Just In
- 1 hr ago
ಅನಾವರಣವಾಯ್ತು ಫೋಕ್ಸ್ವ್ಯಾಗನ್ ಗಾಲ್ಫ್ ಜಿಟಿಐ ಕ್ಲಬ್ಸ್ಪೋರ್ಟ್ 45 ಕಾರು
- 4 hrs ago
35 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಉಚಿತ ಲಸಿಕೆ ನೀಡಲು ಮುಂದಾದ ಟಿವಿಎಸ್ ಕಂಪನಿ
- 6 hrs ago
ವಾರದ ಪ್ರಮುಖ ಸುದ್ದಿ: ಏರ್ಬ್ಯಾಗ್ ಕಡ್ಡಾಯ, ಬಿಡುಗಡೆಗೆ ಸಜ್ಜಾದ ಸಿಟ್ರನ್, ಟೊಯೊಟಾ ನೌಕರರ ಮುಷ್ಕರ ಅಂತ್ಯ!
- 16 hrs ago
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
Don't Miss!
- News
ಪಶ್ಚಿಮ ಬಂಗಾಳ ಕಾಶ್ಮೀರವಾದರೆ ತಪ್ಪೇನು ಹೇಳಿ; ಸುವೇಂದುಗೆ ಒಮರ್ ತಿರುಗೇಟು
- Movies
ದೀದಿ ಸಾಮ್ರಾಜ್ಯದಲ್ಲಿ ಕಮಲದ ಕೈ ಹಿಡಿದ ಬಾಲಿವುಡ್ ನಟ ಮಿಥುನ್ ಚಕ್ರವರ್ತಿ
- Finance
ದಕ್ಷಿಣ ಭಾರತದ ಅತಿದೊಡ್ಡ ಆಭರಣ ರೀಟೈಲರ್ ಮೇಲೆ ಐಟಿ ದಾಳಿ
- Sports
ಐಪಿಎಲ್ 2021: ಅಧಿಕೃತ ವೇಳಾಪಟ್ಟಿ ಬಿಡುಗಡೆ, ಮೊದಲ ಪಂದ್ಯದಲ್ಲಿ ಆರ್ಸಿಬಿಗೆ ಮುಂಬೈ ಎದುರಾಳಿ
- Lifestyle
"ವಾರ ಭವಿಷ್ಯ: ಈ ವಾರ 12 ರಾಶಿಗಳ ರಾಶಿಫಲ ಹೇಗಿದೆ?"
- Education
Mandya District Court Recruitment 2021: 10 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಡೀಲರ್ಸ್ ಮಟ್ಟದಲ್ಲಿ ರೆನಾಲ್ಟ್ ಕಿಗರ್ ಕಾರು ಖರೀದಿಗೆ ಬುಕ್ಕಿಂಗ್ ಶುರು
ಕಿಗರ್ ಕಂಪಾಕ್ಟ್ ಎಸ್‌ಯುವಿಯನ್ನು ಅನಾವರಣಗೊಳಿಸಿರುವ ರೆನಾಲ್ಟ್ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡುವ ಸಿದ್ದತೆಯಲ್ಲಿದ್ದು, ಅಧಿಕೃತ ಬುಕ್ಕಿಂಗ್ ಆರಂಭಕ್ಕೂ ಮುನ್ನವೇ ರೆನಾಲ್ಟ್ ಪ್ರಮುಖ ಡೀಲರ್ಸ್‌ಗಳಲ್ಲಿ ಗ್ರಾಹಕರು ಮುಂಗಡ ಪಾವತಿಸಿ ಹೊಸ ಕಾರು ಖರೀದಿಗೆ ಹೆಸರು ನೋಂದಾಯಿಸುತ್ತಿರುವ ಮಾಹಿತಿ ಲಭ್ಯವಾಗಿದೆ.

ರೆನಾಲ್ಟ್ ಕಂಪನಿಯು ಭಾರತದಲ್ಲಿ ಕಿಗರ್ ಮೂಲಕ ಪ್ರತಿ ತಿಂಗಳು 5 ಸಾವಿರದಿಂದ 6 ಸಾವಿರ ಯುನಿಟ್ ಮಾರಾಟ ಗುರಿಹೊಂದಿದ್ದು, ನಿಸ್ಸಾನ್ ಮ್ಯಾಗ್ನೈಟ್ ಕಾರು ಮಾದರಿಯಲ್ಲೇ ಕಿಗರ್ ಕಾರು ಕೂಡಾ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಮೂಲಕ ಗ್ರಾಹಕರನ್ನು ಸೆಳೆಯಲಿದೆ. ಕಿಗರ್ ಹೊಸ ಕಾರು ಮಾದರಿಯು ಸಿಎಂಎಫ್ಎ ಪ್ಲಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಂಡಿದ್ದು, ತಾಂತ್ರಿಕವಾಗಿ ಬಹುತೇಕ ಅಂಶಗಳು ಒಂದೇ ಆಗಿರುವ ಮ್ಯಾಗ್ನೈಟ್ ಕಾರು ಮಾದರಿಯಲ್ಲೇ ಕಿಗರ್ ಕೂಡಾ ಉತ್ತಮ ಕಾರು ಮಾದರಿಯಾಗಲಿದೆ.

