂತದಲ್ಲಿ ಮಾರಾಟವಾಗುತ್ತಿವೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಹೀಗಿರುವಾಗ ಪ್ರತಿಸ್ಪರ್ಧಿ ಕಾರುಗಳಿಗೆ ಸಮನಾಗಿ ಹಲವಾರು ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿರುವ ರೆನಾಲ್ಟ್ ಕಿಗರ್ ಕಾರು ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಜೊತೆಗೆ ಹ್ಯಾಚ್‌ಬ್ಯಾಕ್ ಕಾರು ಖರೀದಿದಾದರನ್ನು ಸಹ ಸೆಳೆಯುತ್ತಿದೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಕಿಗರ್ ಕಾರು ಆರ್‌ಎಕ್ಸ್ಇ, ಆರ್‌ಎಕ್ಸ್ಎಲ್, ಆರ್‌ಎಕ್ಸ್‌ಟಿ ಮತ್ತು ಆರ್‌ಎಕ್ಸ್‌ಜೆಡ್ ಎನ್ನುವ ನಾಲ್ಕು ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹೆಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 5.45 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 9.55 ಲಕ್ಷ ಬೆಲೆ ಹೊಂದಿದೆ. ಕಿಗರ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಬೆಸ್ಟ್ ಇನ್ ಕ್ಲಾಸ್ ಫೀಚರ್ಸ್ ಹೊಂದಿದ್ದು, ಬೆಲೆ ಕಾರಣಕ್ಕಾಗಿಯೇ ಹಲವಾರು ಕಾರುಗಳ ಮಾರಾಟ ಪ್ರಮಾಣಕ್ಕಿಂತಲೂ ಕಿಗರ್ ಮುಂದಿದೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಸದ್ಯ ಮಾರುತಿ ಬ್ರೆಝಾ ಅಗ್ರಸ್ಥಾನದಲ್ಲಿದ್ದು, ತದನಂತರ ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್ ಕಾರು ಮಾದರಿಗಳಿದ್ದು, ಐದನೇ ಸ್ಥಾನದಲ್ಲಿರುವ ಕಿಗರ್ ಕಾರು ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಸೇರಿದಂತೆ ಪ್ರಮುಖ ಕಾರುಗಳ ಹಿಂದಿಕ್ಕಿದೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಇನ್ನು ಕಿಗರ್ ಕಾರು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತಿದೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಹಾಗೆಯೇ ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ. ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಹೊಸ ಕಾರಿನಲ್ಲಿ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಇದರೊಂದಿಗೆ ಹೊಸ ಕಾರಿನಲ್ಲಿ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5-ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌‌ರೂಫ್ ಸೌಲಭ್ಯಗಳಿವೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಕ್ಸ್‌ಯುವಿ 300 ಮತ್ತು ಇಕೋಸ್ಪೋರ್ಟ್ ಹಿಂದಿಕ್ಕಿದ ರೆನಾಲ್ಟ್ ಕಿಗರ್

ಎಂಜಿನ್ ಮತ್ತು ಪರ್ಫಾಮೆನ್ಸ್

ಕಿಗರ್ ಕಾರಿನಲ್ಲಿ 1.0-ಲೀಟರ್ ಸಾಮರ್ಥ್ಯದ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.

More from DriveSpark

Article Published On: Saturday, March 6, 2021, 20:55 [IST]
English summary
Renault Kiger Compact-SUV Sales Figures For February 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+