ಹೊಸ ಕಾರುಗಳ ಅಭಿವೃದ್ದಿಗಾಗಿ ಸಿಎಂಎಫ್ಎ ಪ್ಲಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಬಳಕೆ ಮಾಡಿಕೊಳ್ಳುತ್ತಿರುವ ರೆನಾಲ್ಟ್ ಮತ್ತು ನಿಸ್ಸಾನ್ ಕಂಪನಿಗಳು ಕಿಗರ್ ಮತ್ತು ಮ್ಯಾಗ್ನೈಟ್ ಕಾರುಗಳನ್ನು ಒಂದೇ ಪ್ಲ್ಯಾಟ್‌ಫಾರ್ಮ್‌ನಲ್ಲಿ ಅಭಿವೃದ್ದಿಪಡಿಸಿದ್ದರೂ ವಿಭಿನ್ನವಾದ ವಿನ್ಯಾಸದೊಂದಿಗೆ ಗ್ರಾಹಕರನ್ನು ಸೆಳೆಯಲಿವೆ.

ಸದ್ಯ ಮ್ಯಾಗ್ನೈಟ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 5.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 9.35 ಲಕ್ಷ ಬೆಲೆ ಹೊಂದಿದ್ದು, ರೆನಾಲ್ಟ್ ಕಿಗರ್ ಕಾರು ಮಾದರಿಯು ಕೂಡಾ ಮಾಗ್ನೈಟ್ ಕಾರು ಮಾದರಿಯಲ್ಲೇ ತಾಂತ್ರಿಕ ಅಂಶಗಳು, ಎಂಜಿನ್ ಆಯ್ಕೆಯೊಂದಿಗೆ ಬೆಲೆಯಲ್ಲಿ ಗ್ರಾಹಕರನ್ನು ಸೆಳೆಯಲಿದೆ.

ರೆನಾಲ್ಟ್ ಕಿಗರ್ ಕಾರು ಮಾದರಿಯು ಮ್ಯಾಗ್ನೈಟ್ ಕಾರು ಮಾದರಿಯಲ್ಲೇ ಆರಂಭದ 1 ತಿಂಗಳ ಅವಧಿಯಲ್ಲಿ ಬುಕ್ಕಿಂಗ್ ಮಾಡುವ ಗ್ರಾಹಕರಿಗೆ ಆರಂಭಿಕವಾಗಿ ರೂ. 5 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯನ್ನು 9 ಲಕ್ಷ ಬೆಲೆಗೆ ಮಾರಾಟ ಮಾಡುವ ಸಾಧ್ಯತೆಗಳಿದ್ದು, 1 ತಿಂಗಳ ನಂತರ ಮತ್ತೆ ಬೆಲೆ ಹೆಚ್ಚಳ ಮಾಡಬಹುದಾಗಿದೆ. ಬೆಲೆ ಹೆಚ್ಚಳ ಮಾಡಿದರೂ ವೆರಿಯೆಂಟ್‌ಗಳಿಗೆ ಅನುಗುಣವಾಗಿ ರೂ. 10 ಸಾವಿರದಿಂದ ರೂ. 30 ಸಾವಿರ ತನಕ ಹೆಚ್ಚಳ ಮಾಡಬಹುದಾಗಿದ್ದು, ಬೆಲೆ ಹೆಚ್ಚಳದ ನಂತರ ಕಿಗರ್ ಕಾರು ಪ್ರತಿಸ್ಪರ್ಧಿ ಕಾರುಗಳ ಬೆಲೆಗಿಂತಲೂ ಸಾಕಷ್ಟು ಕಡಿಮೆಯಿರಲಿದೆ.

ಸಬ್ ಫೋರ್ ಮೀಟರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಾಗಿರುವ ಕಿಗರ್ ಆವೃತ್ತಿಯು ಆಕರ್ಷಕವಾದ ಬ್ಯಾನೆಟ್, ಹನಿಕೊಂಬ್ ಆಕಾರದಲ್ಲಿರುವ ಗ್ರಿಲ್ ಕ್ರೋಮ್, ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್ ಸೆಟ್ಅಪ್, ಇಳಿಜಾರು ಆಕಾರದಲ್ಲಿರುವ ರೂಫ್‌ರೈಲ್ಸ್ ಸೌಲಭ್ಯಗಳೊಂದಿಗೆ ಎಸ್‌ಯುವಿ ಕೂಪೆ ಮಾದರಿಯಲ್ಲಿ ಗಮನಸೆಳೆಯುತ್ತದೆ.

ಹೊಸ ಕಿಗರ್ ಕಾರಿನಲ್ಲಿ ಬ್ಲ್ಯಾಕ್ ಔಟ್ ಹೊಂದಿರುವ ಸಿ ಪಿಲ್ಲರ್, ಸ್ಪೋಟಿಯಾಗಿರುವ ಸ್ಪಾಯ್ಲರ್, ಸಿ ಆಕಾರದ ಎಲ್ಇಡಿ ಟೈಲ್ ಲೆಟ್ಸ್, ಫ್ಲಕ್ಸ್ ಅಲ್ಯೂಮಿನಿಯಂ ಸ್ಕಿಡ್ ಪ್ಲೇಟ್, ತೀಕ್ಷ್ಣವಾದ ಹಿಂಭಾಗದ ವಿಂಡ್‌ಸ್ಕ್ರೀನ್, 16 ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಹ್, 205 ಎಂಎಂ ಗ್ರೌಂಡ್ ಕ್ಲಿಯೆರೆನ್ಸ್ ಹೊಂದಿದೆ.

ಹೊಸ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವುದು ಪ್ರತಿಸ್ಪರ್ಧಿ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲು ನೆರವಾಗಲಿದ್ದು, ಕಿಗರ್ ಕಾರಿನಲ್ಲಿ ಗ್ರೆ ಲೆಯರ್ ಹೊಂದಿರುವ ಡ್ಯಾಶ್‌ಬೋರ್ಡ್ ಜೋಡಣೆ ಮಾಡಲಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹಾಗೆಯೇ ಆ್ಯಪಲ್ ಕಾರ್‌ಪ್ಲೇ ಮತ್ತು ಅಂಡ್ರಾಯಿಡ್ ಆಟೋ ಸರ್ಪೊಟ್ ಮಾಡುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, 7 ಇಂಚಿನ ಟಿಎಫ್‌ಟಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಡಿಸ್‌ಪ್ಲೇ, ಸೆಂಟ್ರಲ್ ಎಸಿ ವೆಂಟ್ಸ್, ಇನ್ಪೋಟೈನ್‌ಮೆಂಟ್ ಸಿಸ್ಟಂ ನಿಯಂತ್ರಣ ಹೊಂದಿರುವ ಸ್ಟ್ರೀರಿಂಗ್ ವೀಲ್ಹ್ ಸೌಲಭ್ಯವಿದೆ.

ಜೊತೆಗೆ ಸೆಂಟರ್ ಕನ್ಸೊಲ್, ಆರ್ಮರೆಸ್ಟ್, ವಾಯ್ಸ್ ಕಮಾಂಡ್ಸ್, 10.5 -ಲೀಟರ್ ಸಾಮರ್ಥ್ಯದ ಗ್ಲೊ ಬಾಕ್ಸ್, ಆರ್ಮ್ ರೆಸ್ಟ್ ಕೆಳಭಾಗದಲ್ಲಿ 7.5 ಲೀಟರ್ ಸಾಮರ್ಥ್ಯದ ಸ್ಟೋರೆಜ್ ಬಾಕ್ಸ್ ನೀಡಲಾಗಿದ್ದು, ಕಿ ಲೆಸ್ ಎಂಟ್ರಿ, ಪುಶ್ ಬಟನ್ ಆನ್/ಆಫ್, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, ಆ್ಯಂಬಿಯೆಂಟ್ ಲೈಟಿಂಗ್ಸ್, 3ಡಿ ಸೌಂಡ್ ಸಿಸ್ಟಂ, ಪಿಎಂ 2.5 ಏರ್ ಫಿಲ್ಟರ್, ವೈರ್‌ಲೆಸ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೌಲಭ್ಯಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ರೆನಾಲ್ಟ್ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಮಾದರಿಯ ಜೋಡಣೆ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಸಾಮಾನ್ಯ ಪೆಟ್ರೋಲ್ ಮಾದರಿಯು 72 ಬಿಎಚ್‌ಪಿ ಮತ್ತು ಟರ್ಬೊ ಮಾದರಿಯು 100 ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿದೆ.